ಶಿವಮೊಗ್ಗ: ಗುತ್ತಿಗೆ ಆಧಾರದ ನೇಮಕಾತಿ, ಜುಲೈ 11ರಂದು ನೇರ ಸಂದರ್ಶನ
ಶಿವಮೊಗ್ಗ, ಜುಲೈ 08: ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದ್ದು, ಜುಲೈ 11ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್. ಹೆಚ್. ಎಂ & ಎನ್‍ಯುಹೆಚ್‍ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಖಾಲಿ ಹುದ್ದೆಗಳ ವಿವರ: ಇಎನ್‍ಟಿ ಸರ್ಜನ್ 1, ಅರವಳಿಕೆ ತಜ್ಞರು 2, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು 1, ವೈದ್ಯರು 24, ನೇತ್ರ ಸಹಾಯಕರು 2, ಆಡಿಯೋಮೆಟ್ರಿಕ್ ಅಸಿಸ್ಟೆಂಟ್ 1, ಶ್ರವಣದೋಷವುಳ್ಳ ಮಕ್ಕಳ ಬೋಧಕರು 1, ತಾಲೂಕು ಆಶಾ ಮೇಲ್ವಿಚಾರಕರು 1, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು (ಕಿ.ಮ.ಆ.ಸ) ಎನ್‍ಹೆಚ್‍ಎಂ-2 ಮತ್ತು ಎನ್‍ಯುಹೆಚ್‍ಎಂ 1, ಶುಶ್ರೂಷಕಿಯರು (ಶುಶ್ರೂಷಣಾಧಿಕಾರಿಗಳು ಮಹಿಳೆಯರು) 24, ಕಿರಿಯ ಪುರುಷ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು) 1, ಡಿಇಐಸಿ ಮ್ಯಾನೇಜರ್ 1 ಹುದ್ದೆಗಳು.
ತಜ್ಞ ವೈದ್ಯರು ಮತ್ತು ವೈದ್ಯರು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡಬೇಕು. ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು ಹಾಗೂ ಸರ್ಕಾರದ ನಿಯಮಾವಳಿಯಂತೆ ಎನ್.ಹೆಚ್.ಎಂ/ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು. ಹುದ್ದೆಗಳನ್ನು ಕಡಿತಗೊಳಿಸುವುದು ಮತ್ತು ಹೆಚ್ಚಿಸುವುದು ಹಾಗೂ ಅರ್ಜಿಯನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ.
ಎನ್. ಹೆಚ್. ಎಂ/ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ನೇಮಕಾತಿಯ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಪಾಲಿಕೆ/ ಸಂಬಂಧಿಸಿದ ಪಂಚಾಯತ್‍ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ದಿನಾಂಕ 11/07/2024ರಂದು ಬೆಳಗ್ಗೆ 10.30ರಿಂದ ಮಾಧ್ಯಾಹ್ನ 1.30ರ ವರೆಗೆ ಅರ್ಜಿ ನಮೂನೆಗಳನ್ನು ಎನ್‍ಹೆಚ್‍ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‍ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು.
ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ನಡೆಸಿ, ಸಂಜೆ 5.30 ರವರೆಗೆ ನೇರ ಸಂದರ್ಶನ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200337 ಅನ್ನು ಸಂಪರ್ಕಿಸಬಹುದು.












Click it and Unblock the Notifications