ಕೊಡಗಿನಲ್ಲಿ ಕೆಲಸ ಖಾಲಿ ಇದೆ; ಮೇ 31ರಂದು ನೇರ ಸಂದರ್ಶನ
ಬೆಂಗಳೂರು, ಮೇ 23; ಕೊಡಗು ಜಿಲ್ಲೆಯಲ್ಲಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 31ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ 'ಯುವ ಸ್ಪಂದನ' ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ವಯೋಮಿತಿ ವಿವರಗಳು; ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 35 ವರ್ಷಗಳು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.

ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಮೇ 31ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-229985 ಹಾಗೂ 8272-220986.
ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in ಗೆ ಭೇಟಿ ನೀಡುವುದು. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ವಿಳಾಸ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ. ಈ ಹುದ್ದೆಯು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು. ಯಾವುದೇ ಕಾರಣಕ್ಕೂ ಖಾಯಂ ನೇಮಕಾತಿಯೆಂದು ಪರಿಗಣಿಸುವುದಿಲ್ಲ ಹಾಗೂ ಸರ್ಕಾರಿ ನೌಕರರಿಗೆ ಅನ್ವಯವಾಗುವ ಪಿಂಚಣಿ/ ಜಿ.ಪಿ.ಎಫ್ / ಪಿ.ಎಫ್. ಇತರೆ ವಿಶೇಷ ರಜೆ ಸೌಲಭ್ಯಗಳು ಅನ್ವಯವಾಗುವುದಿಲ್ಲ.












Click it and Unblock the Notifications