ಕೊಪ್ಪಳ: ಡಿಸೆಂಬರ್ 27ರಂದು ವಾಕ್ ಇನ್ ಸಂದರ್ಶನ
ಕೊಪ್ಪಳ, ಡಿಸೆಂಬರ್ 25: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ನಿಗದಿಗೊಳಿಸಿಲ್ಲ. ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಜೊತೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ.

ಈ ವಾಕ್ ಇನ್ ಸಂದರ್ಶನದಲ್ಲಿ ವಿವಿಧ ಖಾಸಗಿ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಈ ಸಂದರ್ಶನದಲ್ಲಿ ಪಿಯುಸಿ, ತತ್ಸಮಾನ, ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859.
ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಹಾಕಿ: ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ (food and beverage service steward) ತರಬೇತಿ ನಾಲ್ಕು ತಿಂಗಳ ಕಾಲ ನಡೆಯಲಿದೆ. ವಯೋಮಿತಿ 20 ರಿಂದ 45 ವರ್ಷಗಳು. ಅಭ್ಯರ್ಥಿಗಳು ಎಸ್.ಎಸ್.ಎಲ್. ಸಿ ಉತ್ತೀರ್ಣರಾಗಿರಬೇಕು.
ರೂಮ್ ಅಟೆಂಡೆಂಟ್ (Room attendent) ತರಬೇತಿ 4 ತಿಂಗಳು ನಡೆಯಲಿದೆ. ವಯೋಮಿತಿ 20 ರಿಂದ 45 ವರ್ಷಗಳು. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣರಾಗಿರಬೇಕು.
ಫ್ರಂಟ್ ಆಫೀಸ್ ಅಸೋಸಿಯೇಟ್ (front office associate) ತರಬೇತಿ 4 ತಿಂಗಳು ನಡೆಯಲಿದೆ. ವಯೋಮಿತಿ 20 ರಿಂದ 45 ವರ್ಷಗಳು. ಅಭ್ಯರ್ಥಿಗಳ ವಿದ್ಯಾರ್ಹತೆ ದ್ವೀತಿಯ ಪಿಯುಸಿ ಉತ್ತೀರ್ಣ.
ಮಲ್ಟಿ ಕ್ಯುಸಿನ್ ಕುಕ್ (multi cuisine cook) ತರಬೇತಿ 5 ತಿಂಗಳು ನಡೆಯಲಿದೆ. ವಯೋಮಿತಿ 20 ರಿಂದ 45 ವರ್ಷಗಳು. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣ.
ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ವಿಭಾಗ, ನಂ.3,4ನೇ ಮಹಡಿ, ಎಂಬೆಸ್ಸಿ ಐಕಾನ್ ಕಟ್ಟಡ, ಇನ್ ಫೆಂಟ್ರಿ ರಸ್ತೆ, ಬೆಂಗಳೂರು -560 001 ಇಲ್ಲಿ ಕಛೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಸ್ವಯಂ ಧೃಢೀಕರಿಸಿ ದ್ವಿ-ಪ್ರತಿಯೊಂದಿಗೆ ಡಿಸೆಂಬರ್ 27ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2235 2525.












Click it and Unblock the Notifications