WCD Yadgir Recruitment 2023: ಯಾದಗಿರಿಯಲ್ಲಿ ಸರ್ಕಾರಿ ಹುದ್ದೆ ನೇಮಕಾತಿ, ಆಯ್ಕೆ, ವಿವರ ಹೀಗಿದೆ

ಬೆಂಗಳೂರು, ಡಿಸೆಂಬರ್ 05: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD Yadgir) ಇಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದು ಇಲಾಖೆ ತಿಳಿಸಿದೆ.

ಯಾದಗಿರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇಲ್ಲಿ ಒಂದು ಹೌಸ್ ಮದರ್ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ.

ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಇದೇ ಡಿಸೆಂಬರ್ 21ರೊಳಗೆ ಅರ್ಜಿ ಸಲ್ಲಿಸಬೇಕು. ಇದಕ್ಕು ಮೊದಲು ಹುದ್ದೆ, ಆಯ್ಕೆ, ವೇತನ ಸೇರಿದಂತೆ ನೇಮಕಾತಿ ಪೂರ್ನ ಮಾಹಿತಿ ಇಲ್ಲಿ ತಿಳಿಯಿರಿ.

WCD Yadgir Recruitment 2023: Interested Candidates Apply WCD Yadgir One Vacant Posts

ನೇಮಕಾತಿ ಪೂರ್ಣ ಮಾಹಿತಿ

ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆ ಹೆಸರು: ಹೌಸ್ ಮದರ್

ಹುದ್ದೆ ಸಂಖ್ಯೆ: ಒಂದು

ಪೋಸ್ಟಿಂಗ್: ಯಾದಿಗಿರಿ

ಅರ್ಜಿ ಸಲ್ಲಿಕೆ ಕೊನೆ ದಿನ: ಡಿಸೆಂಬರ್ 21

ಮಾಸಿಕ ವೇತನ: ನಿಯಮಾನುಸಾರ

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿ.ಎಡ್ ಪೂರ್ಣಗೊಳಿಸಿರಬೇಕು ಎಂದು ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 25 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ ಎಂದು ಇಲಾಖೆ ತಿಳಿಸಿದೆ. ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್​ ಮೂಲಕ ಪಾವತಿಸಬೇಕು ಎಂದು ತಿಳಿಸಿದೆ.

WCD Yadgir Recruitment 2023: Interested Candidates Apply WCD Yadgir One Vacant Posts

ಆಯ್ಕೆ ಹೇಗೆ?

ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಜ್ಞಾನ ಮತ್ತು ಕೌಶಲ್ಯ (ಸ್ಕಿಲ್) ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಉತ್ತೀರ್ಣ ಆದರವರಿಗೆ ಮುಂದಿನ ಸುತ್ತು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಇಲ್ಲಿ ಇಲಾಖೆ ಅಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಆಯ್ಕೆ ಆದವರಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸದ್ಯ ವೇತನ ನಿಗದಿ ಮಾಡಿಲ್ಲ. ಅಭ್ಯರ್ಥಿಗಳ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಕೆ ವಿಳಾಸ

ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತಿ ಭರ್ತಿ ಅರ್ಜಿಯನ್ನು '' ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ (DCPO), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: C-17, 1 ನೇ ಮಹಡಿ, ಜಿಲ್ಲಾ ಆಡಳಿತ ಕಟ್ಟಡ ಸಂಕೀರ್ಣ ಯಾದಗಿರಿ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08473-253347 ಗೆ ಸಂಪರ್ಕಿಸಬಹುದಾಗಿದೆ.

ನೆನಪಿಡಬೇಕಾದ ದಿನಗಳು

ಅರ್ಜಿ ಸಲ್ಲಿಕೆ ಆರಂಭ ದಿನ: ನವೆಂಬರ್ 22

ಅರ್ಜಿ ಸಲ್ಲಿಕೆ ಕೊನೆಯ ದಿನ: ಡಿಸೆಂಬರ್ 21

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+