keyboard_backspace

'ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ' ಯೋಜನೆಗೆ ಅರ್ಜಿ ಸಲ್ಲಿಸಲು ಮಾಹಿತಿ!

Google Oneindia Kannada News

ಬೆಂಗಳೂರು, ಸೆ. 06: ಮುಖ್ಯಮಂತ್ರಿಯಾದ ತಕ್ಷಣ ಪ್ರಕಟಿಟಿದ್ದ ಯೋಜನೆಗೆ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ 'ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ' ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡಿದ್ದಾರೆ.

ವಿದ್ಯಾರ್ಥಿ ವೇತನ ಯೋಜನೆಯ ಹಿನ್ನೆಲೆಯನ್ನು ವಿವರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ತಾವು ಹಳ್ಳಿಗಳಿಗೆ ಭೇಟಿ ನೀಡಿದಾಗ ರೈತರ ಮಕ್ಕಳು ಹಣಕಾಸಿನ ಕೊರತೆಯ ಕಾರಣ ಎಸ್.ಎಸ್.ಎಲ್.ಸಿ. , ಪಿ.ಯು.ಸಿ.ಗೇ ಓದು ನಿಲ್ಲಿಸಿರುವ ಹಲವಾರು ಪ್ರಕರಣಗಳು ಗಮನಕ್ಕೆ ಬಂದಿತ್ತು. ಈ ಮಕ್ಕಳೂ ವಿದ್ಯಾವಂತರಾದರೆ, ಆ ರೈತರ ಸ್ಥಿತಿಯಲ್ಲೂ ಸುಧಾರಣೆಯಾಗಲು ಸಾಧ್ಯ ಎಂಬ ಚಿಂತನೆಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.

ಈ ಯೋಜನೆ ಮೂಲಕ ಎಸ್‌ಎಸ್‌ಎಲ್‌ಸಿ ನಂತರ ನಂತರ ವಿವಿಧ ಕೋರ್ಸ್ ಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಸುಮಾರು 17 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡುವ ಗುರಿ ಹೊಂದಲಾಗಿದೆ. ಈ ಯೋಜನೆಯನ್ನು ಪಡೆಯುವುದು ಹೇಗೆ ಎಂಬುದು ಮುಂದಿದೆ.

ಯಾರಿಗೆ ಈ ಯೋಜನೆಯಿಂದ ಅನುಕೂಲ?

ಯಾರಿಗೆ ಈ ಯೋಜನೆಯಿಂದ ಅನುಕೂಲ?

ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾಭ್ಯಾಸ ಮುಂದುವರೆಸುವ ರೈತರ ಮಕ್ಕಳಿಗೆ ಈ ಯೋಜನೆಯ ಲಾಭ ಪಡೆಯಬಹುದು. ಮತ್ತೊಂದೆಡೆ, ಬಿಎ, ಬಿಎಸ್ಸಿ, ಬಿ.ಕಾಂ, ಎಂಬಿಬಿಎಸ್, ಬಿಇ, ಮತ್ತು ಇತರ ವೃತ್ತಿಪರ ಕೋರ್ಸ್‌ಗಳನ್ನು ಅದ್ಯಯನ ಮಾಡುವ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಯೋಜನೆಯಿಂದ ವಿದ್ಯಾರ್ಥಿ ವೇತನ ಸಿಗಲಿದೆ. ವಿದ್ಯಾರ್ಥಿಗಳಿಗೆ 5000 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ 5500 ರೂಪಾಯಿಗಳನ್ನು ಕೊಡಲಾಗುತ್ತಿದೆ.

ಜೊತೆಗೆ ಕಾನೂನು, ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಔದ್ಯೋಗಿಕ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಗೆ 7,500 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ 8,000 ರೂಪಾಯಿ ವಿದ್ಯಾರ್ಥಿ ವೇತನವನ್ನು ಕೊಡಲಾಗುತ್ತದೆ.

ಈಗಾಗಲೇ ವಿದ್ಯಾರ್ಥಿ ವೇತನ ಪಡೆದವರಿಗೆ ಅರ್ಹತೆಯಿಲ್ಲ

ಈಗಾಗಲೇ ವಿದ್ಯಾರ್ಥಿ ವೇತನ ಪಡೆದವರಿಗೆ ಅರ್ಹತೆಯಿಲ್ಲ

ಸ್ನಾತಕೋತ್ತರ ಪದವಿ ಮುಂದುವರೆಸುವ ರೈತರ ಮಕ್ಕಳು ವಿದ್ಯಾರ್ಥಿಗಳಾದಲ್ಲಿ 10,000 ರೂಪಾಯಿಗಳು, ವಿದ್ಯಾರ್ಥಿನಿಯರಾದರೆ ತಮ್ಮ ಉನ್ನತ ವ್ಯಾಸಂಗಕ್ಕಾಗಿ 11,000 ರೂಪಾಯಿಗಳ ವಿದ್ಯಾರ್ಥಿವೇತನ ಪಡೆಯುತ್ತಾರೆ.

