• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊಪ್ಪಳದಲ್ಲಿ ಏ.3ರಂದು ವಾಕ್ ಇನ್ ಸಂದರ್ಶನ

|
Google Oneindia Kannada News

ಕೊಪ್ಪಳ, ಮಾರ್ಚ್ 27: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಏಪ್ರಿಲ್ 3 ರಂದು ಬೆಳಿಗ್ಗೆ 10.30ಕ್ಕೆ ವಾಕ್-ಇನ್-ಇಂಟರ್‌ವ್ಯೂವ್ ಅನ್ನು ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ವಾಕ್-ಇನ್-ಇಂಟರ್‌ವ್ಯೂವ್‌ನಲ್ಲಿ ಇಂಡಿಯನ್ ಮನಿ ಪ್ರೈ.ಲಿ ಹುಬ್ಬಳ್ಳಿ ಅವರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಿದ್ದಾರೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ತುಮಕೂರು; ಮಾರ್ಚ್ 30ರಂದು ಕ್ಯಾಂಪಸ್ ಸಂದರ್ಶನ ತುಮಕೂರು; ಮಾರ್ಚ್ 30ರಂದು ಕ್ಯಾಂಪಸ್ ಸಂದರ್ಶನ

ಅರ್ಹತೆ:

ಪಿ.ಯು.ಸಿ, ಡಿಪ್ಲೋಮಾ ಮತ್ತು ಯಾವುದೇ ಪದವೀಧರರು (ಬಿ.ಇ ಹೊರತುಪಡಿಸಿ) ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. 18ರಿಂದ 32 ವರ್ಷದವರೆಗಿನ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿ, 1 ರಿಂದ 3 ಬಯೋಡಾಟಾ ಪ್ರತಿಗಳು ಹಾಗೂ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ದೂ.ಸಂ: 08539-220859, 9353515518 ಹಾಗೂ 6364397640 ಗಳಿಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The walk-in interview will held at Koppal District Employment Exchange office on April 3 at 10.30am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X