ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಲ ಸಂಪನ್ಮೂಲ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ; 155 ಹುದ್ದೆಗಳು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27; ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/10/2022 ಸಂಜೆ 5.30 ಆಗಿದೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ ಗೂಪ್‌-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. 47 ಹುದ್ದೆಗಳು ಮಹಿಳೆಯರಿಗೆ ಮೀಸಲು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ 26/09/2022. ಕಳೆದ ಜುಲೈನಲ್ಲಿ ಈ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಅದೇ ಅಧಿಸೂಚನೆ ಅನ್ವಯ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ.

ಕೆಇಎ ನೇಮಕಾತಿ; ಕಿರಿಯ ಪಶುವೈದ್ಯಕೀಯ ಪರೀಕ್ಷಕರು, 250 ಹುದ್ದೆಗಳು ಕೆಇಎ ನೇಮಕಾತಿ; ಕಿರಿಯ ಪಶುವೈದ್ಯಕೀಯ ಪರೀಕ್ಷಕರು, 250 ಹುದ್ದೆಗಳು

ಬ್ಯಾಕ್‌ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. ಈ ಹುದ್ದೆಗಳಿಗೆ ನೇಮಕಾತಿಯನ್ನು ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 2001ರ ವಿಶೇಷ ನೇಮಕಾತಿ ನಿಯಮಗಳಂತೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡವಾರು ಅಂಕಗಳು ಹಾಗೂ ವಯೋಮಿತಿ ಆಧಾರದ ಮೇಲೆ ನಡೆಸಲಾಗುತ್ತದೆ.

ಬಿಎಚ್ಇಎಲ್‌ ನೇಮಕಾತಿ 2022: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆಬಿಎಚ್ಇಎಲ್‌ ನೇಮಕಾತಿ 2022: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ಅವರಿಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಈ ಅಧಿಸೂಚನೆಯಲ್ಲಿ ನಮೂದಿಸಿರುವ ದಾಖಲೆಗಳನ್ನು ಮಾತ್ರವೇ ಪರಿಶೀಲನೆ ಮಾಡಲಾಗುವುದರಿಂದ, ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪುಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಯ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸ್ಪಷ್ಟವಾದ ವಿವರವನ್ನು ನಮೂದಿಸತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ಏನು ಓದಿರಬೇಕು?

ಅಭ್ಯರ್ಥಿಗಳು ಏನು ಓದಿರಬೇಕು?

ದ್ವಿತೀಯ ಪಿಯುಸಿಯಲ್ಲಿ ಅಥವ ಸಿಬಿಎಸ್‌ಸಿ/ ಐಎಸ್‌ಸಿ ನಡೆಸುವ ಕ್ಲಾಸ್ 10+2 ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ ಮಾಡಿರುವವರೂ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸೂಲಿಂಗ್ (ಎನ್.ಐ.ಓ.ಎಸ್.) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್. ಎಸ್. ಸಿ. ಹೊಂದಿರಬೇಕು. ಮೂರು ವರ್ಷಗಳ ಡಿಪ್ಲೊಮಾ, ಎರಡು ವರ್ಷಗಳ ಐ.ಟಿ.ಐ, ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮೊ, (ಜೆ.ಓ.ಸಿ.ಜೆ.ಓ.ಡಿ.ಸಿ./ಜೆ.ಎಲ್.ಡಿ.ಸಿ.) ಅಭ್ಯರ್ಥಿಗಳು ಎನ್.ಐ.ಒ.ಎಸ್.ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರ ಕಲಿಕೆ ಮಾದರಿಯಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿ.ಯು.ಸಿ.ಗೆ ತತ್ಸಮಾನವೆಂದು ಪರಿಗಣಿಸಲಾಗುವುದು, 6, ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಮೇಲೆ ನಮೂದಿಸಲಾದ ಕನಿಷ, ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು.

ವಯೋಮಿತಿಯ ಮಾಹಿತಿ

ವಯೋಮಿತಿಯ ಮಾಹಿತಿ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಅಭ್ಯರ್ಥಿಗಳ ಜನ್ಮ ದಿನಾಂಕವನ್ನು ಅವರ ಎಸ್. ಎಸ್. ಎಲ್. ಸಿ. ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ ವಿದ್ಯಾರ್ಹತೆಯ ಪ್ರಮಾಣ ಪತ್ರ ಎಸ್. ಎಸ್. ಎಲ್. ಸಿ. ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ.), ಜನ್ಮ ದಿನಾಂಕವನ್ನು ಪರಿಗಣಿಸಲಾಗುತ್ತದೆ.

ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್ ಹುದ್ದೆ (ಗ್ರೂಪ್‌-ಸಿ ವೃಂದ) ರೂ. 21400-500-22400-550-24600-600-27000-650-29600-750-32600-850-36000950-39800-1100-42000 + ನಿಯಮಾನುಸಾರ ಕಾಲಕಾಲಕ್ಕೆ ಅನ್ವಯವಾಗುವ ಇತರ ಭತ್ಯೆಗಳು.

ಸಿವಿಲ್ ಸೇವೆಯಡಿಯ ದ್ವಿತೀಯದರ್ಜೆ ಸಹಾಯಕರ ಬ್ಯಾಕ್‌ಲಾಗ್ ಹುದ್ಯಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ(ಎಸ್‌ಪಿಎಲ್) 04 ಪಿಇಟಿ 2005 ದಿನಾಂಕ: 31-03-2006ರಂತೆ ನೂತನ ಪಿಂಚಣಿ ಯೋಜನೆಗೆ ಒಳಪಡುತ್ತಾರ (ಎನ್.ಪಿ.ಎಸ್).

ಅಭ್ಯರ್ಥಿಗಳ ಆಯ್ಕೆ ವಿಧಾನ?

ಅಭ್ಯರ್ಥಿಗಳ ಆಯ್ಕೆ ವಿಧಾನ?

ನಿಯಮಾವಳಿಗಳಲ್ಲಿ ನಿಗದಿಪಡಿಸಿರುವಂತೆ ವಯಸ್ಸು ಹಾಗೂ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.

ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 2001ರನ್ವಯ, ಮೇಲ್ಕಂಡ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಲಾಗಿರುವ ಒಟ್ಟು ಅಂಕಗಳ ಶೇಕಡವಾರನ್ನು ಆಧರಿಸಿ 18 ವರ್ಷದಿಂದ 28 ವರ್ಷ ವಯೋಮಿತಿಯುಳ್ಳ (29 ವರ್ಷದೊಳಗಿನವರು) ಅಭ್ಯರ್ಥಿಗಳ ಒಂದು ಅರ್ಹತಾ ಪಟ್ಟಿಯನ್ನು ಹಾಗೂ 29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಮತ್ತೊಂದು ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು.

29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಸದರಿ ಅರ್ಹತಾ ಪಟ್ಟಿಯಲ್ಲಿ ಸೂಕ್ತ ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಮಾತ್ರ 18 ವರ್ಷದಿಂದ 28 ವರ್ಷಗಳ ವಯೋಮಿತಿಯ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನಂತರದ ಆದ್ಯತೆ ನೀಡಲಾಗುವುದು.

ಅರ್ಹತಾ ಷರತ್ತುಗಳು

ಅರ್ಹತಾ ಷರತ್ತುಗಳು

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಗಳಲ್ಲಿ ನೀಡುವ ಮಾಹಿತಿಗಳ ಆಧಾರದ ಮೇಲೆ ನೇಮಕಾತಿ ಪ್ರಾಧಿಕಾರವು ಪರಿಶೀಲಿಸಿ ಆಯ್ಕೆ ಮಾಡಲಾಗುವುದು. ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ಅರ್ಜಿಯಲ್ಲಿ ನಮೂದಿಸುವ ಮೀಸಲಾತಿ, ಜನ್ಮ ದಿನಾಂಕ, ವಿದ್ಯಾರ್ಹತೆ ಹಾಗೂ ವಯೋಮಿತಿ ಸಡಿಲಿಕೆ ಇತ್ಯಾದಿ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು ಹಾಗೂ ಈ ಬಗೆ ಆನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆ
ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ.

ಭಾವಚಿತ್ರ ಮತ್ತು ಸಹಿಯು ಅಸ್ಪಷ್ಟ ಹಾಗೂ ಮಸುಕಾಗಿದ್ದಲ್ಲಿ ಅಂಥಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ಮುದ್ರಿಸಿಕೊಂಡು ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.

ನೇಮಕಾತಿ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ವಿಳಾಸ ಬದಲಾವಣೆಯಾಗಿದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮೂಲಕ ತಕ್ಷಣವೇ ನೇಮಕಾತಿ ಪ್ರಾಧಿಕಾರದ ಗಮನಕ್ಕೆ ತರತಕ್ಕದ್ದು, ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ನೇಮಕಾತಿ ಪ್ರಾಧಿಕಾರ, ಸಾಧ್ಯವಾದ ಮಟ್ಟಿಗೆ ಪ್ರಯತ್ನಿಸುವುದು. ಆದಾಗ್ಯೂ, ಈ ವಿಚಾರದಲ್ಲಿ ನೇಮಕಾತಿ ಪ್ರಾಧಿಕಾರವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ :https://waterresources.karnataka.gov.in

English summary
Karnataka water resources department invited applications for fill up backlog second division assistant posts. Candidates can apply online till 25-October 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X