ಬೀದರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ
ಬೆಂಗಳೂರು, ನವೆಂಬರ್ 23: ಬೀದರ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
90 ಅಂಗನವಾಡಿ ಕಾರ್ಯಕರ್ತರು ಹಾಗೂ 261 ಅಂಗನವಾಡಿ ಸಹಾಯಕ ಒಟ್ಟು 351 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ದಿನಾಂಕ 07-12-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರು ಹುದ್ದೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಇನ್ನು ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯಾದರೂ ಉತ್ತೀರ್ಣರಾಗಿರಬೇಕು.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications