Garlic Benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 1 ಎಸಳು ಬೆಳ್ಳುಳ್ಳಿ ತಿನ್ನಿ ದೇಹದಲ್ಲಾಗುತ್ತೆ ಅದ್ಭುತ ಬದಲಾವಣೆ
ನಮ್ಮ ಮನೆಯ ಅಡುಗೆಮನೆಯಲ್ಲಿ ದೈಹಿಕ ಆರೋಗ್ಯವನ್ನು ಸುಧಾರಿಸಲು ವಿವಿಧ ಆಹಾರ ಪದಾರ್ಥಗಳಿವೆ. ಅವುಗಳಲ್ಲಿ ಬೆಳ್ಳುಳ್ಳಿ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತದೆ. ಬೆಳ್ಳುಳ್ಳಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಈ ಬೆಳ್ಳುಳ್ಳಿಯನ್ನು ಅದರ ಪರಿಮಳ ಮತ್ತು ರುಚಿಗಾಗಿ ದೈನಂದಿನ ಆಹಾರದಲ್ಲಿ ಸೇರಿಸಲಾಗುತ್ತದೆಯಾದರೂ, ಇದರಿಂದ ಸಂಪೂರ್ಣ ಪೋಷಕಾಂಶಗಳನ್ನು ಪಡೆಯಲು ಉತ್ತಮ ಮಾರ್ಗವೆಂದರೆ ಅದನ್ನು ಹಸಿಯಾಗಿ ತಿನ್ನುವುದು.
ಬೆಳ್ಳುಳ್ಳಿಯಲ್ಲಿ ಅಲಿಸಿನ್, ಸಲ್ಫರ್, ಸೆಲೆನಿಯಮ್, ಅಗತ್ಯವಾದ ವಿಟಮಿನ್ ಬಿ6 ಮತ್ತು ಸಿ ನಂತಹ ಶಕ್ತಿಯುತ ಪೋಷಕಾಂಶಗಳಿವೆ. ಈ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ಸುಧಾರಿಸುವವರೆಗೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ. ನಿಮ್ಮ ಆರೋಗ್ಯವನ್ನು ಸುಧಾರಿಸಲು ನೀವು ಬಯಸಿದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳುಗಳನ್ನು ತಿನ್ನಿ. ಹಾಗಾದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 1 ಎಸಳು ಬೆಳ್ಳುಳ್ಳಿ ತಿಂದರೆ ಆಗುವ ಲಾಭಗಳೇನು ಎಮದು ತಿಳಿಯೋಣ.

ರೋಗನಿರೋಧಕ ಶಕ್ತಿ ಸುಧಾರಣೆ
ಪ್ರತಿದಿನ ಬೆಳಿಗ್ಗೆ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎಂಬ ವಸ್ತುವಿದೆ. ಇದು ದೇಹಕ್ಕೆ ಪ್ರವೇಶಿಸುವ ರೋಗಕಾರಕಗಳ ವಿರುದ್ಧ ಹೋರಾಡಲು ಅಗತ್ಯವಾದ ಶಕ್ತಿಯನ್ನು ದೇಹಕ್ಕೆ ಒದಗಿಸುತ್ತದೆ. ಆದ್ದರಿಂದ ನೀವು ಆಗಾಗ್ಗೆ ಶೀತ, ಕೆಮ್ಮು ನಗಡಿಗೆ ಒಳಗಾಗುತ್ತಿದ್ದರೆ ಅಥವಾ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ, ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಬೆಳಿಗ್ಗೆ 1 ಎಸಳು ಬೆಳ್ಳುಳ್ಳಿಯನ್ನು ತೆಗೆದುಕೊಳ್ಳಿ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.
