10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ WAPCOS
ಬೆಂಗಳೂರು, ಮೇ 21 : WAPCOS 10ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 27ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
WAPCOS 7 ಡೆಪ್ಯೂಟಿ ಚೀಫ್ ಇಂಜಿನಿಯರ್, 3 ಎಕ್ಸ್‌ಪರ್ಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಬಿ.ಟೆಕ್/ಬಿ.ಇ ಇನ್ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಬೇಕಾದ ಅನುಭವ ಹೊಂದಿರಬೇಕು.

ಎಕ್ಸ್‌ಪರ್ಟ್ ಹುದ್ದೆಯ ಆಕಾಂಕ್ಷಿಗಳು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ರಸ್ತೆ, ಹೈವೆ, ನೀರಾವರಿ, ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ಮೇ 27ರಂದು ಬೆಳಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications