ಮೈಸೂರು; ಶುಶ್ರೂಷಕರ ಹುದ್ದೆಗೆ ಜೂನ್ 17ರಂದು ನೇರ ಸಂದರ್ಶನ
ಮೈಸೂರು, ಜೂನ್ 13; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮೈಸೂರು ಶುಶ್ರೂಷಕರ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಜೂನ್ 17ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಅಧೀನ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲು ಶುಶ್ರೂಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ 30/9/2021 ತನಕ ಅಥವ ನೇರ ನೇಮಕಾತಿ ಮೂಲಕ ಹುದ್ದೆಗಳು ಭರ್ತಿಯಾಗುವ ತನಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಮೆರಿಟ್ ಕಂ ರೊಸ್ಟರ್ ಆಧಾರದಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು 17/6/2021 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಹಿಂದೆ ಇದೇ ಉದ್ದೇಶಕ್ಕಾಗಿ 4/6/2021ರಂದು ಸಂದರ್ಶನಕ್ಕೆ ಹಾಜರಾಗಿದ್ದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದರಿಂದ ಈ ಸಂದರ್ಶನಕ್ಕೆ ಹಾಜರಾಗುವಂತಿಲ್ಲ.

ಸಂದರ್ಶನ ನಡೆಯುವ ವಿಳಾಸ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್. ಪಿ. ಸಿ. ಆಸ್ಪತ್ರೆ ಆವರಣ, ಮೈಸೂರು.
ಸಂದರ್ಶನಕ್ಕೆ ಬರುವಾಗ ಮೂಲ ಅಂಕಪಟ್ಟಿಗಳು/ ಎಲ್ಲಾ ಪ್ರಮಾಣಪತ್ರಗಳ ಜೊತೆ ವಿಳಾಸ ಮತ್ತು ಗುರುತಿನ ಚೀಟಿ ಹಾಗೂ ಎಲ್ಲವುಗಳ ಒಂದು ಝೆರಾಕ್ಸ್ ಪ್ರತಿಯನ್ನು ತರಬೇಕು.
ಎಲ್ಲಾ ಹುದ್ದೆಗಳಿ ತಾತ್ಕಾಲಿಕವಾಗಿದ್ದು, ಮುಂದಿನ ಆರು ತಿಂಗಳು ಅಥವ ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿಯಾಗುವ ತನಕ ಮಾತ್ರ ನೇಮಕಾತಿ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2529205.











Click it and Unblock the Notifications