ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಜಿಟಿಡಿ ಭಾರೀ ಮುನ್ನಡೆ
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಕಾಂಗ್ರೆಸ್ ಪಕ್ಷ ಭಾರೀ ಮುನ್ನಡೆ ಸಾಧಿಸುತ್ತಿದ್ದು, ಆಡಳಿತರೂಢ ಬಿಜೆಪಿ ಪಕ್ಷ ನೀರಿಕ್ಷೆಯಂತೆ ಹಿನ್ನೆಡೆ ಅನುಭವಿಸುತ್ತಿದೆ. ಜೆಡಿಎಸ್ ತನ್ನ ಭದ್ರಕೋಟೆಗಳಲ್ಲಿ ಪ್ರಾಬಲ್ಯ ಮೆರೆಯುತ್ತಿದೆ.
ಜಿದ್ದಾಜಿದ್ದಿನ ಕ್ಷೇತ್ರವಾಗಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ.ದೇವೇಗೌಡ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ತೀವ್ರ ಹಿನ್ನೆಡೆ ಅನುಭವಿಸಿದ್ದಾರೆ. ಇನ್ನುಳಿದಂತೆ ಪಕ್ಕದ ವರುಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದಾರೆ.

ಇದೇ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ, ಜಿಟಿ ದೇವೇಗೌಡ ಅವರೊಂದಿಗೆ ಹೊಂದಾಣಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ಕಾರ್ಯಕರ್ತರ ಆರೋಪಕ್ಕೆ ಸಿದ್ದರಾಮಯ್ಯ ಇತ್ತೀಚೆಗೆ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಜಿ.ಟಿ.ದೇವೇಗೌಡ, ಮಾವಿನಹಳ್ಳಿ ಸಿದ್ದೇಗೌಡ ಅವರ ಊರಿನಲ್ಲಿ ಎಷ್ಟು ಮತ ಪಡೆಯುತ್ತಾರೆ ಎಂಬುದನ್ನು ನೋಡೊಣ. ಅವರನ್ನು ನಾನು ಏಕೆ ಬುಕ್ ಮಾಡಲಿ ಎಂದು ಹೇಳಿದ್ದರು.
ಸದ್ಯದ ಮಾಹಿತಿ ಪ್ರಕಾರ, ಮೈಸೂರು ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್, ಟಿ.ನರಸೀಪುರ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್, ಹುಣಸೂರು ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ, ಕೆ.ಆರ್. ನಗರದಲ್ಲಿ ಸಾರಾ ಮಹೇಶ್ ಹಾಗೂ ನರಸಿಂಹರಾಜದಲ್ಲಿ ಬಿಜೆಪಿಯ ಸಂದೇಶ್ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ಇನ್ನು, 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಬಿಜೆಪಿ 83, ಕಾಂಗ್ರೆಸ್ 107, ಜೆಡಿಎಸ್ 28 ಹಾಗೂ ಇತರರು 6 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.












Click it and Unblock the Notifications