ಧಾರವಾಡದಲ್ಲಿ ಕೆಲಸ ಖಾಲಿ ಇದೆ: ಫೆಬ್ರವರಿ 10ರಂದು ನೇರ ಸಂದರ್ಶನ
ಧಾರವಾಡ, ಫೆಬ್ರವರಿ 02: ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿಯೊಂದಿದೆ. ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ. ಇದಕ್ಕಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 10ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಧಾರವಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಪಿಎಮ್-ಅಭೀಮ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಒಟ್ಟು ಖಾಲಿ ಇರುವ ಹುದ್ದೆಗಳು 25. ಅನೆಸ್ಥಿಯಾ 2, ಪಾರ್ಮಿಸ್ಟ್ 1, ಎಂ.ಬಿ.ಬಿ.ಎಸ್ ಮೆಡಿಕಲ್ ಆಫೀಸರ್ 5, ಎಂಬಿಬಿಎಸ್ ಮೆಡಿಕಲ್ ಆಫೀಸ್ ನಮ್ಮ ಕ್ಲಿನಿಕ್ 15, ಮೈಕ್ರೊಬಯೋಲಜಿಸ್ಟ್ 1, ಜಿಲ್ಲಾ ಗುಣಮಟ್ಟ ಖಾತ್ರಿ ಸಲಹೆಗಾರರು 1 ಮತ್ತು ಎಂಬಿಬಿಎಸ್ ಹಾಗೂ ತಜ್ಞ ವೈದ್ಯರು ಹುದ್ದೆಗಳಿಗೆ ಪ್ರತಿ ಸೋಮವಾರ ಅರ್ಜಿ ಆಹ್ವಾನಿಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್.ಸಿ.ಹೆಚ್ ಕಛೇರಿ ಎನ್.ಹೆಚ್.ಎಮ್ ವಿಭಾಗವನ್ನು ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ: ಬಳ್ಳಾರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಈ ಕುರಿತು ಮಾಹಿತಿ ನೀಡಿದ್ದಾರೆ. ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ನಿಗದಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಮೀಸಲಾತಿ ಮತ್ತು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿ ಬಳ್ಳಾರಿ ಜಿಲ್ಲಾ ವೆಬ್‌ಸೈಟ್ http://bellary.nic.in ನಲ್ಲಿ ಲಭ್ಯವಿದೆ.
ಉಚಿತ ತರಬೇತಿಗೆ ಅರ್ಜಿ ಹಾಕಿ: ವಿಶಿಷ್ಟ ವೃತ್ತಿ ಮತ್ತು ಕಾರ್ಯನಿರ್ವಾಹಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ಹಾಗೂ ಕೆ.ಎಲ್.ಇ ಸೊಸೈಟಿಸ್ ಎಸ್. ನಿಜಲಿಂಗಪ್ಪ ಕಾಲೇಜು, ರಾಜಾಜಿನಗರ ಬೆಂಗಳೂರು ಇವರ ಸಹಯೋಗದೊಂದಿಗೆ ಕೇಂದ್ರ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿತವಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಉಚಿತ ತರಬೇತಿ ನೀಡಲಾಗುತ್ತದೆ.
ನುರಿತ ಉಪನ್ಯಾಸಕರಿಂದ ಕೆ.ಎಲ್.ಇ.ಸೊಸೈಟಿಸ್ ಎಸ್.ನಿಜಲಿಂಗಪ್ಪ ಕಾಲೇಜು, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು ಇಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿಯು ಫೆಬ್ರವರಿ 8ರ ತನಕ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 7975396205, 9964679667, 9590700228.












Click it and Unblock the Notifications