WCD Recruitment 2025: ಅಂಗನವಾಡಿ ಹುದ್ದೆಗಳ ನೇಮಕಾತಿ: 274 ಪೋಸ್ಟ್‌ಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ, ಸೆಪ್ಟಂಬರ್ 30: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ (WCD) ವತಿಯಿಂದ ಹೊಸದಾಗಿ 274 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಇಲಾಖೆ ಕೋರಿದೆ.
ಸರ್ಕಾರಿ ಹುದ್ದೆ ಮಾಡಕೆಂದು ಆಸೆ ಹೊಂದಿದವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಸದರಿ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗುಡಿಬಂಡೆ, ಶಿಡ್ಲಘಟ್ಟ ಹಾಗೂ ಗೌರಿಬಿದನೂರು ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತು ಒಮ್ಮೆ ಅಧಿಸೂಚನೆ ಓದಿಕೊಂಡು ಬೇಕಾದರೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕ ವಿಸ್ತರಣೆ ಆದರೂ ಆಗುವ ನಿರೀಕ್ಷೆ ಇದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ
ಹುದ್ದೆಗಳು: ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ
ಪೋಸ್ಟಿಂಗ್: ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ
ಒಟ್ಟು ಹುದ್ದೆ: 274
ಅರ್ಜಿ ಸಲ್ಲಿಕೆ ಕೊನೆ: ಸೆಪ್ಟೆಂಬರ್ 30
ಖಾಲಿ ಹುದ್ದೆಗಳ ಇತರ ಮಾಹಿತಿ
ಕಾರ್ಯಕರ್ತೆ ಹುದ್ದೆ- 33
ಸಹಾಯಕಿ ಹುದ್ದೆ- 241
ಬಾಗೇಪಲ್ಲಿ- 52
ಚಿಕ್ಕಬಳ್ಳಾಪುರ- 40
ಚಿಂತಾಮಣಿ - 77
ಗುಡಿಬಂಡೆ- 7
ಶಿಡ್ಲಘಟ್ಟ-51
ಗೌರಿಬಿದನೂರು-47 ಹುದ್ದೆಗಳಿವೆ.
ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿ
ಚಿಕ್ಕಬಳ್ಳಾಪುರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಉತ್ತೀರ್ಣತೆ ಅಗತ್ಯವಾಗಿದೆ. ಸಹಾಯಕಿ ಹುದ್ದೆಗೆ ಕನಿಷ್ಠ 10ನೇ ತರಗತಿ ಪೂರೈಸಿರಬೇಕು. ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದೊಳಗೆ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ ತಿಳಿಯಿರಿ
ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಂತರ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು. ಅಗತ್ಯ ಎಲ್ಲ ದಾಖಲೆ ಸಮೇತ ಅಪ್‌ಲೋಡ್ ಮಾಡಬೇಕು. ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು. ಕೊನೆಗೆ ಅರ್ಜಿಯನ್ನು ಭವಿಷ್ಯ ಉಪಯೋಗಕ್ಕಾಗಿ ಒಂದು ಪ್ರತಿ ತೆಗೆದಿಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಇಲಾಖಾ ಕಚೇರಿಗೆ ಭೇಟಿ ನೀಡಬಹುದು.












Click it and Unblock the Notifications