Beetroot: ಹೃದಯದ ಆರೋಗ್ಯ ಕಾಪಾಡುವ ಬೀಟ್ರೋಟ್..ಹೇಗೆ ಗೊತ್ತಾ?
ಸಾರು, ಪಲ್ಯ, ಸೇರಿದಂತೆ ನಿತ್ಯದ ಆಹಾರ ಪದಾರ್ಥಗಳಲ್ಲಿ ತರಕಾರಿಯಾಗಿ ಬಳಕೆಯಾಗುವ ಬೀಟ್ರೋಟ್ ಔಷಧೀಯ ಕಣಜ ಮಾತ್ರವಲ್ಲದೆ ಹೃದಯದ ಆರೋಗ್ಯ ಕಾಪಾಡುವ, ರಕ್ತದೊತ್ತಡ ತಗ್ಗಿಸುವ ಮಾಂತ್ರಿಕ ಎನ್ನುವುದನ್ನು ಸಂಶೋಧಕರು ತೆರೆದಿಟ್ಟಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ನಾವು ಆರೋಗ್ಯಕಾರಿ ತರಕಾರಿ, ಹಣ್ಣು, ಸೊಪ್ಪುಗಳನ್ನು ಬಳಸುವುದು ಅನಿವಾರ್ಯವಾಗಿದ್ದು, ಅದರಲ್ಲೂ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿ ಆಗಿರುವ ಬೀಟ್ರೋಟ್ ಗೆ ಆದ್ಯತೆ ನೀಡುವುದು ಬಹುಮುಖ್ಯವಾಗಿದೆ.
ನಮ್ಮ ಲೈಫ್ ಸ್ಟೈಲ್ ಬದಲಾಗಿದೆ ಜತೆಗೆ ಸದಾ ಒತ್ತಡದಲ್ಲಿರುವುದರಿಂದ ಅಡುಗೆ, ಊಟದ ಕಡೆಗೆ ಹೆಚ್ಚಿನ ಗಮನಕೊಡುವುದೇ ಕಷ್ಟವಾಗಿದೆ. ಹೀಗಾಗಿ ರೆಡಿಮೆಡ್ ಫುಡ್ ಗಳಿಗೆ ಹೊಂದಿಕೊಂಡಿದ್ದೇವೆ, ನಾವು ಸೇವಿಸುವ ಬಹುತೇಕ ಆಹಾರಗಳು ಆ ತಕ್ಷಣಕ್ಕೆ ನಮ್ಮ ಹಸಿವನ್ನಷ್ಟೇ ನೀಗಿಸುತ್ತಿವೆ. ಆದರೆ ಶರೀರಕ್ಕೆ ಪೋಷಕ ಶಕ್ತಿಯನ್ನು ನೀಡುವುದಿಲ್ಲ. ಹೀಗಾಗಿ ಕೆಲವು ಹಣ್ಣು, ತರಕಾರಿಗಳನ್ನು ಬೇರೆ ಬೇರೆ ರೀತಿಯಲ್ಲಿ ಉಪಯೋಗಿಸುವುದನ್ನು ಕಲಿತುಕೊಳ್ಳುವುದು ಕೂಡ ಜಾಣತನವಾಗುತ್ತದೆ.

ಅದೆಲ್ಲ ಆಚೆಗಿಟ್ಟು ನೋಡಿದ್ದೇ ಆದರೆ ಬೀಟ್ರೋಟ್ ಬಹುಪಯೋಗಿ ಎನ್ನುವುದನ್ನು ಸಂಶೋಧಕರು ತಿಳಿಸಿದ್ದಾರೆ ಇದರಲ್ಲಿರುವ ಔಷಧೀಯ ಗುಣಗಳು ಹಲವು ರೋಗಗಳಿಗೆ ರಾಮಬಾಣವಾಗಿದೆ. ಇಷ್ಟೇ ಅಲ್ಲದೆ ಅಧಿಕ ರಕ್ತದೊತ್ತಡದಿಂದ ಬಳಲುವವರು ಗೆ ಬೀಟ್ರೂಟ್ ರಸ ಸೇವಿಸುವುದು ಬಹಳ ಉತ್ತಮವಾಗಿದೆ. ಪ್ರತಿದಿನ ಒಂದು ಬಟ್ಟಲು ಬೀಟ್ರೋಟ್ ನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು ಎನ್ನುವುದನ್ನು ಭಾರತದ ಸಂಶೋಧಕರು ಕಂಡು ಹಿಡಿದಿದ್ದಾರೆ.
