Weight Loss: ದೇಹದ ತೂಕವನ್ನು ಸಮತೋಲನದಲ್ಲಿ ಕಾಪಾಡಿಕೊಳ್ಳುವುದು ಹೇಗೆ?
ಹೆಚ್ಚುತ್ತಿರುವ ದೇಹದ ತೂಕವನ್ನು ಇಳಿಸಿಕೊಳ್ಳುವುದೇ ಈಗ ಕೆಲವರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಮಡಕೆ ಕಟ್ಟಿದ ಡೊಳ್ಳು ಹೊಟ್ಟೆ, ಡ್ರಮ್ ಗಳಂತೆ ಗೋಚರಿಸುವ ದೇಹ ಎಲ್ಲವೂ ಅಸಹ್ಯ ಮೂಡಿಸುತ್ತಿದ್ದು, ಹೀಗಾಗಿ ತಮ್ಮ ದೇಹದ ಸೌಂದರ್ಯವನ್ನು ಉಳಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲ್ ಆಗಿ ಪರಿಣಮಿಸಿದೆ.
ಯಾವಾಗ ತೂಕ ಹೆಚ್ಚಾಗಿ ಬೊಜ್ಜು ಬೆಳೆಯಲು ಆರಂಭವಾಗುತ್ತದೆಯೋ ಅವತ್ತಿನಿಂದಲೇ ಕ್ರಿಯಾಶೀಲತೆ ಕಳೆದು ಕೊಳ್ಳಲು ಆರಂಭವಾಗಿ ಕಾಯಿಲೆಗಳು ಅಡರಿಕೊಳ್ಳಲಾರಂಭಿಸುತ್ತವೆ. ಇದಕ್ಕೆ ಕಾರಣಗಳು ಹತ್ತು ಹಲವು ಇದ್ದು, ಬಹು ಮುಖ್ಯವಾಗಿ ಇವತ್ತಿನ ಲೈಫ್ ಸ್ಟೈಲ್ ಗಳೇ ಬೊಜ್ಜು ಬೆಳೆಯಲು ಕಾರಣವಾಗುತ್ತಿವೆ ಎಂದರೆ ತಪ್ಪಾಗಲಾರದು.

ಮೊದಲಿಗೆ ಹೋಲಿಸಿದರೆ ಈಗಿನ ನಮ್ಮ ಬದುಕಿನ ಶೈಲಿ, ಆಹಾರ ಕ್ರಮ, ದೈಹಿಕ ಶ್ರಮದ ಕೊರತೆ, ಮಾನಸಿಕ ಶ್ರಮದ ಹೆಚ್ಚಳ, ಹೀಗೆ ಹಲವಾರು ಕಾರಣಗಳು ದೇಹದ ತೂಕ ಹೆಚ್ಚಾಗಲು ಕಾರಣವಾಗುತ್ತಿದೆ. ದೈಹಿಕ ಶ್ರಮದ ದುಡಿಮೆಯಿಂದ ಬದುಕುವಾತ ಆರೋಗ್ಯಕರವಾಗಿದ್ದರೆ, ಮಾನಸಿಕ ಶ್ರಮದ ದುಡಿಮೆಯಾತನಿಗೆ ನೆಮ್ಮದಿಯಾಗಿ ಬದುಕುವುದು ಕಷ್ಟವಾಗಿ ಗೋಚರಿಸುತ್ತಿದೆ...
ಕೊಬ್ಬು ಜಾಸ್ತಿಯಾಗದಂತೆ ನೋಡಿಕೊಳ್ಳಿ
ಬಹಳಷ್ಟು ಜನ ಶ್ರಮವಹಿಸಿ ಕೆಲಸವನ್ನು ಮಾಡುವುದೇ ಇಲ್ಲ. ಓಡಾಡಲು ವಾಹನಗಳ ಬಳಕೆ, ಕಚೇರಿಗಳಲ್ಲಿ ಕುಳಿತಲ್ಲೇ ಕೆಲಸ, ಜತೆಗೆ ಸಣ್ಣಪುಟ್ಟ ಕೆಲಸಕ್ಕೂ ಸಹಾಯಕರು ಇರುವುದರಿಂದಾಗಿ ದೇಹಕ್ಕೆ ಶ್ರಮವೇ ಇಲ್ಲದಂತಾಗಿದೆ. ದೇಹದ ಅಂಗಾಂಗಗಳಿಗೆ ಕಾರ್ಯವೇ ಇಲ್ಲವಾದ್ದರಿಂದ ಎಷ್ಟೇ ಆರೋಗ್ಯವಂತನಾಗಿ ಕಂಡು ಬಂದರೂ ಕೊಬ್ಬು ಜಾಸ್ತಿಯಾಗಿ ಸ್ತೂಲಕಾಯಕ್ಕೆ ಹಾದಿ ತೋರಿಸುತ್ತಿದೆ.
