ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 11 ಹುದ್ದೆಗಳಿವೆ

ಬೆಂಗಳೂರು, ಡಿಸೆಂಬರ್ 20 : ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ 11 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೈ ಬರಹದಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಲು 17/1/2019 ಕೊನೆಯ ದಿನವಾಗಿದೆ.

11 ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪ್ರೌಢ ದರ್ಜೆಯ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರಲಿಪಿ ಪ್ರೌಢ ದರ್ಜೆಯ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು 7/3/2012ರ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಆಯ್ಕೆಯಾದ ಮೂರು ತಿಂಗಳೊಳಗಾಗಿ ಶೇ 60ರಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ನೇಮಕಾತಿ ರದ್ದಾಗಲಿದೆ.

Yadgir District Court Recruitment stenographer posts

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗ 35, 2ಎ/2ಬಿ/3ಎ/3ಬಿ 38 ವರ್ಷ. ಪ.ಜಾ/ಪ.ಪಂ./ಪ.ವರ್ಗ-1 40 ವರ್ಷಗಳು. ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+