#LifeAfterCorona: Science is God ಎಂದ ಮಠ ಗುರುಪ್ರಸಾದ್
ಲಾಕ್ಡೌನ್ ಪರಿಸ್ಥಿತಿಯಲ್ಲಿರುವ ನಮ್ಮ ಜನ ಸಮುದಾಯಕ್ಕೆ ನಿಯಮ ಪಾಲನೆ ಸಂಕಲ್ಪ ನಿಷ್ಠ ಬೇಕಿದೆ. ಮುಂದೇನು ಎಂಬುದರ ಬಗ್ಗೆ ಮುನ್ನೋಟಗಳು ಬೇಕಿವೆ. ದೂರದೃಷ್ಟಿಯಿಂದ ಕೂಡಿರುವ ಸಲಹೆ, ಸೂಚನೆಗಳು ಜನರಲ್ಲಿ ಆತ್ಮವಿಶ್ವಾಸ ತುಂಬಬಹುದು, ಅತ್ಯಂತ ಕೆಟ್ಟ ಸನ್ನಿವೇಶವನ್ನು ಎದುರಿಸಲು ಜನರನ್ನು ಸಜ್ಜುಗೊಳಿಸಬಹುದು ಎಂಬ ನಂಬಿಕೆ, ವಿಶ್ವಾಸ ನಮ್ಮಲಿದೆ. ಈ ನಿಟ್ಟಿನಲ್ಲಿ ಒನ್ಇಂಡಿಯಾ ಕನ್ನಡ #LifeAfterCorona ಸರಣಿ ಆರಂಭಿಸಿದ್ದು, ಈ ಸರಣಿಯ ಮೂರನೇ ಲೇಖನ/ವಿಡಿಯೋದಲ್ಲಿ ಮಠ ಚಿತ್ರ ಖ್ಯಾತಿಯ ಗುರುಪ್ರಸಾದ್ ಅವರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.
Recommended Video
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಕೊರೊನಾ ನಂತರ ಜನಜೀವನದಲ್ಲಿ ದೊಡ್ಡ ಮಟ್ಟದ ಬದಲಾವಣೆ ನಿರೀಕ್ಷೆಯೂ ಕಷ್ಟ ಎನ್ನುವ ಮಾತುಗಳಿವೆ. ಈ ಕುರಿತು ಇನ್ನಷ್ಟು ಆಳವಾದ ಒಳನೋಟಗಳು ಈ ಕಾಲದ ಅಗತ್ಯ.

ಸಿನಿಮಾ ನಿರ್ದೇಶಕ, ಸಂಭಾಷಣೆಕಾರ, ಗೀತರಚನೆಕಾರ ಹಾಗೂ ನಟ 'ಮಠ' ಗುರುಪ್ರಸಾದ್ ಅವರು ತಮ್ಮ ಮುಂದಿನ ಸಿನಿಮಾ 'ರಂಗನಾಯಕ' ಚಿತ್ರಕಥೆ ಮಾಡಿಕೊಳ್ಳುವಲ್ಲಿ ಬಿಜಿಯಾಗಿದ್ದಾರೆ. ಅದರ ಜತೆ ಜತೆಗೆ ಆಗಾಗ ಫೇಸ್ ಬುಕ್ ಲೈವ್ ಬರುತ್ತಿದ್ದು, ಸ್ಕ್ರಿಪ್ಟ್ ಬರವಣಿಗೆ ಬಗ್ಗೆ ಆನ್ ಲೈನ್ ಕ್ಲಾಸ್ ಮಾಡುವ ಉಮೇದಿನಲ್ಲಿದ್ದಾರೆ. ಈ ಮಧ್ಯೆ ಒನ್ಇಂಡಿಯಾ ಕನ್ನಡದ ಅಭಿಯಾನದ ಪ್ರಶ್ನೆಗಳಿಗೆ ತಮ್ಮದೇ ಧಾಟಿಯ ಉತ್ತರ ನೀಡಿದ್ದಾರೆ. ಇದರಲ್ಲಿ ಗುರು 'ಪಂಚ್' ಇದೆ. ಕೊಂಚ ಎಮೋಷನ್ ಇದೆ. ಅದೆಲ್ಲಕ್ಕಿಂತ ಸೈನ್ಸ್ ಇಸ್ ಗಾಡ್ ಎಂಬ ಸ್ಟೇಟ್ ಮೆಂಟ್ ಇದೆ. 'ಮುಚ್ಚಿಕೊಂಡು', ಅಂದರೆ 'ಕಿಟಕಿ ಮುಚ್ಚಿಕೊಂಡು' ಮನೆಯಲ್ಲಿದ್ದು ಬಿಡಿ ಎಂಬ ಆಗ್ರಹಪೂರ್ವಕ ಸಲಹೆಯನ್ನೂ ನೀಡಿದ್ದಾರೆ. ನಮ್ಮ ಪ್ರಶ್ನೆಗಳಿಗೆ 'ಗುರು ಉಪದೇಶ' ಅಲ್ಲ, ಉತ್ತರ ಇದೆ.
ಕೊರೊನಾ ನಂತರದ ಬದುಕು ಹೇಗಿರಬಹುದು? ಎಂಬ ಮುಖ್ಯ ಪ್ರಶ್ನೆ ಜೊತೆಗೆ ಈ ಕೆಳಗಿನ ನಾಲ್ಕು ಪ್ರಶ್ನೆಗಳಿಗೆ ಉತ್ತರವನ್ನು ನೀವು ಕಳಿಸಬಹುದು

1. ಕೊರೊನಾ ಸೃಷ್ಟಿಸಿರುವ ಈ ಬಿಕ್ಕಟ್ಟನ್ನು ವೈಯಕ್ತಿಕವಾಗಿ ಹೇಗೆ ಎದುರಿಸುತ್ತಿದ್ದೀರಾ?
2. ವೈದ್ಯಲೋಕದ ಈ ಸವಾಲವನ್ನು ಹೇಗೆ ಅರ್ಥೈಸುತ್ತೀರಾ? ಇದರ ಕೊನೆ ಯಾವಾಗ ಮತ್ತು ಹೇಗೆ ಆಗಬಹುದು ಅಂತ ಅನ್ನಿಸುತ್ತಿದೆ?
3. 'ಕೊರೊನಾ ನಂತರ ಹಳೇ ವ್ಯವಸ್ಥೆಯೇ ಇನ್ನಷ್ಟು ಬಲಗೊಳ್ಳುತ್ತದೆ, ಶ್ರೀಮಂತರು ಹಾಗೂ ಆಳುವ ವ್ಯವಸ್ಥೆಗಳು ಇನ್ನಷ್ಟು ಪ್ರಬಲರಾಗುತ್ತಾರೆ' ಎಂಬ ವಿಶ್ಲೇಷಣೆ ಇದೆ, ನಿಮಗೆ ಏನು ಅನ್ನಿಸುತ್ತದೆ?
4. ಮುಂದಿನ ಕೆಲವು ದಿನಗಳಲ್ಲಿ ಕೊರೊನಾ ಒಡ್ಡುವ ಸವಾಲುಗಳು ಹೇಗಿರಬಹುದು? ಅದಕ್ಕಾಗಿ ಸಿದ್ಧತೆ ಹೇಗಿರಬೇಕು?
ನಿಮ್ಮ ಬರಹ/ವಿಡಿಯೋವನ್ನು ಇಮೇಲ್ [email protected] ಮಾಡಿ, ಅಥವಾ ವಾಟ್ಸಾಪ್ ಸಂಖ್ಯೆಗೆ ಕಳಿಸಿ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications