ಕೊಪ್ಪಳದಲ್ಲಿ ಜನವರಿ 10ರಂದು ನೇರ ಸಂದರ್ಶನ, ವಿವರಗಳು
ಕೊಪ್ಪಳ, ಜನವರಿ 08: ಕೊಪ್ಪಳ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದಿದೆ. ಕೊಪ್ಪಳದಲ್ಲಿ ಜನವರಿ 10ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಧಾರ್ ಕಾರ್ಡ್, ರೆಸ್ಯೂಮ್ ಸಹಿತ ಅಗತ್ಯ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಜನವರಿ 10ರಂದು ಬೆಳಗ್ಗೆ 10.30 ರಿಂದ 1.30ರ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಿವೆ. ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಉಚಿತ ಪ್ರವೇಶ. ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.
ನೇರ ಸಂದರ್ಶನದಲ್ಲಿ ಪಿಯುಸಿ, ಯಾವುದೇ ಪದವಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ, ಅರ್ಹರು ನೇರ ಸಂದರ್ಶನದ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08539-220859.
ಉಚಿತ ಕೌಶಲ್ಯಾಧಾರಿತ ತರಬೇತಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.
ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ 16 ರಿಂದ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ತರಬೇತಿ ಮತ್ತು ಫೆಬ್ರವರಿ 03 ರಿಂದ 13 ದಿನಗಳ ವಾಣಿಜ್ಯ ತೋಟಗಾರಿಕೆ ಉಚಿತ ತರಬೇತಿಗಳು ನಡೆಯಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 14 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕ್‌ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ತರಬೇತಿ ಪಡೆಯಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸವನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 9980510717, 9483485489.












Click it and Unblock the Notifications