ಕಲಬುರಗಿಯಲ್ಲಿ ಸೆಪ್ಟೆಂಬರ್ 2ರಂದು ನೇರ ಸಂದರ್ಶನ
ಕಲಬುರಗಿ, ಆಗಸ್ಟ್ 31; ಕಲಬುರಗಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್ 2ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 26 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್ 2ರ ಶುಕ್ರವಾರ ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಈ ಕುರಿತು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಪ್ರತಿಷ್ಠಿತ ಕರೂರ ವೈಶ್ಯ ಬ್ಯಾಂಕ್‍ರವರು ಬ್ರ್ಯಾಂಚ್ ಸರ್ವೀಸ್ ಆಫೀಸರ್ ಹುದ್ದೆಗೆ ಸಂದರ್ಶನ ನಡೆಸುತ್ತಿದ್ದಾರೆ. ಯಾವುದೇ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ವಯೋಮಿತಿ 26 ವರ್ಷಗಳು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ 08472-274846.
ಅಗ್ನಿಪಥ್ ನೇಮಕಾತಿ; ಭಾರತೀಯ ಸೇನಾಪಡೆಗಳಿಗೆ ಅಗ್ನಿಪಥ್ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಸೆಪ್ಟಂಬರ್ 1 ರಿಂದ 20 ರವರೆಗೆ ನೇಮಕಾತಿ ನಡೆಸಲಾಗುತ್ತದೆ.
ನೇಮಕಾತಿಯ ವಿವರಗಳನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ನೋಡಬಹುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಹಾಕಿ; ಶಿವಮೊಗ್ಗ ನಗರದ ಸಿದ್ಧಾರ್ಥ ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿಎ, ಬಿ.ಇಡಿ (ಹಿಂದಿ ಭಾಷೆ ಐಚ್ಚಿಕ ವಿಷಯ) ವಿದ್ಯಾರ್ಹತೆಯುಳ್ಳ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925ಗೆ ಕರೆ ಮಾಡಬಹುದಾಗಿದೆ.
ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆ ಅರ್ಜಿ; ಪೊಲೀಸ್ ಅಧೀಕ್ಷಕರು ಹಾಗೂ ಗೃಹರಕ್ಷಕ ಆಯ್ಕೆ ಸಮಿತಿಯಿಂದ ಧಾರವಾಡ ಜಿಲ್ಲೆಯ ವಿವಧ ಘಟಕಗಳಲ್ಲಿ ಖಾಲಿ ಇರುವ 170 ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೋಂದಣಿಗಾಗಿ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಚೇರಿ, ಡಿ. ಎ. ಆರ್. ಪೊಲೀಸ್ ಹೆಡ್ ಕ್ವಾರ್ಟಸ್ ಆವರಣ, ಧಾರವಾಡ ಇಲ್ಲಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 9ರೊಳಗೆ ಸಲ್ಲಿಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0836-2442496ಗೆ ಕರೆ ಮಾಡಬಹುದಾಗಿದೆ. ಸಹಾಯಕ ಆಡಳಿತಾಧಿಕಾರಿಗಳು, ಪೊಲೀಸ್ ಅಧೀಕ್ಷಕರ ಕಛೇರಿ, ಧಾರವಾಡ 0836-2233205 ಸಂಪರ್ಕಿಸಬಹುದು.
ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ; ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ನಡೆಸುತ್ತಿದೆ.
ಪರೀಕ್ಷೆಯು ನವೆಂಬರ್ 2022ರಲ್ಲಿ ನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರು.
ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520/ 9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದಾಗಿದೆ.











Click it and Unblock the Notifications