ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಜಿಲ್ಲೆ: ಅಂಗನವಾಡಿಯಲ್ಲಿ137 ವಿವಿಧ ಹುದ್ದೆಗಳಿವೆ

|
Google Oneindia Kannada News

ಶಿವಮೊಗ್ಗ, ಆ. 20: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 137 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಸೆಪ್ಟಂಬರ್-23, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 137 ಹುದ್ದೆ (46 ಕಾರ್ಯಕರ್ತೆಯರು + 91 ಸಹಾಯಕಿಯರ ಹುದ್ದೆ)
ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟಂಬರ್ 23, 2020

WCD Shivamogga recruitment 2020 Various Anganwadi worker post

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ :
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-09-2020

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
WCD Shivamogga recruitment 2020 notification has been released on official website for the recruitment of 137 vacancies at Women and Child Development Department, Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X