ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ಜನವರಿ 15ರಂದು ನೇರ ಸಂದರ್ಶನ, ವಿವರ
ಶಿವಮೊಗ್ಗ, ಜನವರಿ 12: ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜನವರಿ 15ರಂದು ಶಿವಮೊಗ್ಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷೇಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ತಜ್ಞ ವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್/ ಜಿಎಂ) ಹುದ್ದೆ 1, ವಿದ್ಯಾರ್ಹತೆ ಎಂಬಿಬಿಎಸ್, ಎಂ.ಡಿ, ಸ್ಪೆಷಲಿಸ್ಟ್ ಹುದ್ದೆಯಲ್ಲಿ 2 ವರ್ಷ ಕಾರ್ಯ ನಿರ್ವಹಿಸಿರಬೇಕು.

ಸಿಪಿಹೆಚ್‌ಸಿ-ಯುಹೆಚ್‌ಸಿ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ ಹುದ್ದೆ 1, ವಿದ್ಯಾರ್ಹತೆ ಬಿಡಿಎಸ್/ ಬಿಎಎಂಎಸ್/ ಬಿಯುಎಂಎಸ್/ ಬಿಹೆಚ್‌ಎಂಎಸ್/ ಬಿವೈಎನ್‌ಎಸ್/ಎಂಎಸ್‌ಸಿ ನರ್ಸಿಂಗ್/ ಎಂಎಸ್‌ಸಿ ಲೈಫ್ ಸೈನ್ಸ್/ ಬಿಎಸ್‌ಸಿ ನರ್ಸಿಂಗ್ ಎಲ್ಲ ಪದವಿಯೊಂದಿಗೆ ಎಂಪಿಹೆಚ್ ಅಥವಾ ಎಂಬಿಎ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು.
ಐಡಿಎಸ್‌ಪಿ ಕಾರ್ಯಕ್ರಮದಡಿ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆ 1, ವಿದ್ಯಾರ್ಹತೆ ಮೆಡಿಕಲ್ ಗ್ರಾಜುಯೇಟ್, ಎಂಬಿಬಿಎಸ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ/ ಡಿಪ್ಲೊಮಾ ಇನ್ ಪ್ರಿವೆಂಟಿವ್ ಅಂಡ್ ಸೋಷಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮಿಯಾಲಜಿ (ಎಂ.ಡಿ, ಎಂಪಿಹೆಚ್, ಡಿಪಿಹೆಚ್, ಎಂಎಇ ಇತ್ಯಾದಿ) ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್ (ಎಂಬಿಬಿಎಸ್ ಹೊರತುಪಡಿಸಿ) ಜೊತೆಗೆ ಎಂಪಿಹೆಚ್ ಜೊತೆಗೆ ಕನಿಷ್ಟ ಒಂದು ವರ್ಷದ ಅನುಭವ ಪಬ್ಲಿಕ್ ಹೆಲ್ತ್‌ನಲ್ಲಿ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುವುದು ಅಥವಾ ಎಂಎಸ್‌ಸಿ ಇನ್ ಲೈಫ್ ಸೈನ್ಸ್ ಜೊತೆಗೆ 2 ವರ್ಷದ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುವುದು.
ನೇರ ಸಂದರ್ಶನ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್‌ಸಿಡಿ ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ದಿನಾಂಕ 15/1/2025ರಂದು ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆವರೆಗೆ ಮೂಲ ಪ್ರತಿ ಮತ್ತು ನಕಲು ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯು ಎನ್‌ಹೆಚ್‌ಎಂ ನಿಯಮಾವಳಿ, ಷರತ್ತು ಮತ್ತು ನಿಬಂಧನೆಗಳಿಗೆ ಮತ್ತು ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.
ಎನ್‌ಸಿಡಿ ಕ್ಲಿನಿಕ್ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದಲ್ಲಿ ಪ್ರತಿ ತಿಂಗಳ 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸರ್ವೇಕ್ಷಣಾಧಿಕರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಏರ್‌ಮೆನ್ ಆಯ್ಕೆಗೆ ನೇಮಕಾತಿ ರ‍್ಯಾಲಿ: ಭಾರತೀಯ ವಾಯುಪಡೆಯು ಭಾರತದ/ ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ 'ವೈ' (ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜನನವರಿ 29 ರಿಂದ ಫೆಬ್ರವರಿ 6 ರವರೆಗೆ ನೇಮಕ ರ‍್ಯಾಲಿಯನ್ನು ಆಯೋಜನೆ ಮಾಡಿದೆ. ಈ ನೇಮಕಾತಿ ರ‍್ಯಾಲಿ ಮಹಾರಾಜ ಕಾಲೇಜು ಮೈದಾನ, ಪಿ. ಟಿ. ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ನಡೆಯಲಿದೆ.
ಜನವರಿ 29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 ಅಭ್ಯರ್ಥಿಗಳು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಹಾಜರಾಗಬಹುದು. ಫೆಬ್ರವರಿ 4 ರಿಂದ 5 ರವರೆಗೆ ಗುಂಪು ವೈ/ವೈದ್ಯಕೀಯ ಸಹಾಯಕ ಹುದ್ದೆ, ವಿದ್ಯಾರ್ಹತೆ ಫಾರ್ಮಸಿಯಲ್ಲಿ ಡಿಪ್ಲೊಮಾ/ ಬಿಎಸ್‌ಸಿ ಹೊಂದಿರುವ ಅಭ್ಯರ್ಥಿಗಳು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು ಪುದುಚೇರಿ ಹಾಗೂ ಲಕ್ಷದ್ವೀಪಗಳು ಕೇಂದ್ರಾಡಳಿತ ಪ್ರದೇಶಗಳ ಅಭ್ಯರ್ಥಿಗಳು ಹಾಜರಾಗಬಹುದು.
ವೈದ್ಯಕೀಯ ಸಹಾಯಕ ವೃತ್ತಿಗೆ 10+2 ಹೊಂದಿರುವ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕು ಮತ್ತು 2004ರ ಜುಲೈ 3 ಮತ್ತು 2008 ಜುಲೈ 3ರ ನಡುವೆ ಜನಿಸಿದವರಾಗಿರಬೇಕು. ವೈದ್ಯಕೀಯ ಸಹಾಯಕ ವೃತ್ತಿಗೆ ಫಾರ್ಮಸಿಯಲ್ಲಿ ಡಿಪ್ಲೊಮಾ/ ಬಿಎಸ್‌ಸಿ ಹೊಂದಿರುವ ಅಭ್ಯರ್ಥಿಗಳು ಅವಿವಾಹಿತರಾಗಿದ್ದು 2001ರ ಜುಲೈ 3 ಮತ್ತು 2006ರ ಜುಲೈ 3ರ ನಡುವೆ ಜನಿಸಿರಬೇಕು.
ವಿವಾಹಿತ ಅಭ್ಯರ್ಥಿಗಳು 2001ರ ಜುಲೈ 3 ಮತ್ತು 2004ರ ಜುಲೈ 3ರ ನಡುವೆ ಜನಿಸಿರಬೇಕು. ಹೆಚ್ಚಿನ ವಿವರಗಳಿಗೆ www.airmenselection.cdac.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications