ಕೋಲಾರ; ಜು. 28ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕೋಲಾರ, ಜುಲೈ 24 : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಕೋಲಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 28ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮೂಲಕ ಹುದ್ದೆಗಳು ಭರ್ತಿಯಾಗುವ ತನಕ ಕೆಲಸ ನಿರ್ವಹಣೆ ಮಾಡಬೇಕಿದೆ.

ಶುಶ್ರೂಷಕರು 95 ಹುದ್ದೆ, ಪ್ರಯೋಗ ಶಾಲಾ ತಂತ್ರಜ್ಞರು 12 ಹುದ್ದೆ ಮತ್ತು ಫಾರ್ಮಾಸಿಸ್ಟ್ 11 ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

Walk In Interview In Kolar On July 28

ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಬಯೋಡೆಟ, ವಿದ್ಯಾರ್ಹತೆಯ ಮೂಲ ಮತ್ತು ಝೆರಾಕ್ಸ್ ಪ್ರತಿಗಳ ಜೊತೆ ಜುಲೈ 28ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೋಲಾರ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+