ಅಧಿಕ ರಕ್ತದೊತ್ತಡದ ಪ್ರಮಾಣ ಇಳಿಮುಖ
ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕೆಲವು ಮಂದಿ 8 ಔನ್ಸ್ ನಷ್ಟು ಬೀಟ್ರೋಟಿನ ರಸದ ಸೇವನೆಯನ್ನು ಮಾಡಿ 10 ಎಂ ಎಂ ಎಚ್ ಜಿ ಯಷ್ಟರ ಪ್ರಮಾಣದ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಂಡಿದ್ದಾರೆ. 15 ರೋಗಿಗಳ ಮೇಲೆ ಈ ಪ್ರಯೋಗ ನಡೆಸಲಾಯಿತು. ಆಗ ಅವರಲ್ಲಿ ಅಧಿಕ ರಕ್ತದೊತ್ತಡದ ಪ್ರಮಾಣ ಇಳಿಮುಖವಾದದ್ದು ಕಂಡು ಬಂದಿತು. ಅದರಲ್ಲೂ ಸೇವಿಸಿದ 3ರಿಂದ 6 ಗಂಟೆ ನಂತರ ಅತ್ಯುತ್ತಮವಾದ ಫಲಿತಾಂಶ ಕಂಡು ಬಂದಿತಂತೆ.

ಬೀಟ್ರೋಟಿನಲ್ಲಿರುವ ನೈಟ್ರೇಟ್ ರಕ್ತ ಕಣಗಳನ್ನು ಅಗಲಗೊಳಿಸುತ್ತದೆ ರಕ್ತ ಸಂಚಾರವನ್ನು ಸುಗಮಗೊಳಿಸುತ್ತದೆ. ಎದೆ ನೋವಿನಿಂದ ಬಳಲುವವರು ನೈಟ್ರೇಟ್ ನ್ನು ಬಳಸುತ್ತಾರೆ ಎಂದಿದ್ದಾರೆ ವಿಜ್ಞಾನಿಗಳು. ಅಂದರೆ ಈ ಸಮಸ್ಯೆಯ ಪರಿಹಾರವೂ ಸಹ ಬೀಟ್ರೋಟ್ ನಲ್ಲಿದೆ ಎಂದಾಯಿತು. ಲಂಡನ್ ಮೆಡಿಕಲ್ ಶಾಲೆಗೆ ಸೇರಿರುವ ಬಾರ್ಟ್ ಹೆಲ್ತ್ ಎನ್ಎಚ್ಎಸ್ ಟ್ರಸ್ಟ್ ನ ಸಂಶೋಧಕರು ನಡೆಸಿದ ಸಂಶೋಧನೆಯಿಂದ ಈ ಸಂಗತಿ ದೃಢಪಟ್ಟಿದೆ. ಇವರು ಹಲವು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿದ ಬಳಿಕ ಈಸಂಗತಿ ತಿಳಿದು ಬಂದಿದೆ.
