ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಜೂ.28 ರಂದು ನೇರ ಸಂದರ್ಶನ, ಇತರ ಉದ್ಯೋಗ ಮಾಹಿತಿ

|
Google Oneindia Kannada News

ಕೊಪ್ಪಳ , ಜೂನ್ 25; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ಜೂನ್ 28ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಜೂನ್ 28ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಅಗ್ನಿಪಥ್ ಯೋಜನೆಯಡಿ ವಾಯುಸೇನೆಗೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?ಅಗ್ನಿಪಥ್ ಯೋಜನೆಯಡಿ ವಾಯುಸೇನೆಗೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?

ಹೊಸಪೇಟೆಯ ಚೈತನ್ಯಾ ಇಂಡಿಯಾ ಫೀನ್ ಕ್ರೆಡಿಟ್ ಪ್ರೈ.ಲಿ ಕಂಪನಿಯು ಭಾಗವಹಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ನೇರ ಸಂದರ್ಶನದಲ್ಲಿ 18 ರಿಂದ 29 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವವರು 2 ಬಯೋಡೆಟಾ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವೀಧರರು ಭಾಗವಹಿಸಬಹುದು.

ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ

ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-220859, 9742922949, 9606921057ಗೆ ಸಂಪರ್ಕಿಸಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡ

ಕೃಷಿ ವಿಶ್ವವಿದ್ಯಾಲಯ ಧಾರವಾಡ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ನಗರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾತ್ಕಾಲಿಕವಾಗಿ ಬೋಧನೆ ಮಾಡಲು ಬಿಎಸ್‍ಸಿ, ಬಿಎ, ಬಿಎಡ್ ವಿದ್ಯಾರ್ಹತೆ ಹೊಂದಿದ 2 ರಿಂದ 5 ವರ್ಷ ಸೇವಾನುಭವ ಹೊಂದಿದ ಅರ್ಹ ಅಭ್ಯರ್ಥಿಗಳಿಗೆ ಕೃಷಿ ನಗರದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಜೂನ್ 30 ರಂದು ಮುಂಜಾನೆ 10.30ಕ್ಕೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ 8722640454 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಉಚಿತ ತರಬೇತಿಗೆ ಅರ್ಜಿ ಹಾಕಿ

ಉಚಿತ ತರಬೇತಿಗೆ ಅರ್ಜಿ ಹಾಕಿ

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐಐಎಂ ಬೆಂಗಳೂರಿನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನ ಪದವೀಧರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಜುಲೈ 18 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಡಿ.ಸಿ. ಕಂಪೌಂಡ, ಧಾರವಾಡ ಇವರ ಕಚೇರಿಗೆ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯಧನಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ.2 ಲಕ್ಷಗಳವರಗೆ ಸಾಲ ಸೌಲಭ್ಯವನ್ನು ಶೇ.4ರಷ್ಟು ಬಡ್ಡಿದರದಲ್ಲಿ ಒದಗಿಸಲಾಗುತ್ತದೆ.

ಘಟಕ ವೆಚ್ಚ ರೂ.50 ಸಾವಿರಗಳ ಸಾಲಕ್ಕೆ ಸಹಾಯಧನ ಶೇ.30ರಷ್ಟು, ರೂ.50 ಸಾವಿರದಿಂದ 1ಲಕ್ಷದವರೆಗಿನ ಸಾಲಕ್ಕೆ ಶೇ.20ರಷ್ಟು ಸಹಾಯಧನ, ರೂ.1ಲಕ್ಷದಿಂದ 2ಲಕ್ಷದವರೆಗಿನ ಸಾಲಕ್ಕೆ ಶೇ.15ರಷ್ಟು ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿ ಮತ್ತು ಉಪಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರಗಳು ಪಟ್ಟಣ ಪ್ರದೇಶದವರಿಗೆ ರೂ.1.20ಲಕ್ಷ ಒಳಗಿರಬೇಕು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅರ್ಜಿದಾರರು http://suvidha.karnataka.gov.in ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ http://kaad.karnataka.gov.in ಭೇಟಿ ನೀಡಿ ಮಾಹಿತಿ ಪಡೆಯಬಹುದು. ದೂರವಾಣಿ ಸಂಖ್ಯೆ 080-22374832 ಮತ್ತು 9606066389ಗೆ ಸಂಪರ್ಕಿಸಬಹುದು.

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಜಿಲ್ಲೆಗೆ ಒಟ್ಟು ಭೌತಿಕ 32 ವರ್ಗವಾರು ಗುರಿಯನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಭೌತಿಕ 2, ದಮನಿತ ಮಹಿಳೆಯರಿಗೆ 4 ಮತ್ತು ಹೆಚ್. ಐ. ವಿ. ಸೋಂಕಿತ ಮಹಿಳೆಯರಿಗೆ ಭೌತಿಕ 4 ಗುರಿಯನ್ನು ನಿಗದಿಪಡಿಸಿದ್ದು, ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಬ್ಯಾಂಕುಗಳ ಸಹಯೋಗದೊಂದಿಗೆ ಸಾಲದ ವ್ಯವಸ್ಥೆ ಹಾಗೂ ನಿಗಮದಿಂದ ಸಹಾಯಧನವನ್ನು ನೀಡಲಾಗುವುದು. 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಜುಲೈ 6ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಾಖಲಾತಿಗಳೊಂದಿಗೆ ಜೂ.25 ಸಂಜೆ 5.30 ರೊಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-296268ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ.

English summary
Koppal district employment exchange office organized walk in interview on June 28th, 2022. 18 to 39 age group candidates can attend walk in interview without any registration fee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X