ರಕ್ತದೊತ್ತಡ ಸ್ಥಿರ
ಅಧಿಕ ರಕ್ತದೊತ್ತಡ ಇಂದು ಹೆಚ್ಚಿನ ಜನರು ಅನುಭವಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಬೆಳ್ಳುಳ್ಳಿ ರಕ್ತದೊತ್ತಡದ ಮಟ್ಟಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಒಂದು ಅಧ್ಯಯನದಲ್ಲಿ ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ವಸ್ತುವು ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ ಎಂದು ಕಂಡುಬಂದಿದೆ. ಹಾಗಾಗಿ ರಕ್ತದೊತ್ತಡದ ಸಮಸ್ಯೆ ಇದ್ದರೆ ಅದನ್ನು ನಿಯಂತ್ರಿಸಲು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳು ತಿನ್ನಿ. ಇದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ
ಬೆಳ್ಳುಳ್ಳಿ ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಅತ್ಯುತ್ತಮವಾದ ಪದಾರ್ಥವಾಗಿದೆ. ದಿನನಿತ್ಯದ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ಸೇವಿಸಿದರೆ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ. ಅದರಲ್ಲಿರುವ ಉತ್ಕರ್ಷಣ ನಿರೋಧಕಗಳು ಅಪಧಮನಿಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನಿರ್ಮಾಣವನ್ನು ತಡೆಯುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ.
ಜೀರ್ಣಕ್ರಿಯೆ ಸುಧಾರಣೆ
ಬೆಳ್ಳುಳ್ಳಿ ಹೃದಯದ ಆರೋಗ್ಯ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುವುದಲ್ಲದೆ, ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಹೊಟ್ಟೆಯಲ್ಲಿ ಪ್ರಯೋಜನಕಾರಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಈ ರೀತಿಯ ಬ್ಯಾಕ್ಟೀರಿಯಾವು ಹೊಟ್ಟೆಯಲ್ಲಿ ಉತ್ತಮವಾಗಿದ್ದರೆ, ಅದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಜೀರ್ಣಕ್ರಿಯೆ ಸಮಸ್ಯೆ ಎದುರಿಸುತ್ತಿರುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 1 ಎಸಳು ಬೆಳ್ಳುಳ್ಳಿಯನ್ನು ತಿಂದು ಬಿಸಿ ನೀರು ಕುಡಿದರೆ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ.
ಉರಿಯೂತ ಕಡಿಮೆ
ದೀರ್ಘಕಾಲದ ಉರಿಯೂತ ದೇಹದಲ್ಲಿ ಸಂಧಿವಾತ ಮತ್ತು ಹೃದ್ರೋಗದಂತಹ ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಬೆಳ್ಳುಳ್ಳಿಯ ಶಕ್ತಿಯುತವಾದ ಉರಿಯೂತದ ಗುಣಲಕ್ಷಣಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಮ್ಮ ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ, ಅಲ್ಲದೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದನ್ನು ಸೇವಿಸುವುದರಿಂದ ಇನ್ನೂ ಉತ್ತಮ ಫಲಿತಾಂಶವನ್ನು ನೀವು ಪಡೆಯಬಹುದು.
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನಲು ಸರಿಯಾದ ಮಾರ್ಗ
ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನಲು ಬಯಸಿದರೆ ಅದನ್ನು ಹೇಗೆ ತಿನ್ನಬೇಕು ಎಂದು ನೀವು ತಿಳಿದಿರಬೇಕು. ಬೆಳ್ಳುಳ್ಳಿ ತಿನ್ನಲು ಬಯಸುವವರು ಬೆಳಿಗ್ಗೆ ಒಂದು ಬೆಳ್ಳುಳ್ಳಿ ಎಸಳನ್ನು ಚೆನ್ನಾಗಿ ಅಗಿದು ನಂತರ ಒಂದು ಲೋಟ ಬಿಸಿನೀರನ್ನು ಕುಡಿಯಬೇಕು. ಹೀಗೆ ಸೇವಿಸಿದಾಗ ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಕ್ರಿಯಾಶೀಲಗೊಂಡು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.
-
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications