Blood Donation: ರಕ್ತದಾನದ ಬಗೆಗಿನ ಆ ತಪ್ಪು ಕಲ್ಪನೆಗಳನ್ನು ದೂರಮಾಡಿ..!
ರಕ್ತದಾನ ಕೂಡ ನಾವು ಮಾಡುವ ಮಹಾತ್ಕಾರ್ಯಗಳಲ್ಲಿ ಒಂದಾಗಿದೆ. ಹೀಗಾಗಿ ರಕ್ತದಾನ ಕುರಿತಂತೆ ಇರುವ ಕೆಲವೊಂದು ತಪ್ಪು ಕಲ್ಪನೆಗಳನ್ನು ದೂರ ಮಾಡಿಕೊಂಡು ಅಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವದ ಉಳಿವಿಗೆ ಕಾರಣಕರ್ತರಾದ ನೆಮ್ಮದಿಯನ್ನು ಪಡೆಯಲು ಸಾಧ್ಯವಾಗಲಿದೆ.
ಹಾಗೆನೋಡಿದರೆ ಇವತ್ತಿನ ದಿನಗಳಲ್ಲಿ ಹಲವು ಅನಿವಾರ್ಯ ಸಂದರ್ಭಗಳಲ್ಲಿ ಅಗತ್ಯ ರಕ್ತದೊರೆಯದೆ ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳು ಬಹಳಷ್ಟಿವೆ. ಹೀಗಿರುವಾಗ ರಕ್ತದಾನವೇ ಮಹಾದಾನವೆಂದುಕೊಂಡರೂ ಕೆಲವೊಮ್ಮೆ ರಕ್ತ ನೀಡಬೇಕೆಂಬ ಮನಸ್ಸಿದ್ದರೂ ಕೆಲವೊಂದು ತಪ್ಪು ಕಲ್ಪನೆಗಳು ಇರುವುದರಿಂದ ರಕ್ತದಾನ ಮಾಡಲು ಹಿಂದೇಟು ಹಾಕುವವರು ಇಲ್ಲದಿಲ್ಲ.

ಕೆಲವು ತಪ್ಪು ಕಲ್ಪನೆಗಳಿಗೆ ಇತಿಶ್ರೀ ಹಾಡದ ಹೊರತು ಕೆಲವರು ರಕ್ತದಾನ ಮಾಡಬೇಕೆಂಬ ಮನಸ್ಸಿದ್ದರೂ ಭಯದಿಂದಾಗಿ ರಕ್ತದಾನ ಮಾಡಲು ಮುಂದಾಗುತ್ತಿಲ್ಲ. ರಕ್ತದಾನ ಮಾಡುವುದರ ಬಗ್ಗೆ ಮತ್ತು ರಕ್ತವನ್ನು ಪಡೆದುಕೊಳ್ಳುವುದರ ಕುರಿತಂತೆ ಹಲವು ರೀತಿಯ ಆಧಾರ ರಹಿತ ಮಾತುಗಳು ಜನವಲಯದಲ್ಲಿದೆ. ಅವು ಸಂಪೂರ್ಣ ಅಂತೆಕAತೆ ಸುದ್ದಿಗಳು. ಅವುಗಳನ್ನೇ ನಂಬುವ ಹಲವು ಜನ ರಕ್ತದಾನ ಎಂದರೆ ಭಯಪಡುತ್ತಾರೆ.
