ಕೊಪ್ಪಳದಲ್ಲಿ ಏಪ್ರಿಲ್ 3ರಂದು ವಾಕ್ ಇನ್ ಸಂದರ್ಶನ

ಕೊಪ್ಪಳ, ಮಾರ್ಚ್ 29: ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 3ರಂದು ವಾಕ್ ಇನ್ ಸಂದರ್ಶನವನ್ನು ಆಯೋಜಿಸಲಾಗಿದೆ. 18 ರಿಂದ 32 ವರ್ಷದವರೆಗಿನ ನಿರುದ್ಯೋಗಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಬೆಳಗ್ಗೆ 10.30ಕ್ಕೆ ವಾಕ್ ಇನ್ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.

ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಇಂಡಿಯನ್ ಮನಿ ಪ್ರೈ.ಲಿ ಹುಬ್ಬಳ್ಳಿ ಅವರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಿದ್ದಾರೆ.

Walk In Interview In Koppal On April 3

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪಿ.ಯು.ಸಿ., ಡಿಪ್ಲೋಮಾ ಮತ್ತು ಯಾವುದೇ ಪದವೀಧರರು (ಬಿ.ಇ ಹೊರತುಪಡಿಸಿ) ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ 18 ರಿಂದ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿ, 1 ರಿಂದ 3 ಬಯೋಡಾಟಾ ಪ್ರತಿಗಳು ಹಾಗೂ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08539-220859, 9353515518 ಹಾಗೂ 6364397640.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+