ದುಡಿಮೆಯ ಹೊರತಾಗಿಯೂ ವ್ಯಾಯಾಮಕ್ಕೆ ಒಂದಷ್ಟು ಸಮಯವನ್ನು ಮೀಸಲಿಡುವುದು ಬಹುಮುಖ್ಯವಾಗಿದೆ. ನಾವು ಖುಷಿಯಾಗಿ ನೆಮ್ಮದಿಯಾಗಿ ಇರಬೇಕಾದರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹುಮುಖ್ಯವಾಗಿರುತ್ತದೆ. ಈಗಿನ ಪರಿಸ್ಥಿತಿಯಲ್ಲಿ ತಾವು ಆಯ್ದುಕೊಂಡಿರುವ ದುಡಿಮೆಯ ಕ್ಷೇತ್ರಗಳಲ್ಲಿ ಕೆಲವು ಬಹಳ ಮಾನಸಿಕವಾಗಿ ಕಿರಿಕಿರಿ ತರುವ ಮತ್ತು ಒತ್ತಡದ ಕೆಲಸಗಳಾಗಿವೆ.

ಮಾನಸಿಕ ಒತ್ತಡವನ್ನು ದೂರ ಮಾಡಿಕೊಳ್ಳಿ
ಇಂತಹ ಕ್ಷೇತ್ರಗಳಲ್ಲಿ ದುಡಿಯುವವರು ತಮ್ಮ ಮಾನಸಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳಬೇಕು. ಕೋಪ, ಆಕ್ರೋಶ, ಸೇರಿದಂತೆ ಉದ್ವೇಗಕ್ಕೊಳಗಾಗದೆ ಎಲ್ಲವನ್ನು ಸಮಾಧಾನವಾಗಿ, ಸಮಚಿತ್ತದಿಂದ ಎದುರಿಸುವ ಮಾನಸಿಕ ಧೈರ್ಯವನ್ನು ಬೆಳೆಸಿಕೊಳ್ಳಬೇಕು. ಇದು ಸುಲಭದ ಕೆಲಸವಲ್ಲ. ಇಲ್ಲಿ ಎಷ್ಟು ತಾಳ್ಮೆ ವಹಿಸುತ್ತೇವೆಯೋ ಅಷ್ಟೇ ಒಳ್ಳೆಯದು.
ದೇಹದ ಸಮಸ್ಯೆಗಳಿಗೆ ನಾವು ತಕ್ಷಣ ಚಿಕಿತ್ಸೆ ಪಡೆದುಕೊಂಡು ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಆದರೆ ಮಾನಸಿಕ ಒತ್ತಡ ಅಷ್ಟು ಸುಲಭವಲ್ಲ. ಅದು ದೇಹದ ಮೇಲೆ ಪರಿಣಾಮ ಬೀರುತ್ತದೆ. ಮಾನಸಿಕ ಒತ್ತಡಕ್ಕೆ ಒಳಗಾದವರು ಬಹಳಷ್ಟು ಮಂದಿ ಕಚೇರಿ ಮಾತ್ರವಲ್ಲದೆ ತಮ್ಮ ಮನೆಯಲ್ಲಿಯೂ ಚಿಕ್ಕಪುಟ್ಟ ವಿಚಾರಗಳಿಗೆ ರಂಪಾಟ ಮಾಡುತ್ತಾ ಸ್ವಾಸ್ಥ್ಯವನ್ನೇ ಹಾಳುಗೆಡವುತ್ತಾರೆ. ಇನ್ನು ಕೆಲವರು ಖಿನ್ನತೆಗೊಳಗಾಗಿ ಆತ್ಮಹತ್ಯೆಗೂ ಶರಣಾಗಿ ಬಿಡಬಹುದು.