ರಕ್ತದಾನ ಮಾಡುವ ಬಗ್ಗೆ ಕೆಲವು ತಪ್ಪು ಕಲ್ಪನೆಯಿರುವುದರಿಂದ ಆ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಪಡೆದು ಮುನ್ನಡೆಯುವುದು ಒಳ್ಳೆಯದು. 18 ರಿಂದ 60 ವರ್ಷದೊಳಗಿನ 45 ಕೆ.ಜಿ.ಗಿಂತಲೂ ಹೆಚ್ಚು ತೂಕವಿರುವ, 12.5 ಗ್ರಾಂ.ಗಿAತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲ ಆರೋಗ್ಯವಂತರೂ ರಕ್ತದಾನ ಮಾಡ ಬಹುದಾಗಿದೆ. ದೇಶದಲ್ಲಿ ಪ್ರತಿ 2 ಸೆಕೆಂಡಿಗೆ ಒಬ್ಬ ರೋಗಿಗೆ ರಕ್ತದ ಅವಶ್ಯಕತೆ ಇರುವುದಾಗಿ ಸಮೀಕ್ಷೆಯೊಂದು ಹೇಳಿದೆ. ನಮ್ಮ ದೇಶದಲ್ಲಿ ರಕ್ತದ ಬೇಡಿಕೆ ಸುಮಾರು 4 ಕೋಟಿ ಯೂನಿಟ್ ಗಳಾಗಿದ್ದು, ಕೇವಲ 5 ಲಕ್ಷ ಯೂನಿಟ್ ಗಳಷ್ಟು ಮಾತ್ರ ರಕ್ತದ ಪೂರೈಕೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.
ದೇಹದಲ್ಲಿ 5.5 ರಿಂದ 6 ಲೀಟರ್ ರಕ್ತ
ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್‌ನಷ್ಟು ರಕ್ತ ಇರುತ್ತದೆ. ರಕ್ತ ಕೊಡುವ ವ್ಯಕ್ತಿಯಿಂದ ಕೇವಲ 350 ಮಿಲಿಯಷ್ಟೇ ರಕ್ತವನ್ನು ದಾನಿಯಿಂದ ತೆಗೆದುಕೊಳ್ಳುವುದರಿಂದ ಯಾವುದೇ ಅಪಾಯವಾಗುವುದಿಲ್ಲ. ಆದ್ದರಿಂದ ಎಲ್ಲ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರರಿಂದ ನಾಲ್ಕು ತಿಂಗಳಿಗೊಮ್ಮೆ ನಿರಾತಂಕವಾಗಿ ರಕ್ತದಾನ ಮಾಡಬಹುದು. ಸಾಮಾನ್ಯವಾಗಿ ದಾನಿಯಿಂದ ಪಡೆದ ರಕ್ತವನ್ನು 35 ದಿನಗಳವರೆಗೆ ಅದು ಯಾವುದೇ ರೀತಿಯಲ್ಲಿಯೂ ಹಾಳಾಗದಂತೆ ವಿಶೇಷ ರೆಫ್ರಿಜಿರೇಟರ್ ಗಳಲ್ಲಿ ಶೇಖರಿಸಿಟ್ಟು ಉಪಯೋಗಿಸಲಾಗುತ್ತದೆ.

18 ವರ್ಷಕ್ಕಿಂತ ಕಡಿಮೆ ಇರುವ ಲಿವರ್, ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು, ಗರ್ಭಿಣಿಯರು, ಋತುಸ್ರಾವದಲ್ಲಿರುವ ಮಹಿಳೆಯರು, ಮಗುವಿಗೆ ಹಾಲುಣಿಸುವ ತಾಯಂದಿರು, ದೊಡ್ಡ ಪ್ರಮಾಣದ ಶಸ್ತç ಚಿಕಿತ್ಸೆಗೆ ಒಳಗಾದವರು, ಒಂದು ವರ್ಷದವರೆಗೆ ರಕ್ತ ವರ್ಗಾವಣೆ ಮಾಡಿಸಿಕೊಂಡವರು, ಆರು ತಿಂಗಳವರೆಗೆ ಯಾವುದಾದರು ಕಾಯಿಲೆಯ ವಿರುದ್ಧ ಲಸಿಕೆಗಳನ್ನು ತೆಗೆದುಕೊಂಡವರು ಮುಂದಿನ ಆರು ತಿಂಗಳವರೆಗೆ ರಕ್ತದಾನ ಮಾಡಬಾರದಾಗಿದೆ.
