• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

#LifeAfterCorona: ದೇಶಿ ಉತ್ಪನ್ನ, ದೇಶಿ ಪ್ರತಿಭೆಗೆ ಬೆಲೆ ಸಿಗುವಂತಾಗಲಿ

By ಶ್ರೀಹರ್ಷ ಸಾಲಿಮಠ, ಸಿಡ್ನಿ
|

ಒನ್ಇಂಡಿಯಾ ಕನ್ನಡ' #LifeAfterCorona, #ಕೊರೊನಾನಂತರದಬದುಕು ಹ್ಯಾಶ್‌ಟ್ಯಾಗ್‌ ಅಡಿಯಲ್ಲಿ ತಜ್ಞರು, ಆಲೋಚನೆ ಮಾಡುವವರಿಂದ ಕೊರೊನಾ ನಂತರದ ಬದುಕು ಹೇಗಿರಬಹುದು? ಎಂಬ ಪ್ರಶ್ನೆಗೆ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ.

ಕೊರೊನಾವೈರಸ್‌ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ.

ಹಾಗಂತ ದೊಡ್ಡ ಮಟ್ಟದ ಬದಲಾವಣೆ ನಿರೀಕ್ಷೆಯೂ ಕಷ್ಟ ಎನ್ನುತ್ತಿದ್ದಾರೆ. ಈ ಕುರಿತು ಇನ್ನಷ್ಟು ಆಳವಾದ ಒಳನೋಟಗಳು ಈ ಕಾಲದ ಅಗತ್ಯ. ಈ ನಿಟ್ಟಿನಲ್ಲಿ ಸಿಡ್ನಿಯಲ್ಲಿ ನೆಲೆಸಿರುವ ದಾವಣಗೆರೆ ಮೂಲದ ಸಾಫ್ಟ್ ವೇರ್ ತಂತ್ರಜ್ಞ ಶ್ರೀಹರ್ಷ ಸಾಲಿಮಠ ಅವರು ತಮ್ಮ ಅಭಿಪ್ರಾಯವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಸರಳ ಜೀವನವನ್ನು ಅನುಸರಿಸುವವರಿಗೆ ಕೊರೊನಾ, ಲಾಕ್ಡೌನ್ ಹೆಚ್ಚಾಗಿ ಬಾಧಿಸುವುದಿಲ್ಲ, ಕ್ಯಾಪಿಟಲಿಸಂ ನಾಗಲೋಟಕ್ಕೆ ಬ್ರೇಕ್ ಬಿದ್ದಿರುವುದು ಸಂತೋಷ. ಸೋಂಕು ಹರಡದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕಿತ್ತು ಕೂಗು ಕೇಳಿ ಬಂದಿದ್ದು ತಪ್ಪಲ್ಲ, ಜನರಿಗೆ ಹಣದ ಹುಚ್ಚು ಬಿಟ್ಟಿಲ್ಲ, ಕೊಳ್ಳುಬಾಕತನ ಬದಲಾಗದೆ ಹೊಸ ವಾತಾವರಣ ನಿರೀಕ್ಷೆ ಸಾಧ್ಯವಿಲ್ಲ. ದೇಶದ ಆರ್ಥಿಕ ದೃಷ್ಟಿಯಿಂದ, ವಲಸೆ ಕಾರ್ಮಿಕರ ಸಮಸ್ಯೆಗೆ ಪರಿಹಾರ ರೂಪ ಎಂಬಂತೆ ಸಮರ್ಥವಾದ ರೂಪುರೇಷೆ ಅಗತ್ಯ, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ, ಸ್ಥಳೀಯ ಉತ್ಪನ್ನಗಳಿಗೆ ಮಾನ್ಯತೆ ಸಿಕ್ಕರೆ ದೇಶದ ಆರ್ಥಿಕ ಮೌಲ್ಯವೂ ಹೆಚ್ಚಾಗಲಿದೆ ಎಂದಿದ್ದಾರೆ ಶ್ರೀಹರ್ಷ.. ಇನ್ನಷ್ಟು ವಿಡಿಯೋದಲ್ಲಿ ನೋಡಿ..

ನಿಮ್ಮ ಉತ್ತರಗಳನ್ನು ಸರಣಿ ರೂಪದಲ್ಲಿ 'ಒನ್‌ಇಂಡಿಯಾ ಕನ್ನಡ' ವೆಬ್‌ಸೈಟ್ ಹಾಗೂ ಅದರ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಮುಂದಿಡುತ್ತೇವೆ. ಉತ್ತರಗಳು ಬರಹ ರೂಪದಲ್ಲಿ ಅಥವಾ ವಿಡಿಯೋ ಹೇಳಿಕೆಗಳ ರೂಪದಲ್ಲಿ ಅಥವಾ ಎರಡೂ ರೀತಿಯಲ್ಲಿ ಇದ್ದರೂ ಸಮಸ್ಯೆ ಇಲ್ಲ.

#LifeAfterCorona: ನಿಮಗಾಗಿ, ನಿಮ್ಮವರ ಒಳಿತಿಗಾಗಿ ಮುಂಜಾಗ್ರತೆ ವಹಿಸಿ

1. ಕೊರೊನಾ ಸೃಷ್ಟಿಸಿರುವ ಈ ಬಿಕ್ಕಟ್ಟನ್ನು ವೈಯಕ್ತಿಕವಾಗಿ ಹೇಗೆ ಎದುರಿಸುತ್ತಿದ್ದೀರಾ?

2. ವೈದ್ಯಲೋಕದ ಈ ಸವಾಲವನ್ನು ಹೇಗೆ ಅರ್ಥೈಸುತ್ತೀರಾ? ಇದರ ಕೊನೆ ಯಾವಾಗ ಮತ್ತು ಹೇಗೆ ಆಗಬಹುದು ಅಂತ ಅನ್ನಿಸುತ್ತಿದೆ?

3. 'ಕೊರೊನಾ ನಂತರ ಹಳೇ ವ್ಯವಸ್ಥೆಯೇ ಇನ್ನಷ್ಟು ಬಲಗೊಳ್ಳುತ್ತದೆ, ಶ್ರೀಮಂತರು ಹಾಗೂ ಆಳುವ ವ್ಯವಸ್ಥೆಗಳು ಇನ್ನಷ್ಟು ಪ್ರಬಲರಾಗುತ್ತಾರೆ' ಎಂಬ ವಿಶ್ಲೇಷಣೆ ಇದೆ, ನಿಮಗೆ ಏನು ಅನ್ನಿಸುತ್ತದೆ?

4. ಮುಂದಿನ ಕೆಲವು ದಿನಗಳಲ್ಲಿ ಕೊರೊನಾ ಒಡ್ಡುವ ಸವಾಲುಗಳು ಹೇಗಿರಬಹುದು? ಅದಕ್ಕಾಗಿ ಸಿದ್ಧತೆ ಹೇಗಿರಬೇಕು?

ನಿಮ್ಮ ಬರಹ/ವಿಡಿಯೋವನ್ನು ಇಮೇಲ್ (lifeaftercorona@one.in) ಮಾಡಿ.

English summary
#LifeAfterCorona: Software Professional Sriharsha Salimath hope Indigenous talent rising can makeway for .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more