Breaking; ಜಲಸಂಪನ್ಮೂಲ ಇಲಾಖೆ ನೇಮಕಾತಿ ಮಹತ್ವದ ಸೂಚನೆ

ಬೆಂಗಳೂರು, ಜುಲೈ 12; ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 11/7/2022ರಿಂದ ಅವಕಾಶ ನೀಡಲಾಗಿತ್ತು. ಈ ಅಧಿಸೂಚನೆ ಬಗ್ಗೆ ಮಂಗಳವಾರ ಕರ್ನಾಟಕ ಸರ್ಕಾರ ಆದೇಶವೊಂದನ್ನು ಹೊರಡಿಸಿದೆ.

ತಾಂತ್ರಿಕ ಕಾರಣಗಳಿಂದಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Water Resources Department Backlog Post Recruitment Cancelled

ಆದೇಶದಲ್ಲಿ ಏನಿದೆ?; ಅಧ್ಯಕ್ಷರು ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್‌ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಆಯ್ಕೆ ಸಮಿತಿ ಹಾಗೂ ಮುಖ್ಯ ಇಂಜಿನಿಯರ್, ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆ, ಆನಂದ ರಾವ್ ವೃತ್ತ, ಬೆಂಗಳೂರು 560009 ಇವರು ಆದೇಶ ಹೊರಡಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಬಗ್ಗೆ

ಉಲ್ಲೇಖ; ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ ಜಸಅ/ 205/ ಇಎಸ್‌ಎಂ/ ದ್ವಿದಸ/ ಬ್ಯಾಕ್‌ಲಾಗ್/ 2022 ದಿನಾಂಕ: 24/06/2022

ಜಲಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಲಾದ ಅಧಿಸೂಚನೆ ಸಂಖ್ಯೆ ಜಸಅ/ 205/ ಇಎಸ್‌ಎಂ/ ದ್ವಿದಸ/ ಬ್ಯಾಕ್‌ಲಾಗ್/ 2022 ದಿನಾಂಕ: 24/06/2022ರ ರೀತ್ಯಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 11/07/2022ರಂದು ನಿಗದಿ ಪಡಿಸಲಾಗಿತ್ತು.

ತಾಂತ್ರಿಕ ಕಾರಣಾಂತರಗಳಿಂದ ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಹಾಗೂ ಕೊನೆಯ ದಿನಾಂಕಗಳನ್ನು ಮುಂದೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+