ರಕ್ತದಾನಿಗಳಲ್ಲಿ ಯಾವುದೇ ಆತಂಕ ಬೇಡ
ಇನ್ನು ರಕ್ತದಾನ ಮಾಡಿದ ವ್ಯಕ್ತಿಗೆ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕಾಗುತ್ತದೆ. ಜೊತೆಗೆ ಯಾವುದೇ ರೀತಿ ಔಷಧದ ಅಗತ್ಯವಿರುವುದಿಲ್ಲ, ವ್ಯಕ್ತಿಯು ರಕ್ತದಾನ ಮಾಡಿದ ಆ ದಿನ ನೀರನ್ನು ಹೆಚ್ಚಾಗಿ ಕುಡಿಯಬೇಕು. ರಕ್ತದಾನದ ಕೆಲವು ತಾಸುಗಳೊಳಗಾಗಿ ದಾನಿಯ ದೇಹದಲ್ಲಿ ಹೊಸ ರಕ್ತಕಣಗಳನ್ನು ಉತ್ವಾದಿಸಲು ಪ್ರಾರಂಭಿಸುತ್ತದೆ. ಮುಂದಿನ ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ಮರು ರಕ್ತ ತಯಾರಾಗುತ್ತದೆ.
ಇನ್ನೂ ರಕ್ತ ವರ್ಗಾವಣೆಯಿಂದ ಯಾವುದಾದರೂ ರೋಗ ಅಥವಾ ಸೋಂಕು ತಗಲುತ್ತದೆ ಎಂಬ ಭಯವೂ ಕೆಲವರಲ್ಲಿದೆ. ರಕ್ತದಾನ ಮಾಡುವ ದಾನಿಯಿಂದ ಸ್ವೀಕರಿಸಿದ ರಕ್ತವನ್ನು ರಕ್ತನಿಧಿಗಳಲ್ಲಿ ಹೆಪಟೈಟಿಸ್ ಬಿ. ಹೆಪಟೈಟಿಸ್ ಸಿ. ಎಚ್‌ಐವಿ, ಮಲೇರಿಯಾ, ಸಿಫಿಲಿಸ್ ಮುಂತಾದ ಸೂಕ್ಷಾಣುಗಳಿಗಾಗಿ ಪರೀಕ್ಷಿಸಿ. ರೋಗಾಣುಗಳಿಂದ ಮುಕ್ತವಾದ ರಕ್ತವನ್ನು ಮಾತ್ರವೇ ಅವಶ್ಯಕತೆ ಇರುವರಿಗೆ ವರ್ಗಾಯಿಸುತ್ತಾರೆ.
ದಾನಿಯಿಂದ ರಕ್ತವನ್ನು ಸ್ವೀಕರಿಸುವಾಗಲೂ ಸಂಸ್ಕರಿಸಿದ ಶುದ್ಧವಾದ ಉಪಕರಣಗಳನ್ನು ಬಳಸುತ್ತಾರೆ ಹಾಗಾಗಿ ರಕ್ತದಾನ ಪ್ರಕ್ರಿಯೆಯಲ್ಲಿ ದಾನಿಗಾಗಲೀ, ರಕ್ತ ವಗಾವಣೆ ಮಾಡಿಸಿಕೊಂಡವರಿಗಾಗಲಿ ಸೋಂಕಿನ ಭಯ ಬೇಡ. ಯಾವುದೇ ಭಯ ಆತಂಕಗಳಿಲ್ಲದೆ ಪ್ರತಿಯೊಬ್ಬ ವ್ಯಕ್ತಿಯೂ ಸ್ವ ಇಚ್ಛೆಯಿಂದ ರಕ್ತದಾನವನ್ನು ಮಾಡಬಹುದಾಗಿದೆ.
-
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications