ಧಾರವಾಡ; ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಹಾಕಿ

ಧಾರವಾಡ, ಅಕ್ಟೋಬರ್ 30; ಧಾರವಾಡದ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನವೆಂಬರ್ 12ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಷಯಕ್ಕೆ ಒಬ್ಬರು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಾತ್ಕಾಲಿಕವಾಗಿ 179 ದಿನಗಳ ಅವಧಿಗೆ ಮೀರದಂತೆ ನೇಮಕ ಮಾಡಲಾಗುತ್ತಿದೆ.

Walk In Interview On November 12th At Dharwad For Assistant Professor Post

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಎರಡು ಪ್ರತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಧಾರವಾಡ ಅವರ ಕಚೇರಿಯಲ್ಲಿ ಪಡೆಯಬಹುದು.

ನವೆಂಬರ್ 12ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ http://www.uasd.edu ವೆಬ್‍ಸೈಟ್ ನೋಡಬಹುದಾಗಿದೆ.

ಕರೆ ಮಾಡಲು ದೂರವಾಣಿ ಸಂಖ್ಯೆಗಳು 0836-2443714, 0836-2214233.

ಅಪ್ರೆಂಟಿಸ್ ತರಬೇತಿ; ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2022-23 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತರು ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಇವರನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+