• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಸೆಪ್ಟೆಂಬರ್ 15ರಂದು ನೇರ ಸಂದರ್ಶನ

|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 14; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 15ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟಂಬರ್ 15ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಪ್ರತಿಷ್ಟಿತ ಖಾಸಗಿ ಕಂಪನಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲಿವೆ.

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ನೇರ ಸಂದರ್ಶನದ ಮೂಲಕ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಎಸ್‍ಎಸ್‍ಎಲ್‍ಸಿ, ಐಟಿಐ & ಡಿಪ್ಲೊಮಾ ತೇರ್ಗಡೆ ಹೊಂದಿ ಅಭ್ಯರ್ಥಿಗಳು ರೆಸ್ಯೂಮ್ ಮತ್ತು ಆಧಾರ್ ಕಾರ್ಡ್‌ ಪ್ರತಿ ತೆಗೆದುಕೊಂಡು ಸಂದರ್ಶನಲ್ಲಿ ಭಾಗವಹಿಸಬೇಕು.

ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು

ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255293/ 9380663606/ 9108235132.

KPSC recruitment; ಸಹಾಯಕ ನಿರ್ದೇಶಕರ 10 ಹುದ್ದೆಗಳ ಭರ್ತಿ, ವಿವರKPSC recruitment; ಸಹಾಯಕ ನಿರ್ದೇಶಕರ 10 ಹುದ್ದೆಗಳ ಭರ್ತಿ, ವಿವರ

ನೇರ ಸಂದರ್ಶನ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಕಲಬುರಗಿ ಮಹಾಣಗರ ಪಾಲಿಕೆ ಆಯಕ್ತರು ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಗೌರವಧನದ ಆಧಾರದ ಮೇಲೆ ಮೂರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯ ದೀನ್‍ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಉತ್ತರ ಭಾಗದಲ್ಲಿ ರಚನೆಯಾದ (ಡೇ-ನಲ್ಮ್) ಸ್ವ-ಸಹಾಯ ಸಂಘ, ಗುಂಪುಗಳಲ್ಲಿ ಹೆಸರು ಹೊಂದಿರುವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇತರ ಸಂಸ್ಥೆಗಳಡಿ ರಚನೆಯಾದ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರದೇಶ ಮಟ್ಟದ ಒಕ್ಕೂಟ/ ಸ್ವ-ಸಹಾಯ ಸಂಘದ ಸದಸ್ಯರು ನೇಮಕಾತಿ ಹೊಂದಲು ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷಗಳು. ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಒಂದು ವೇಳೆ ಹೆಚ್ಚುವರಿ ವಿದ್ಯಾರ್ಹತೆ ಹೊಂದಿದ್ದಲ್ಲಿ ಅಂತಹ ಸದಸ್ಯರಿಗೂ ಆದ್ಯತೆ ನೀಡಲಾಗುವುದು.

ಪ್ರದೇಶ ಮಟ್ಟದ ಒಕ್ಕೂಟ/ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷಗಳ ಅವಧಿಗೆ ಸದಸ್ಯರಾಗಿರಬೇಕು. ಕನಿಷ್ಟ ಕಂಪ್ಯೂಟರ್ ನಿರ್ವಹಣೆಯ ಜ್ಞಾನ ಹೊಂದಿರಬೇಕು. ಈ ಕುರಿತು ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಸ್ವ-ಸಹಾಯ ಸಂಘವು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯತ್ವವನ್ನು ಹೊಂದಿರಬೇಕು. ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 3ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಮಹಾನಗರ ಪಾಲಿಕೆಯ ಹೊಸ ಕಟ್ಟಡದ ಕೊಠಡಿ ಸಂಖ್ಯೆ 47 ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯನ್ನು ಸಂಪರ್ಕಿಸಬಹುದು.ಕಲಬುರಗಿಯಲ್ಲಿ

ನೇರ ಸಂದರ್ಶನ; ಕಲಬುರಗಿಯ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 20 ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸೆಪ್ಟೆಂಬರ್ 15ರಂದು ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಪ್ರತಿಷ್ಠಿತ ಅಮೆಜಾನ್ ಕಂಪನಿಯವರು ನೇರ ಸಂದರ್ಶನ ನಡೆಸುತ್ತಿದ್ದು, ಎಸ್. ಎಸ್. ಎಲ್. ಸಿ. ಪಾಸಾದ ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.

ಅಭ್ಯರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಹಾಗೂ ಬೈಕ್ ಹೊಂದಿರಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

English summary
Shivamogga district employment exchange office organized walk in interview on September 15th. 18 to 35 age group candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X