ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ವೇತನ 56,700 ರೂ., ಡಿ. 23ಕ್ಕೆ ನೇರ ಸಂದರ್ಶನ

ಶಿವಮೊಗ್ಗ, ಡಿಸೆಂಬರ್ 17: ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಯುವ ಪರಿವರ್ತಕರು ಮತ್ತು ಸಮಾಲೋಚಕರ ಹುದ್ದೆಗೆ ಶಿವಮೊಗ್ಗದಲ್ಲಿ ಆಸಕ್ತ, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವೇತನ ಮುಂತಾದ ಮಾಹಿತಿಗಳು ಇಲ್ಲಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ. ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅದಕ್ಕಾಗಿ ಡಿಸೆಂಬರ್ 23ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.

Walk In Interview Scheduled For Assistant Professors Post In Shivamogga

ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಾಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ಹುದ್ದೆಗಳಿಗೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಭೇಟಿ ನೀಡಬಹುದು.

ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ವಿಳಾಸದಲ್ಲಿ ಡಿಸೆಂಬರ್ 23ರ ಬೆಳಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ 56,700 ರೂ. ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ 50,000 ರೂ. ವೇತನವನ್ನು ನೀಡಲಾಗುತ್ತದೆ.

ಯುವ ಪರಿವರ್ತಕರು ಮತ್ತು ಸಮಾಲೋಚಕರ ಹುದ್ದೆ: ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಮತ್ತು ಯುವ ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 21 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಪದವಿ ಹಾಗೂ ಮೇಲ್ಪಟ್ಟು (ಫಿಸಿಯೋಲಾಜಿ/ ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು) ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆಯನ್ನು ಹೊಂದಿರಬೇಕು. ಯುವ ಪರಿವರ್ತಕರಿಗೆ ಗೌರವ ಧನವಾಗಿ ರೂ. 7000 ಹಾಗೂ ಯುವ ಸಮಾಲೋಚಕರಿಗೆ ಗೌರವ ಧನವಾಗಿ ರೂ. 9000 ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಂಪರ್ಕಿಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+