ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ 170 ಹುದ್ದೆಗಳಿವೆ
ಬಳ್ಳಾರಿ, ಮಾರ್ಚ್ 9: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಏಪ್ರಿಲ್ 05, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ ಒಟ್ಟು ಹುದ್ದೆ : 170 (36 ಅಂಗನವಾಡಿ ಕಾರ್ಯಕರ್ತೆಯರು ಮತ್ತು 134 ಅಂಗನವಾಡಿ ಸಹಾಯಕಿಯರ ಹುದ್ದೆ)
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಬಳ್ಳಾರಿ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 05, 2021
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06/03/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05/04/2021
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications