#LifeAfterCorona: ಇನ್ನಷ್ಟು ಆರ್ಥಿಕ ಕುಸಿತಕ್ಕೆ ಸಿದ್ಧರಾಗಬೇಕಿದೆ
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ ಮಟ್ಟದ ಬದಲಾವಣೆ ನಿರೀಕ್ಷೆಯೂ ಕಷ್ಟ ಎನ್ನುತ್ತಿದ್ದಾರೆ. ಈ ಕುರಿತು ಇನ್ನಷ್ಟು ಆಳವಾದ ಒಳನೋಟಗಳು ಈ ಕಾಲದ ಅಗತ್ಯ.
'ಒನ್ಇಂಡಿಯಾ ಕನ್ನಡ' #LifeAfterCorona, #ಕೊರೊನಾನಂತರದಬದುಕು ಹ್ಯಾಶ್‌ಟ್ಯಾಗ್ ಅಡಿಯಲ್ಲಿ ತಜ್ಞರು, ಆಲೋಚನೆ ಮಾಡುವವರಿಂದ ಕೊರೊನಾ ನಂತರದ ಬದುಕು ಹೇಗಿಬಹುದು? ಎಂಬ ಪ್ರಶ್ನೆಗೆ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ. ಈ ಸರಣಿಯಲ್ಲಿ 5ನೇ ಲೇಖನ/ವಿಡಿಯೋ ರೂಪದಲ್ಲಿ ಸಿನಿಮಾ ನಿರ್ದೇಶಕ ರವೀಂದ್ರ ಕೊಟಕಿ ಅವರ ಪ್ರತಿಕ್ರಿಯೆಯನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ.
ರವೀಂದ್ರ ಕೊಟಕಿ ಚಲನಚಿತ್ರನಿರ್ದೇಶಕರು ಹಾಗೂ ಸಾಹಿತಿ ಬರಹಗಾರ ಲೇಖಕ ಮತ್ತು ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ಅಲ್ಲದೆ ಸುಮಾರು ಎಂಟು ವರ್ಷಗಳ ಕಾಲ ಅಂತಾರಾಷ್ಟ್ರೀಯ ಪರಿಸರ ಯೋಜನೆಗಳಲ್ಲಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಇವರ ಅಭಿಪ್ರಾಯವನ್ನು ವಿಡಿಯೋದಲ್ಲಿ ನೋಡಿ...
ಕೊರೊನಾ ನಂತರದ ಬದುಕು ಹೇಗಿರಬಹುದು? ಎಂಬ ಮುಖ್ಯ ಪ್ರಶ್ನೆ ಜೊತೆಗೆ ಈ ಕೆಳಗಿನ ನಾಲ್ಕು ಪ್ರಶ್ನೆಗಳಿಗೆ ಉತ್ತರವನ್ನು ನೀವು ಕಳಿಸಬಹುದು

1. ಕೊರೊನಾ ಸೃಷ್ಟಿಸಿರುವ ಈ ಬಿಕ್ಕಟ್ಟನ್ನು ವೈಯಕ್ತಿಕವಾಗಿ ಹೇಗೆ ಎದುರಿಸುತ್ತಿದ್ದೀರಾ?
2. ವೈದ್ಯಲೋಕದ ಈ ಸವಾಲವನ್ನು ಹೇಗೆ ಅರ್ಥೈಸುತ್ತೀರಾ? ಇದರ ಕೊನೆ ಯಾವಾಗ ಮತ್ತು ಹೇಗೆ ಆಗಬಹುದು ಅಂತ ಅನ್ನಿಸುತ್ತಿದೆ?
3. 'ಕೊರೊನಾ ನಂತರ ಹಳೇ ವ್ಯವಸ್ಥೆಯೇ ಇನ್ನಷ್ಟು ಬಲಗೊಳ್ಳುತ್ತದೆ, ಶ್ರೀಮಂತರು ಹಾಗೂ ಆಳುವ ವ್ಯವಸ್ಥೆಗಳು ಇನ್ನಷ್ಟು ಪ್ರಬಲರಾಗುತ್ತಾರೆ' ಎಂಬ ವಿಶ್ಲೇಷಣೆ ಇದೆ, ನಿಮಗೆ ಏನು ಅನ್ನಿಸುತ್ತದೆ?
4. ಮುಂದಿನ ಕೆಲವು ದಿನಗಳಲ್ಲಿ ಕೊರೊನಾ ಒಡ್ಡುವ ಸವಾಲುಗಳು ಹೇಗಿರಬಹುದು? ಅದಕ್ಕಾಗಿ ಸಿದ್ಧತೆ ಹೇಗಿರಬೇಕು?
ನಿಮ್ಮ ಬರಹ/ವಿಡಿಯೋವನ್ನು ಇಮೇಲ್ [email protected] ಮಾಡಿ, ಅಥವಾ ವಾಟ್ಸಾಪ್ ಸಂಖ್ಯೆಗೆ ಕಳಿಸಿ.












Click it and Unblock the Notifications