ಆದರೆ ರೈತ ಕುಟುಂಬಗಳಿಗೆ ಸೇರಿದ ಕೆಲವು ವಿದ್ಯಾರ್ಥಿಗಳು ಈಗಾಗಲೇ ಅರ್ಹತೆಯ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ಪಡೆಯುತ್ತಿದ್ದರೆ, ಅವರು ಈ ಯೋಜನೆಗೆ ಅನರ್ಹರು. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವು ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಈ ಯೋಜನೆಯಡಿ ಕೆಲವು ಕೋರ್ಸ್‌ಗಳಿಗೆ ವಿದ್ಯಾರ್ಥಿವೇತನ ಪಡೆಯಬಹುದು. ಈಗಾಗಲೇ ಪಡೆಯುತ್ತಿರುವ ಕೋರ್ಸ್‌ನಲ್ಲಿ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೆ ಮತ್ತು ಆ ಕೋರ್ಸ್ ಬದಲಾಯಿಸಲು ಬಯಸುವವರು ಈ ವಿದ್ಯಾರ್ಥಿವೇತನಕ್ಕೆ ಅರ್ಹರಾಗುವುದಿಲ್ಲ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವುದು ಹೇಗೆ?

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯವಾಗಿವೆ. ವಿದ್ಯಾರ್ಥಿಯ 10 ನೇ ವರ್ಗದ ಅಂಕಪಟ್ಟಿ, ಆಧಾರ್ ಕಾರ್ಡ್ ಅಥವಾ ವೋಟರ್ ಕಾರ್ಡ್‌ನಂತಹ ಗುರುತಿನ ಪುರಾವೆ ಬೇಕು. ಜೊತೆಗೆ ಉನ್ನತ ಅಧ್ಯಯನ ಮಾಡುತ್ತಿರುವ ಬಗ್ಗೆಯೂ ಪ್ರವೇಶ ಪಡೆದ ಬಗ್ಗೆ ದಾಖಲೆಯ ಪುರಾವೆ ಬೇಕು. ಅದರೊಂದಿಗೆ ರೈತರ ಮಕ್ಕಳು ಎಂಬುದಕ್ಕೆ ಪುರಾವೆ ಒದಗಿಸುವಂತಹ ದಾಖಲೆ ಕೊಡಬೇಕು.

ಅದರೊಂದಿಗೆ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರ, ಐಎಫ್‌ಎಸ್‌ಸಿ ಕೋಡ್, ಬ್ಯಾಂಕ್ ಕುರಿತು ಸಂಪೂರ್ಣ ವಿವರ ಕೊಡಬೇಕು. ಜೊತೆಗೆ ಒಂದು ಪಾಸ್‌ಪೋರ್ಟ್‌ ಅಳತೆಯೆ ಭಾವಚಿತ್ರವನ್ನು ಅಪ್‌ಲೋಡ್‌ ಮಾಡಬೇಕು. ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ಇಲ್ಲಿ ಕೊಟ್ಟಿರುವ ಲಿಂಕ್ ಒತ್ತುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲಬಹುದು. ಶೀಘ್ರದಲ್ಲಿಯೇ ಆ ವೆಬ್‌ಸೈಟ್ ಲಿಂಕ್‌ನ್ನು ನಾವು ಹಾಕಲಿದ್ದೇವೆ.

Recommended Video

ಹಬ್ಬ ಮಾಡೋಕೆ ಹೆದರಿದ ಜನಸಾಮಾನ್ಯರು | Oneindia Kannada
ತಾಲೂಕು, ಜಿಲ್ಲಾ ಕೃಷಿ ಅಧಿಕಾರಿಗಳಿಂದ ಸಹಾಯ!

ತಾಲೂಕು, ಜಿಲ್ಲಾ ಕೃಷಿ ಅಧಿಕಾರಿಗಳಿಂದ ಸಹಾಯ!

ವಿದ್ಯಾರ್ಥಿಯ ಹೆಸರು, ವಯಸ್ಸು, 10 ನೇ ತರಗತಿ ಪಾಸಾದ ವರ್ಷ, ತಂದೆಯ ಹೆಸರು, ತಾಯಿಯ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ ಕೋಡ್ ಮತ್ತು ಇತರ ಕೆಲವು ವಿವರಗಳಂತಹ ಎಲ್ಲಾ ಅಗತ್ಯ ವಿವರಗಳನ್ನು ನೀವು ನಮೂದಿಸಬೇಕು. ಒಂದು ಬಾರಿ ಅರ್ಜಿ ಅಪ್‌ಲೋಡ್‌ ಆಗ ಬಳಿಕ ಅದು ಪರಿಶೀಲನಾ ಪ್ರಕ್ರಿಯೆಗೆ ಹೋಗುತ್ತದೆ.

ಒಂದು ವೇಳೆ ನಿಮ್ಮ ಅರ್ಜಿ ನಮೂನೆಯನ್ನು ಸ್ವೀಕರಿಸಿದಲ್ಲಿ ನಿಮಗೆ ಸೂಚಿಸಲಾಗುತ್ತದೆ ಮತ್ತು ವಿದ್ಯಾರ್ಥಿವೇತನ ಮೊತ್ತವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ತಿಂದರೆ ಕಂಡು ಬಂದಲ್ಲಿ ಆಯಾ ತಾಲೂಕುಗಳ ಕೃಷಿ ಅಧಿಕಾರಿಗಳು ಅಥವಾ ಜಿಲ್ಲಾ ಕೃಷಿ ಉಪ ನಿರ್ದೇಶಕರನ್ನು ಭೇಟಿ ಮಾಡಿ ಮಾಹಿತಿ ಪಡೆಯಬಹುದು.

English summary
Karnataka Farmers Child Scholarship Scheme 2021 for Higher Education of Farmers Children; Check Eligibility, Documents required, scholarship amount and how to apply. Read on.
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X