ಕರ್ನಾಟಕದಲ್ಲಿ ಕೊವಿಡ್-19 ರೋಗಿಗಳ ಹೋಮ್ ಐಸೋಲೇಷನ್ ಮಾರ್ಗಸೂಚಿಗಳೇನು?
ನವದೆಹಲಿ, ಜನವರಿ 6: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಕೊವಿಡ್-19 ಲಕ್ಷಣರಹಿತ ಹಾಗೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಸೋಂಕಿತರ ಗೃಹ ಪ್ರತ್ಯೇಕತೆಗೆ (Home Isolation) ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.
ರಾಜ್ಯದಲ್ಲಿ ಈಗಾಗಲೇ ಕೊವಿಡ್-19 ಪಾಸಿಟಿವಿಟಿ ದರ 7.5ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 5,031 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 4,324 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಹರಡುವಿಕೆ ತೀವ್ರತೆಯೇ ಮೂರನೇ ಅಲೆಯು ಹೆಚ್ಚಾಗುವುದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಕೊವಿಡ್-19 ಲಕ್ಷಣಗಳೇ ಇಲ್ಲದ ಸೋಂಕಿತರು ಹಾಗೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಸೋಂಕಿತರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ.

ಸೌಮ್ಯ ಲಕ್ಷಣ ಹಾಗೂ ಲಕ್ಷಣರಹಿತ ಸೋಂಕಿತರು
ಕೊರೊನಾವೈರಸ್ ಲಕ್ಷಣರಹಿತ ರೋಗಿಗಳು ಪ್ರಯೋಗಾಲಯದ ದೃಢಪಡಿಸಿದ ಪ್ರಕರಣಗಳಾಗಿದ್ದು, ಅವರು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ ಹಾಗೂ ಶೇಕಡಾ 93ಕ್ಕಿಂತ ಹೆಚ್ಚು ಆಮ್ಲಜನಕದ ಶುದ್ಧತ್ವವನ್ನು ಹೊಂದಿರುತ್ತಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಸೌಮ್ಯ ಲಕ್ಷಣಗಳನ್ನು ಹೊಂದಿರುವವರನ್ನೂ ಸೋಂಕಿತರು ಎಂದು ಪರಿಗಣಿಸಲಾಗುತ್ತದೆ. ಶ್ವಾಸಕೋಶ ಸಮಸ್ಯೆ, ಜ್ವರ ಹಾಗೂ ಉಸಿರಾಟ ಸಮಸ್ಯೆಯನ್ನು ಹೊಂದಿರುವ ಸೋಂಕಿತರಲ್ಲಿ ಶೇ.93ರಷ್ಟು ಆಮ್ಲಜನಕ ಶುದ್ಧತ್ವ ಇರುತ್ತದೆ. ಕಳೆದ ಎರಡು ವರ್ಷಗಳಲ್ಲಿ ಭಾರತ ಸೇರಿದಂತೆ ಜಗತ್ತಿನ ಬಹುಪಾಲು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿತರು ಲಕ್ಷಣರಹಿತರು ಹಾಗೂ ಸೌಮ್ಯ ಲಕ್ಷಣಗಳನ್ನು ಹೊಂದಿರುವವರೇ ಆಗಿದ್ದಾರೆ.

