Breaking; ಮೇ 12ರಂದು ಕೊಪ್ಪಳದಲ್ಲಿ ನೇರ ಸಂದರ್ಶನ

ಕೊಪ್ಪಳ, ಮೇ 10; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ 12ರ ಗುರುವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 20 ರಿಂದ 27 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಗಂಗಾವತಿಯ ಸ್ಪಂದನಾ ಸ್ಫೂರ್ತಿ ಫೈನಾನ್ಷಿಯಲ್ ಲಿ. ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 20 ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Walk In Interview In Koppal On May 12th

ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7676151836ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಲೈಬ್ರೆರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನ; ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 40 ರಷ್ಟು ಅಂಕಗಳಿಂದ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ.35 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಲೈಬ್ರೆರಿ ಸೈನ್ಸ್ ತರಬೇತಿಗೆ ಅರ್ಜಿ ಕರೆಯಲಾಗಿದೆ.

ಕರ್ನಾಟಕ ಸರ್ಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ನಗರ ಕೇಂದ್ರ ಗ್ರಂಥಾಲಯ, ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಸರ್ಟಿಫಿಕೇಟ್ ಇನ್ ಲೈಬ್ರೆರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಇಲಾಖೆಯ 'ಡಿ' ದರ್ಜೆಯ ಗ್ರಂಥಾಲಯ ಸಹವರ್ತಿಗಳು ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟ ಉಪ ನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು.

ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು ರೂ. 20 ಅರ್ಜಿ ಶುಲ್ಕವನ್ನು ನೀಡಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಮೇ 25ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು 575003 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0824-2425873.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+