ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌; ಸ್ಥಳದಲ್ಲೇ ಉದ್ಯೋಗ - 75 ಸಾವಿರ ಆಕಾಂಕ್ಷಿಗಳಿಂದ ಹೆಸರು ನೋಂದಣಿ

ಬೆಂಗಳೂರು, ಫೆಬ್ರವರಿ, 26: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು.

 We Aim To Provide One Lakh Jobs Says Minister Dr. Sharanprakash Patil

ಹೀಗಾಗಿಯೇ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರು ಮತ್ತು ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗ ನೀಡುವ ಯುವ ಜನ ಸಮೃದ್ಧಿ ಸಮ್ಮೇಳನ ಕರ್ನಾಟಕದ ಮಟ್ಟಿಗೆ ಒಂಚು ಚಾರಿತ್ರಿಕ ದಾಖಲೆಯಾಗಲಿದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಇದು ದಾಖಲೆಯೇ ಸರಿ ಎಂದು ಪಾಟೀಲ್ ಪ್ರಶಂಸಿದರು.

ಪಂಚಖಾತ್ರಿಗಳಲ್ಲಿ ಒಂದಾಗಿರುವ ಯುವನಿಧಿ ಕಾರ್ಯಕ್ರಮ ಯುವ ಸಮುದಾಯದ ಬೆನ್ನಲೆಬುಗಿದೆ. 1.40 ಲಕ್ಷ ಪದವೀಧರರು ಹಾಗೂ ಡಿಪೆÇ್ಲೀಮೊದಾರರ ಬ್ಯಾಂಕ್ ಖಾತೆಗಳಿಗೆ ಯುವನಿಧಿ ಹಣ ಸಂದಾಯವಾಗುತ್ತಿದೆ. ಸರ್ಕಾರ ಯುವ ಸಮುದಾಯದ ಜೊತೆಗಿರಲಿದೆ ಎಂದು ಭರವಸೆ ನೀಡಿದರು.

 We Aim To Provide One Lakh Jobs Says Minister Dr. Sharanprakash Patil

ಯುವನಿಧಿ ಅಡಿ ನೋಂದಣಿಯಾಗಿರುವವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಇಂದು ನೆಪಮಾತ್ರಕ್ಕೆ ಉದ್ಯೋಗ ಮೇಳ ನಡೆಯುತ್ತಿಲ್ಲ. ಎಲ್ಲರಿಗೂ ಉದ್ಯೋಗ ಕೊಡಿಸಲಾಗುತ್ತಿದೆ.

ಉದ್ಯೋಗ ಸಿಗದೆ ಇದ್ದ ನೋಂದಾಯಿತರ ದತ್ತಾಂಶಗಳ ಮೇಲೆ ನಿಗಾ ಇಡಲಾಗುವುದು. ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದು, ಅಗತ್ಯ ತರಬೇತಿ ಹಾಗೂ ಕೌಶಲ್ಯ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಮಾದರಿಯಾಗಿ ನಿರುದ್ಯೋಗ ನಿವಾರಣೆಗೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪಾಟೀಲ್ ಭರವಸೆ ನೀಡಿದರು.

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, ಯುವಕರ ಸಮಸ್ಯೆಗಳಿಗೆ ಸರ್ಕಾರದ ಯಂತ್ರ ಸ್ಪಂದಿಸಲಿದೆ. ಬಜೆಟ್‍ನಲ್ಲಿ ಶಿಕ್ಷಣಕ್ಕಿಂತಲೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ನೀಡಲಾಗಿತ್ತು. ಮುಖ್ಯಮಂತ್ರಿಯವರು ಅದಕ್ಕೆ ಸ್ಪಂದಿಸಿದ್ದಾರೆ. ಭವಿಷ್ಯದಲ್ಲಿ ಯುವಜನರ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

‌ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಘೋಷಿಸಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರಗಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ‌ ಸಮೇತ ವಿವರಿಸಿದರು.

ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಭರವಸೆ ನೀಡಿದರು.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+