ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Yadgir Village Accountant Job : ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏ. 29ರೊಳಗೆ ಅರ್ಜಿ ಹಾಕಿ

|
Google Oneindia Kannada News

ಯಾದಗಿರಿ, ಏಪ್ರಿಲ್ 04; ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ 2022ನೇ ಸಾಲಿನಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 29/4/2022 ಕೊನೆಯ ದಿನವಾಗಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ ಆಯ್ಕೆ ಪ್ರಾಧಿಕಾರ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಯಾದಗಿರಿ ಜಿಲ್ಲೆ ಗ್ರಾಮ ಲೆಕ್ಕಿಗರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿದೆ.

RDPR Recruitment 2022 : ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; 6406 ಹುದ್ದೆಗಳು RDPR Recruitment 2022 : ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; 6406 ಹುದ್ದೆಗಳು

ಭರ್ತಿ ಮಾಡಲು ಉದ್ದೇಶಿಸಿರುವ ಗ್ರಾಮ ಲೆಕ್ಕಿಗರ ಒಟ್ಟು ಸಂಖ್ಯೆ 27. ಹೈದ್ರಾಬಾದ್-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸಿರುವ ಹುದ್ದೆಗಳು 27. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 159 ಹುದ್ದೆಗಳಿಗೆ ಅರ್ಜಿ ಹಾಕಿ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 159 ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವ ಸಿಬಿಎಸ್ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು.

Yadgir Village Accountant Recruitment Apply For 27 Post

ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆಗೊಂಡ ಅಭ್ಯರ್ಥಿಗಳ ವಿದ್ಯಾರ್ಹತೆ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಡಪಡಿಸಿಕೊಂಡ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ.

KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 25 ರೂ., 2ಎ/ 2ಬಿ/ 3ಎ/ 3ಬಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 150 ರೂ. ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಬ್ಯಾಂಕ್ ಶುಲ್ಕಗಳನ್ನು ಅಭ್ಯರ್ಥಿಗಳು ಪ್ರತ್ಯೇಕವಾಗಿ ಭರಿಸತಕ್ಕದ್ದು.

ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 2/5/2022.

Yadgir Village Accountant Recruitment Apply For 27 Post

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಯಾದಗಿರಿ ಎಸ್. ಸಿ. ಖಾತೆ ಸಂಖ್ಯೆ 62186114470 ಐಎಫ್‌ಎಸ್‌ಸಿ ಕೋಡ್ SBIN0020225 ಇದಕ್ಕೆ ಸಂದಾಯವಾಗುವಂತೆ ಕಚೇರಿ ಅವಧಿಯಲ್ಲಿ ಶುಲ್ಕ ಪಾವತಿ ಮಾಡಬೇಕು. ಶುಲ್ಕ ಪಾವತಿ ಬಳಿಕ ಬ್ಯಾಂಕ್ ಸೀಲ್ ಹಾಕಲಾದ ಚಲನ್ ಅಪ್‌ಲೋಡ್ ಮಾಡಬೇಕು. ಚಲನ್ ಅಪ್‌ಲೋಡ್ ಮಾಡದ ಅರ್ಜಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ವಯೋಮಿತಿ ವಿವರ; ಅರ್ಜಿಗಳನ್ನು ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕ 29/4/2022ರಂದು ಈ ಕೆಳಕಂಡ ವಯೋಮಿತಿ ಹೊಂದಿರ ತಕ್ಕದ್ದು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.

ಅರ್ಹತಾ ಷರತ್ತುಗಳು; ಅರ್ಜಿ ಸಲ್ಲಿಸುವವರು ಭಾರತೀಯ ನಾಗರೀಕನಾಗಿರಬೇಕು. ಅರ್ಜಿದಾರರು ಶೈಕ್ಷಣಿಕ ವಿದ್ಯಾರ್ಹತೆಯನ್ನು ಕರ್ನಾಟಕ ರಾಜ್ಯದಲ್ಲಿಯೇ ಪೂರ್ಣಗೊಳಿಸಿರಬೇಕು.

ಅರ್ಜಿದಾರರು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ/ ಮಾನಸಿಕ ನ್ಯೂನತೆಯಿಂದ ಮುಕ್ತವಾಗಿರಬೇಕು. ಅಭ್ಯರ್ಥಿ ಈ ಹಿಂದೆ ಯಾವುದೇ ಸರ್ಕಾರದ ಸೇವೆಯಿಂದ ವಜಾಗೊಂಡರಬಾರದು.

ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ಒಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಅಭ್ಯರ್ಥಿಗಳು ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಸಂವಿಧಾನದ ಅನುಚ್ಛೇಧ 371 (ಜೆ) ಅಡಿಯಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಕಂದಾಯ ಉಪ ವಿಭಾಗದ ಉಪವಿಭಾಗಾಧಿಕಾರಿಗಳು ನೀಡಿರುವ ಅರ್ಹತಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಪಡೆದಿರತಕ್ಕದ್ದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ವಿಳಾಸ
https://yadgir-va.kar.nic.in/

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆಗಳು 08473-252703

English summary
Apply for 27 village accountant post at Yadgir. Candidates can apply online till April 29th 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X