ವರ ಕೊಟ್ಟ ಹನುಮಂತ.. ಗೆದ್ದ ಕಾಂಗ್ರೆಸ್: ಕನ್ನಡದಲ್ಲಿಯೇ ಥ್ಯಾಂಕ್ಸ್ ಹೇಳಿದ್ರು ಪ್ರಿಯಾಂಕಾ ಗಾಂಧಿ
ನವದೆಹಲಿ: ಕರ್ನಾಟಕ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಅಭೂತಪೂರ್ವ ಗೆಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ, ಪ್ರತಿಕ್ರಿಯೆ ನೀಡಿದ್ದಾರೆ.
'ಕಾಂಗ್ರೆಸ್ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು. ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆಯನ್ನು ಕನ್ನಡಿಗರು ವಿರೋಧಿಸಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ, ರಾಜ್ಯ ಕಾಂಗ್ರೆಸ್ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಕರ್ನಾಟಕದ ಜನತೆಗೆ ಕಾಂಗ್ರೆಸ್ ಪಕ್ಷವು ನೀಡಿದ್ದ ಭರವಸೆಗಳನ್ನು ಪೂರ್ಣಗೊಳಿಸಲು ಬದ್ಧವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ಬೆಳಗ್ಗೆ, ಮತ ಎಣಿಕೆ ನಡೆಯುತ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ, ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ಜಖುವಿನ ಹನುಮಾನ್ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ, ಅವರ ಪೂಜೆ ಫಲಿಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಈ ಮಟ್ಟಿಗೆ ಜಯಗಳಿಸಲು ಸಾಧ್ಯವಾಯಿತು ಎಂದು ಬೆಂಬಲಿಗರು ಹೇಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು!
— Priyanka Gandhi Vadra (@priyankagandhi) May 13, 2023
ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆ ವಿರುದ್ಧ ಕನ್ನಡಿಗರು ಕೈ ಏರಿಸಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಕರ್ನಾಟಕ…
ಇನ್ನು, ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಸಿದ್ಧತೆ ನಡೆದಿದೆ. ಸದ್ಯ, ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.












Click it and Unblock the Notifications