• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ 101 ಹುದ್ದೆಗಳಿಗೆ ಅರ್ಜಿ ಆಹ್ವಾನ

|

ಹಾಸನ, ಜನವರಿ 4: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ 101 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಜನವರಿ 30, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ

ಒಟ್ಟು ಹುದ್ದೆ: 101 ಹುದ್ದೆ

ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.

ಉದ್ಯೋಗ ಸ್ಥಳ: ಹಾಸನ, ಕರ್ನಾಟಕ. ಬೇಲೂರು ತಾಲ್ಲೂಕಿನ ಲಕ್ಷ್ಮಿಪುರ ಅಂಗನವಾಡಿ ಕೇಂದ್ರದಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ, ಘಟ್ಟದಹಳ್ಳಿ, ಶಿವನೇಹಳ್ಳಿ, ಹೊಸಮನೆ ಹಾಗೂ ಮಲ್ಲಿಕಾರ್ಜುನಪುರದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 30, 2020

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ:

ಕನಿಷ್ಠ ವರ್ಷ : 18 ವರ್ಷ

ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ : ಮೆರಿಟ್ ಆಧಾರದ ಮೇಲೆ ಭರ್ತಿ, ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-01-2021

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-01-2021

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
WCD Hassan recruitment 2021 notification has been released on official website for the recruitment of 101 vacancies at Women and Child Development Department Hassan (WCD Hassan).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X