ಯಾರಿಗೆ ಹೋಮ್ ಐಸೋಲೇಷನ್ ವ್ಯವಸ್ಥೆ ಇರುತ್ತದೆ?
* ಸೌಮ್ಯ ಮತ್ತು ಲಕ್ಷಣರಹಿತ ಕೊರೊನಾವೈರಸ್ ರೋಗಿ ಎಂಬುದರ ಕುರಿತು ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದ ಪ್ರಯೋಗಿಕ ವರದಿ ಅಗತ್ಯವಾಗಿರುತ್ತದೆ. ಹೆಚ್ಚುವರಿಯಾಗಿ, ಪರೀಕ್ಷೆ, ವೈದ್ಯಕೀಯ ನಿರ್ವಹಣೆಗೆ ಸಂಬಂಧಿಸಿದ ಮಾರ್ಗದರ್ಶನ, ಅಗತ್ಯವಿದ್ದಲ್ಲಿ ಆಸ್ಪತ್ರೆಯ ಬೆಡ್‌ನ ಪಡೆಯಲು ಕುಟುಂಬಕ್ಕೆ ಜಿಲ್ಲೆ/ಉಪಜಿಲ್ಲಾ ಮಟ್ಟದಲ್ಲಿ ಗೊತ್ತುಪಡಿಸಿದ ನಿಯಂತ್ರಣ ಕೊಠಡಿಯ ಸಂಪರ್ಕ ಸಂಖ್ಯೆ ಒದಗಿಸಬೇಕು.
* ಅಂತಹ ಪ್ರಕರಣಗಳು ಸ್ವಯಂ-ಪ್ರತ್ಯೇಕತೆಗಾಗಿ ಮತ್ತು ಕುಟುಂಬದ ಸಂಪರ್ಕಗಳನ್ನು ನಿರ್ಬಂಧಿಸಲು ಮನೆಯಲ್ಲಿ ಅಗತ್ಯವಾದ ಸೌಲಭ್ಯ ಹೊಂದಿರಬೇಕು.
* ಹೋಮ್ ಐಸೋಲೇಷನ್ ನಲ್ಲಿರುವ ರೋಗಿಯ ಆರೈಕೆದಾರರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿರಬೇಕು. ದಿನದ 24/7 ರೋಗಿಯ ಆರೈಕೆಗೆ ಅವರು ಲಭ್ಯವಾಗಿರಬೇಕು. ಹೋಮ್ ಐಸೋಲೇಷನ್ ಅವಧಿಯಲ್ಲಿ ಈ ಆರೈಕೆದಾರರೇ ರೋಗಿ ಮತ್ತು ವೈದ್ಯಕೀಯ ಅಧಿಕಾರಿ ನಡುವೆ ಸಂಪರ್ಕ ಸೇತುವೆ ಆಗಿರಬೇಕು.
* 60 ವರ್ಷ ಮೀರಿದ ವ್ಯಕ್ತಿ ಹಾಗೂ ತೀವ್ರ ಅಸ್ವತ್ಥತೆ ಎದುರಿಸುತ್ತಿರುವ, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ವೈದ್ಯರಲ್ಲಿ ಸೂಕ್ತ ತಪಾಸಣೆ ನಂತರವಷ್ಟೇ ಹೋಮ್ ಐಸೋಲೇಷನ್ ಗೆ ಅನುಮತಿ ನೀಡಲಾಗುವುದು.
* ರೋಗ ನಿರೋಧಕ ಶಕ್ತಿಯನ್ನು ತಗ್ಗಿಸುವ (ಎಚ್ಐವಿ, ಕ್ಯಾನ್ಸರ್ ಸೇರಿದಂತೆ) ಹಲವು ರೋಗಗಳಿಂದ ಬಳಲುತ್ತಿರುವ ಕೊವಿಡ್-19 ಸೋಂಕಿತರಿಗೆ ಹೋಮ್ ಐಸೋಲೇಷನ್ ನಲ್ಲಿ ಇರುವುದಕ್ಕೆ ಅನುಮತಿ ನೀಡುವುದಿಲ್ಲ. ಒಂದು ವೇಳೆ ಇಂಥ ರೋಗಿಗಳಿಗೆ ಹೋಮ್ ಐಸೋಲೇಷನ್ ನೀಡುವುದಾದರೆ ವೈದ್ಯಕೀಯ ಅಧಿಕಾರಿಯಿಂದ ಪೂರ್ವಾನುಮತಿ ಪಡೆದುಕೊಂಡಿರಬೇಕು.
* ಒಬ್ಬ ರೋಗಿಗೆ ಹೋಮ್ ಐಸೋಲೇಷನ್ ನಲ್ಲಿ ಇರುವುದಕ್ಕೆ ಅನುಮತಿ ನೀಡಿದ್ದಲ್ಲಿ, ಕುಟುಂಬದ ಇತರೆ ಸದಸ್ಯರು ಹೋಮ್ ಕ್ವಾರೆಂಟೇನ್‌ನಲ್ಲಿ ಇರಬೇಕು. ಹೋಮ್ ಕ್ವಾರೆಂಟೇನ್ ಮಾರ್ಗಸೂಚಿಯನ್ನು ಪಾಲನೆ ಮಾಡುವುದು ಕಡ್ಡಾಯವಾಗಿರುತ್ತದೆ.

ಕೊವಿಡ್-19 ರೋಗಿಯ ಚಿಕಿತ್ಸೆ ವಿಧಾನ ಹೇಗಿರುತ್ತೆ?
* ಕೊರೊನಾವೈರಸ್ ಸೋಂಕಿತನು ಚಿಕಿತ್ಸೆ ನೀಡುವ ವೈದ್ಯಾಧಿಕಾರಿ ಜೊತೆಗೆ ಸಂಪರ್ಕದಲ್ಲಿರಬೇಕು, ತಮ್ಮ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಪ್ರಾಮಾಣಿಕವಾಗಿ ಹೇಳಿಕೊಳ್ಳಬೇಕು
* ವೈದ್ಯಕೀಯ ಚಿಕಿತ್ಸೆ ವೇಳೆ ರೋಗಿಯ ಜೊತೆಗೆ ಸಂಪರ್ಕದಲ್ಲಿರುವ ವ್ಯಕ್ತಿಗಳು ಅಸ್ವತ್ಥಗೊಂಡರೆ ಅಂಥವರಿಗೂ ಔಷಧಿಯನ್ನು ನೀಡುವುದು
* ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಇ-ಸಂಜೀವಿನಿ ಎಂಬ ದೂರವಾಣಿ ಸಂಪರ್ಕ ವೇದಿಕೆಯನ್ನು ಬಳಸಿಕೊಳ್ಳಬೇಕು.
* ರೋಗಿಗಳು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಗೆ ಸಂಬಂಧಿಸಿದಂತೆ ರೋಗದ ಲಕ್ಷಣಗಳ ಬಗ್ಗೆ ಜಾಗೃತರಾಗಿರಬೇಕು
* ಕೊವಿಡ್-19 ರೋಗಿಗಳು ದಿನಕ್ಕೆ ಮೂರು ಬಾರಿ ಬಿಸಿ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು
* ಒಂದು ವೇಳೆ ಜ್ವರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ಯಾರಾಸಿಟಮಲ್ 650 ಎಂಜಿ ಮಾತ್ರೆಯನ್ನು ದಿನಕ್ಕೆ ನಾಲ್ಕು ಬಾರಿ ತೆಗೆದುಕೊಳ್ಳಬೇಕು

ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಮಂದಿಗೆ ಸೋಂಕು
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ರಾಜ್ಯದಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 5031 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಒಬ್ಬರು ಮೃತಪಟ್ಟಿದ್ದು, 271 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ ಈವರೆಗೂ 3022603 ಸೋಂಕಿತರು ಗುಣಮುಖರಾಗಿದ್ದರೆ, 2962043 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 22173 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications