ಶಿವಮೊಗ್ಗದಲ್ಲಿ ಅಕ್ಟೋಬರ್ 13ರಂದು ನೇರ ಸಂದರ್ಶನ

ಬೆಂಗಳೂರು, ಅಕ್ಟೋಬರ್ 10; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 13ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆರಂಭವಾಗಲಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.

ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

Walk In Interview In Shivamogga On October 13th

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಳ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08182-255293/ 9380663606/ 9108235132.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ; ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ಭರ್ತಿಗೆ ಅಕ್ಟೋಬರ್ 17ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಪಶುವೈದ್ಯಕೀಯ ಸೂಕ್ಷ್ಮಜೀವಾಣು ಶಾಸ್ತ್ರ ವಿಭಾಗ ಹುದ್ದೆ 1, ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗ ಹುದ್ದೆ1, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರವಿಭಾಗದ ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ಹುದ್ದೆ 1 ಭರ್ತಿ ಮಾಡಲಾಗುತ್ತಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯನ್ವಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನ 57000 ರೂ. ನಿಗದಿ ಮಾಡಲಾಗಿದೆ.

ನೇರ ಸಂದರ್ಶನ; ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಅಕ್ಟೋಬರ್ 17ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್‌ಸೈಟ್‌ www.kvafsu.edu.in ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+