ಧಾರವಾಡ; ಜು. 20ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಧಾರವಾಡ, ಜುಲೈ 19 : ಧಾರವಾಡ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

Recommended Video

      ಮಗುವಿನ ಫೋಟೋ ಹಿಡಿದು CM ಮನೆ ಮುಂದೆ ಧರಣಿ ಕುಳಿತ ತಂದೆ | Oneindia Kannada

      ಕೋವಿಡ್ 19 ಪ್ರಯುಕ್ತ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳನ್ನು ಮೂರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

      ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಹಿರಿಯ ಪುರುಷ ಆರೋಗ್ಯ ಸಹಾಯಕ , ವಾಹನ ಚಾಲಕ ಹಾಗೂ ಗ್ರೂಪ್‌ 'ಡಿ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

      Walk In Interview On July 20 At Dharwad

      ಸಂದರ್ಶನದ ನಡೆಯುವ ವಿಳಾಸ: ಜುಲೈ 20ರ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30ರ ತನಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ , ಕೆ.ಸಿ ಪಾರ್ಕ್‌ ಹತ್ತಿರ , ಧಾರವಾಡ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

      ಡಿಪ್ಲೋಮಾ ಇನ್ ಇನ್ಸ್ ಪೆಕ್ಟರ್ , ವಿವಿಧೋದ್ದೇಶ ಕಾರ್ಯಕರ್ತರ ತರಬೇತಿ, ಎಎನ್‌ಎಂ ತರಬೇತಿ ಪಡೆದವರು ಹಾಗೂ ಭಾರಿ ವಾಹನ ಚಾಲನಾ ಪ್ರಮಾಣ ಪತ್ರ ಹೊಂದಿರುವ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

      ಸಂದರ್ಶನಕ್ಕೆ ಬರುವಾರ ಇತ್ತೀಚಿನ ಭಾವಚಿತ್ರ, ಮೂಲ ದಾಖಲಾತಿ ಹಾಗೂ ಅವುಗಳ ನಕಲು ಪ್ರತಿಗಳನ್ನು ತರಬೇಕು. ಹೆಚ್ಚಿನ ವಿವರಗಳಿಗೆ 0836-2447483 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+