ಕೆಎಸ್ಆರ್‌ಟಿಸಿ ಶಿಶಿಕ್ಷು ತರಬೇತಿ; ಜೂನ್ 8ಕ್ಕೆ ನೇರ ಸಂದರ್ಶನ

ಬೆಂಗಳೂರು, ಜೂನ್ 04; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಪುತ್ತೂರು ವಿಭಾಗ ಶಿಶಿಕ್ಷು ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜೂನ್ 8ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯಾನಿಕಲ್ ಡೀಸೆಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್ ಈ ವೃತ್ತಿ ತರಬೇತಿಗೆ ಸಂದರ್ಶನ ನಡೆಯಲಿದೆ.

Walk In Interview On June 8 At Puttur For KSRTC Apprenticeship Training

ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರಗಳು ಹೀಗಿವೆ. ಮೆಕ್ಯಾನಿಕಲ್ ಡೀಸೆಲ್ (43 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರಿಷಿಯನ್ (20 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್ (5 ಸ್ಥಾನ), ಫಿಟ್ಟರ್ (5 ಸ್ಥಾನ). ಈ ತರಬೇತಿಯ ಅವಧಿ ಒಂದು ವರ್ಷಗಳು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳು ಮೆಕ್ಯಾನಿಕ್ ಡೀಸೆಲ್ (32 ಸ್ಥಾನ) ತರಬೇತಿ ಅವಧಿ 2 ವರ್ಷ ಆಗಿದೆ.

ನೋಂದಣಿ ಮಾಡುವುದು ಹೇಗೆ?; ಆಸಕ್ತ ಮತ್ತು ಅರ್ಹರು ಅರ್ಜಿಯನ್ನು www.apprenticeshipindia.org ವೆಬ್‌ಸೈಟ್‌ ಮೂಲಕ ನೋಂದಣಿ ಮಾಡುವುದು ಹಾಗೂ ನೋಂದಣಿ ಪ್ರತಿ ಸಲ್ಲಿಸುವುದು (ನೋಂದಣಿ ಪ್ರತಿ ಸಲ್ಲಿಸದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.apprenticeshipindia.orgನ ಹೋಮ್ ಪೇಜ್ ನಲ್ಲಿ ರಿಜಿಸ್ಟ್ರೇಷನ್-ಕ್ಯಾಂಡಿಡೇಟ್ ರಿಜಿಸ್ಟ್ರೇಷನ್‍ನಲ್ಲಿ ವಿವರವನ್ನು ಕಡ್ಡಾಯವಾಗಿ ನಮೂದಿಸುವುದು. ನಂತರ ಇ-ಮೇಲ್‍ನಲ್ಲಿ ಆಕ್ಟ್ರಿವೇಷನ್ ಮಾಡಿದ ನಂತರ ಇ-ಮೇಲ್ ಯೂಸರ್ ಐಡಿ ಮತ್ತು ಇ-ಮೇಲ್ ಪಾಸ್‍ವರ್ಡ್-ಲಾಗಿನ್ ಪಾಸ್‍ವರ್ಡ್ ಆಗಿರುತ್ತದೆ.

ಲಾಗಿನ್ ಆದ ನಂತರ ಕ್ಯಾಂಡಿಡೇಟ್ ಡ್ಯಾಶ್‌ಬೋರ್ಡ್‌ನಲ್ಲಿ ವಿವರ ನಮೂದಿಸುವುದು. ಪೂರ್ಣ ವಿವರ ನಮೂದಿಸಿ, ಸಂಬಂಧಿಸಿದ ದಾಖಲಾತಿಗಳನ್ನು ಅಪ್‍ಡೇಟ್ ಮಾಡಬೇಕು. ತಮ್ಮ ಪ್ರೊಪೈಲ್‍ಗಳನ್ನು ಶೇ 100 ಪೂರ್ಣಗೊಳಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಪೂರ್ಣ ವಿವರ ಹೊಂದಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

Walk In Interview On June 8 At Puttur For KSRTC Apprenticeship Training

ಶಿಶಿಕ್ಷುಗಳ ಆನ್‍ಲೈನ್ ನೋಂದಣಿಗೆ ಆಧಾರ್ ಕಾರ್ಡ್ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ವಿವರಗಳು (ಹೆಸರು, ಹುಟ್ಟಿದ ದಿನಾಂಕ, ಪೋಷಕರ ಹೆಸರು) ಒಂದಕ್ಕೊಂದು ತಾಳೆಯಾಗಬೇಕು. ಇಲ್ಲವಾದಲ್ಲಿ ಆನ್‍ಲೈನ್ ನೋಂದಣಿಯಲ್ಲಿ ಅಡಚಣೆ ಉಂಟಾದರೆ ಸಂಸ್ಥೆ ಯಾವುದೇ ರೀತಿಯ ಜವಾಬ್ದಾರಿ ಹೊಂದಿಲ್ಲ. ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂತರ ತಮ್ಮ ಲಾಗಿನ್‍ನಲ್ಲಿ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಡೀಟೈಲ್ಸ್‌ಗಳನ್ನು ಸಹ ಅಪಡೇಟ್ ಮಾಡಬೇಕಾಗಿದೆ.

ಶಿಶಿಕ್ಷುಗಳ ಕಾಯಿದೆ 1961ರ ಅನ್ವಯ ಈಗಾಗಲೇ ಶಿಶಿಕ್ಷು ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ, ಅವರ ವಿರುದ್ದ ಪೊಲೀಸ್ ಮೊಕದ್ದಮೆ ದಾಖಲಿಸಲಾಗುವುದು. ಮೀಸಲಾತಿ ಪರಿಶಿಷ್ಟ ಜಾತಿ 1:8, ಪರಿಶಿಷ್ಟ ಪಂಗಡ 1:20, ಅಂಗವಿಕಲ ಪ್ರತಿಶತ 03 ಮತ್ತು ಮಾಜಿ ಸೈನಿಕ ಮಕ್ಕಳಿಗೆ ಪ್ರತಿಶತ 03 ನೀಡಲಾಗುವುದು. ಅಭ್ಯರ್ಥಿಗಳಿಗೆ 2023ರ ಮೇ, 19 ಕ್ಕೆ 18 ವರ್ಷ ತುಂಬಿರಬೇಕು. ಈಗಾಗಲೇ ಶಿಶಿಕ್ಷು ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ-2, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ-2, ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಸಂಬಂಧಿಸಿದ ಬ್ಯಾಂಕ್‍ನಿಂದ ದೃಢೀಕರಣ ಪತ್ರ, ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿ ಹಾಗೂ ಜಾತಿ ಪ್ರಮಾಣ ಮತ್ತು ಮೂಲ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಆಗಮಿಸಬೇಕು.

ನೇರ ಸಂದರ್ಶನ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ ನಿಗಮ, ವಿಭಾಗೀಯ ಕಚೇರಿ, ಪುತ್ತೂರು ವಿಭಾಗ, ಮುಕ್ರಂಪಾಡಿ, ದರ್ಬೆ ಅಂಚೆ, ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ನಡೆಯಲಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760990817 ಅನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+