ಇದು ಹೃದಯದ ಆರೋಗ್ಯಕ್ಕೆ ಸಹಕಾರಿ
ಬಿಟ್ರೋಟ್ ಬಗ್ಗೆ ಪ್ರಯೋಗ ನಡೆಸುತ್ತಿದ್ದಾಗ ಒಂದು ಅನಿರೀಕ್ಷಿತ ಸಂಗತಿ ಗೋಚರವಾಯಿತು. ಈ ರಸವನ್ನು ಸೇವಿಸಿದ ವ್ಯಕ್ತಿಗಳ ಮೂತ್ರ ಗುಲಾಬಿ ಬಣ್ಣಕ್ಕೆ ಬದಲಾಯಿತಂತೆ. ಅಂದರೆ ಇದು ಮೂತ್ರ ಬಣ್ಣದ ಮೇಲೂ ಪ್ರಭಾವ ಬೀರುತ್ತದೆ ಎನ್ನುವ ಸಂಗತಿ ಅರಿವು ವಿಜ್ಞಾನಿಗಳಿಗೆ ಮೂಡಿತಂತೆ. ನೈಟ್ರೆಟ್ ಮಣ್ಣಿನಿಂದ ದೊರಕುತ್ತದೆ. ಅದನ್ನು ಹೀರಿ ತರಕಾರಿ ಬೆಳೆಯುತ್ತದೆ.
ಪುಟ್ಟ ನೈಟ್ರೇಟ್ ನಿಂದ ಎಷ್ಟೊಂದು ಪ್ರಯೋಜನಗಳಿವೆ ಎನ್ನುವ ಸಂಗತಿಗಳು ಬೆಳಕಿಗೆ ಬಂದಾಗ ನಮಗೆ ತುಂಬಾ ಆಶ್ಚರ್ಯವಾಗಿತ್ತು ಎನ್ನುವ ಅಭಿಪ್ರಾಯವನ್ನು ಸಂಶೋಧಕ ಡಾ. ಅಮ್ರಿತ್ ಅಹ್ಲುವಾಲಿಯ ಹಲವು ವರ್ಷಗಳ ಹಿಂದೆಯೇ ಹೊರಗೆಡವಿದ್ದಾರೆ. ಹಸಿರು ಸೊಪ್ಪುಗಳು ಮತ್ತು ಬಿಟ್ರೋಟ್ ನಲ್ಲಿ ಜೀರ್ಣವಾಗುವ ನೈಟ್ರೇಟ್ ಪ್ರಮಾಣ ಹೇರಳವಾಗಿದೆ.
ಇದು ಹೃದಯದ ಆರೋಗ್ಯವನ್ನು ನಿಸ್ಸಂದೇಹವಾಗಿ ಕಾಪಾಡುತ್ತದೆ. ಬ್ರಿಟಿಷ್ ಹಾರ್ಟ್ ಫೌಂಡೇಷನ್ನ ವೈದ್ಯಕೀಯ ನಿರ್ದೇಶಕರಾದ ಪ್ರೊ. ಪೀಟರ್ ವಿಸ್ಬೆರಗ್ ಪ್ರಕಾರ ನಮಗೆ ತರಕಾರಿ ಸೇವನೆಯ ಮಹತ್ವ ತಿಳಿದಿದೆ. ಆದರೆ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣಹೆಚ್ಚಿದೆ ಎಂದು ತಿಳಿದು ರಕ್ತದೊತ್ತಡದವನ್ನು ದೂರ ಮಾಡಿಕೊಳ್ಳುವತ್ತ ಗಮನ ನೀಡ ಬೇಕು.
ಇಷ್ಟು ದಿನಗಳ ಕಾಲ ಈ ತರಕಾರಿ ರಕ್ತಹೀನತೆಯನ್ನು ದೂರ ಮಾಡುತ್ತಿತ್ತು, ಈಗ ಅಧಿಕರಕ್ತದೊತ್ತಡಕ್ಕೂ ಸಹ ಕಡಿವಾಣ ಹಾಕುತ್ತದೆ ಎಂದಿದ್ದಾರೆ. ಇನ್ನಾದರೂ ಯಾರಾದರೂ ಬಿಟ್ರೋಟ್ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರೆ, ದಯವಿಟ್ಟು ನೀವು ಬಳಸುವ ತರಕಾರಿಯಲ್ಲಿ ಬಿಟ್ರೋಟ್ ಬಳಸಲು ಆರಂಭಿಸಿ ನಿಮ್ಮ ಹೃದಯವನ್ನು ಕಾಪಾಡಿಕೊಳ್ಳುವ ಮೂಲಕ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಪಾರಾಗಲು ಇದು ಸಹಾಯ ಮಾಡಬಹುದು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications