ಹಾಸನ: ಡಿಸೆಂಬರ್ 30ಕ್ಕೆ ನೇರ ಸಂದರ್ಶನ, ವಿದ್ಯಾರ್ಹತೆ ವಿವರ

ಹಾಸನ, ಡಿಸೆಂಬರ್ 28: ಹಾಸನ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಡಿಸೆಂಬರ್ 30ರಂದು ಹಾಸನದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದ್ದು, ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.

ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ನಿರುದ್ಯೋಗಿ ಯುವಕ/ ಯುವತಿಯರಿಗೆ ಅನುಕೂಲ ಮಾಡಿಕೊಡಲು ಡಿಸೆಂಬರ್ 30ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ವಿವಿಧ ಖಾಸಗಿ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ತಮ್ಮಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳಲಿವೆ.

Walk In Interview Scheduled In Hassan On December 30

ಡಿಸೆಂಬರ್ 30ರ ಸೋಮವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ತನಕ ನೇರ ಸಂದರ್ಶನ ನಡೆಯಲಿದೆ. ಈ ಸಂದರ್ಶನದಲ್ಲಿ ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ತೇರ್ಗಡೆ ಹೊಂದಿದ ಹಣಕಾಸು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಪುರುಷ/ ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ನೇರ ಸಂದರ್ಶನದ ಕುರಿತು ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 08172-296374.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿನಾಂಕ 05/01/2025ರ ತನಕ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ಆಸಕ್ತರು http://karnemakaone.kar.nic.in/abcd/ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ 2 ಮತ್ತು 3ನೇ ಹಂತದಲ್ಲಿ ಆಪ್‌ಲೋಡ್ ಮಾಡಿ 3ನೇ ಹಂತದಲ್ಲಿ ಇ-ಹಸ್ತಾಕ್ಷರವಾಗಿರುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ 4ನೇ ಹಂತದಲ್ಲಿ ಇ-ಸಹಿಯಾದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದು.

ಮೂಲ ದಾಖಲಾತಿಗಳ ಪರಿಶೀಲನೆ: ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಜನವರಿ 2 ಮತ್ತು 3ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿಗಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅರ್ಹತಾ ಪಟ್ಟಿ ವೆಬ್‌ಸೈಟ್ koppal.nic.in ನಲ್ಲಿ ಲಭ್ಯವಿದೆ. ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ ಜನವರಿ 2 ಮತ್ತು 3ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ನಡೆಯಲಿದೆ.

ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಬಂಧಪಟ್ಟ ಮೂಲ ಹಾಗೂ ಒಂದು ಸೆಟ್ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+