ಉಡುಪಿಯಲ್ಲಿ ಆಗಸ್ಟ್ 14ರಂದು ನೇರ ಸಂದರ್ಶನ
ಬೆಂಗಳೂರು, ಆಗಸ್ಟ್ 11; ಮನೋವೈದ್ಯರ ಹುದ್ದೆಗಾಗಿ ಉಡುಪಿಯಲ್ಲಿ ಆಗಸ್ಟ್ 14ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಹೆಚ್‌ಎಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಈ ಎರಡೂ ಉದ್ಯೋಗ ಸುದ್ದಿಗಳ ವಿವರಗಳು ಇಲ್ಲಿವೆ.
ಈ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿದೆ.

ಆಗಸ್ಟ್ 14ರ ಸೋಮವಾರ ಬೆಳಗ್ಗೆ 10.30ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ನೇರ ಸಂದರ್ಶನದಲ್ಲಿ ಮನೋವೈದ್ಯ ಶಾಸ್ತ್ರದಲ್ಲಿ ಎಂಬಿಬಿಎಸ್ ಮತ್ತು ಎಂಡಿ ಪದವಿ ಅಥವಾ ಮನೋವೈದ್ಯ ಶಾಸ್ತ್ರದಲ್ಲಿ ಡಿಎನ್‌ಬಿ ಪದವಿ ಅಥವಾ ಎಂಸಿಐನಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಡಿಪಿಎಮ್ ಪದವಿ ಹೊಂದಿರುವ ಹಾಗೂ ಯಾವುದೇ ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನಡೆಸಲಾಗುತ್ತಿದೆ. ಆಸಕ್ತರು ಮತ್ತು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್‍ಎಸ್‍ಎಲ್‍ಸಿಯಲ್ಲಿ ಶೇ 70 + ಐಟಿಐ (ಸಿಟಿಎಸ್) ಶೇ 30ಅಂಕ ಪಡೆದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಫೌಂಡ್ರಿಮನ್, ಶೀಟ್ ಮೆಟಲ್‍ವರ್ಕರ್, ಕ್ರಾಫ್ಟ್ಸ್‍ಮೆನ್, ಟ್ರೈನಿಂಗ್ ಸ್ಕೀಮ್ ಸಿಟಿಎಸ್‍ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 25/8/2023 ಕೊನೆಯ ದಿನವಾಗಿದೆ. ಅರ್ಜಿಯ ಜೊತೆಗೆ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್‍ಮೆಂಟ್ ಕಾರ್ಡ್, ಪಾಸ್‍ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು.
ಆಸಕ್ತರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗಇವರನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 08182-255293, 9380663606.












Click it and Unblock the Notifications