ಕಲಬುರಗಿ; ಜುಲೈ 27ರಂದು ನೇರ ಸಂದರ್ಶನ

ಕಲಬುರಗಿ, ಜುಲೈ 26; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 27ರ ಗುರುವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಗುರುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯ ತನಕ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ.

walk-in-interview

ನೇರ ಸಂದರ್ಶನದಲ್ಲಿ ಕಲಬುರಗಿಯ ಸುಭಾಷ ಮೆಮೋರಿಯಲ್ ಏಜ್ಯುಕೇಷನ್ ಸೊಸೈಟಿಯಲ್ಲಿ ರಿಸೆಪ್ಷನಿಸ್ಟ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳನ್ನು, ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎ., ಬಿ.ಎಡ್/ ಎಮ್.ಎ. ಬಿ.ಎಡ್. ವಿದ್ಯಾರ್ಹತೆ ಹೊಂದಿರವ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.

ರಾಸಾಯನಶಾಸ್ತ್ರ (ಕೆಮಿಸ್ಟ್ರಿ) ಶಿಕ್ಷಕರ ಹುದ್ದೆಗೆ ಬಿ.ಎಸ್.ಸಿ. ಬಿ.ಎಡ್., ಎಮ್.ಎಸ್.ಸಿ. ಬಿ.ಎಡ್. ವಿದ್ಯಾರ್ಹತೆ ಹೊಂದಿರುವವರು. ಅಕ್ಯಾಡಮಿಕ್ ಕೋ-ಆಡಿನೇಟರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.

ಯಾವ-ಯಾವ ಹುದ್ದೆ ನೇಮಕಾತಿ; ಆದಿತ್ಯ ಬಿರ್ಲಾ ಲೈಫ್ ಇನ್ಸುರೆನ್ಸ್‌ನಲ್ಲಿ ಏಜೆನ್ಸಿ ಪಾರ್ಟರ್/ ಅಸೋಸಿಯೇಟ್ ಏಜೆನ್ಸಿ ಪಾರ್ಟರ್ ಹುದ್ದೆಗೆ ಪಿ.ಯು.ಸಿ./ ಯಾವುದೇ ಪದವಿ ಪಾಸಾಗಿರುವ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಬಸವಕಲ್ಯಾಣದ ಸ್ಮಾರ್ಟ್ ಕಿಡ್ಸ್ ಪಬ್ಲಿಕ್ ಹೈಯರ್ ಪ್ರೈಮರಿ ಸ್ಕೂಲ್‌ದಲ್ಲಿ ಆಂಗ್ಲ ಶಿಕ್ಷಕರ ಹುದ್ದೆಗೆ ಎಮ್.ಎ., ಬಿ.ಎಡ್. ವಿದ್ಯಾರ್ಹತೆ ಹೊಂದಿರುವವರು. ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಎಮ್.ಎ., ಬಿ.ಎಡ್. ವಿದ್ಯಾರ್ಹತೆ ಹೊಂದಿರುವವರು.

ಕಂಪ್ಯೂಟರ್ ಶಿಕ್ಷಕರ ಹುದ್ದೆಗೆ ಬಿ.ಸಿ.ಎ./ ಬಿ.ಎಸ್.ಸಿ. (ಸಿ.ಎಸ್) ಎಮ್.ಸಿ.ಎ/ ಎಮ್.ಎಸ್.ಸಿ. (ಸಿ.ಎಸ್.) ವಿದ್ಯಾರ್ಹತೆ ಹೊಂದಿರುವವರು. ಇ.ವಿ.ಎಸ್. ಹುದ್ದೆಗೆ ಬಿ.ಎಸ್.ಸಿ., ಎಮ್.ಎಸ್.ಸಿ. ವಿದ್ಯಾರ್ಹತೆ ಹೊಂದಿರುವವರು, ಗುಮಾಸ್ತ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರುವ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳ ನೇಮಕಾತಿ ನಡೆಯುತ್ತಿದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಜೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‌ ಜೊತೆಗೆ ಭಾಗವಹಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು.ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+