ಆಹಾರದ ಕ್ರಮವನ್ನು ಆಯ್ಕೆ ಮಾಡಿಕೊಳ್ಳಬೇಕು
ನಾವು ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಮೊದಲಿಗೆ ದೇಹವನ್ನು ದಂಡಿಸಬೇಕು. ಅಂದರೆ ವ್ಯಾಯಾಮ ಮಾಡುವುದು, ವಾಕಿಂಗ್ ಮಾಡುವುದು, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗುವುದು, ಹೆಂಡತಿ ಮಕ್ಕಳೊಂದಿಗೆ ದೇವಸ್ಥಾನ ಅಥವಾ ಯಾವುದಾದರೂ ಪ್ರವಾಸಿ ತಾಣಗಳಿಗೆ ತೆರಳುವುದು, ಸಾರ್ವಜನಿಕ ಕಾರ್ಯಕ್ರಮಗಳು, ಬಂಧುಬಳಗದವರೊಂದಿಗೆ ಸೇರಿ ಒಂದಷ್ಟು ಸಮಯ ಕಳೆಯುವುದು, ಮನೋರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು, ಚೆನ್ನಾಗಿ ನಿದ್ದೆ ಮಾಡುವುದು ಹೀಗೆ ತಮ್ಮ ಬಿಡುವಿನ ಸಮಯವನ್ನು ಕಳೆಯಬೇಕು.
ನಮ್ಮ ಆಹಾರದ ಕ್ರಮಗಳನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಮತ್ತು ಅವು ಸಮತೋಲನದಲ್ಲಿರುವಂತೆ ನೋಡಿಕೊಳ್ಳಬೇಕು. ಯಾವ್ಯಾವುದೋ ಸಮಯಕ್ಕೆ ಆಹಾರ ಸೇವಿಸುವ ಬದಲು ನಿರ್ದಿಷ್ಟ ಸಮಯವನ್ನು ಕಾಪಾಡಿಕೊಳ್ಳುವುದು ಅಗತ್ಯ. ಕೆಲವರು ಬೆಳಗ್ಗಿನ ಆಹಾರ ಸೇವನೆ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ತಮ್ಮೆಲ್ಲ ಕೆಲಸಗಳನ್ನು ಮುಗಿಸಿಕೊಂಡು ನಿಧಾನವಾಗಿ ಮನಸ್ಸು ಬಂದ ಸಮಯಕ್ಕೆ ಮಾಡಿ ಮುಗಿಸುತ್ತಾರೆ.
ಇದು ಆರೋಗ್ಯದ ದೃಷ್ಟಿಯಲ್ಲಿ ಮಾರಕ. ವೈದ್ಯರು ಹೇಳುವ ಪ್ರಕಾರ ಬೆಳಗ್ಗಿನ ಉಪಹಾರ ದೇಹದ ಆರೋಗ್ಯಕ್ಕೆ ಅತ್ಯಗತ್ಯ. ಅಲ್ಲದೆ ದಿನದ ಅತೀ ಮುಖ್ಯವಾದ ಆಹಾರವಂತೆ. ಹೀಗಾಗಿ ಯಾವುದೇ ಕಾರಣಕ್ಕೂ ಬೆಳಗ್ಗಿನ ಉಪಹಾರವನ್ನು ತಪ್ಪಿಸಿಕೊಳ್ಳುವುದು ಒಳ್ಳೆಯದಲ್ಲ.
ಸದಾ ಧ್ಯಾನಕ್ಕೆ ಆದ್ಯತೆ ನೀಡಬೇಕು
ಒಂದಷ್ಟು ಸಮಯವನ್ನು ಧ್ಯಾನ, ದೇವರ ದರ್ಶನ ಹೀಗೆ ಪ್ರಶಾಂತ ವಾತಾವರಣದಲ್ಲಿ ಕಳೆಯಬೇಕು. ವೈದ್ಯರ ಬಳಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯದ ಸಮಸ್ಯೆಗಳು ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಬೇಕು. ಬೇರೆಯವರ ವೈಯಕ್ತಿಕ ವಿಚಾರಗಳ ಬಗ್ಗೆ ಆಸ್ಥೆ ವಹಿಸದೆ ತಮ್ಮ ಪಾಡಿಗೆ ತಾವು ಇರುವುದನ್ನು ಕಲಿಯಬೇಕು. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬಾರದು. ಹೀಗೆ ಒಂದಷ್ಟು ವಿಚಾರಗಳಲ್ಲಿ ನಾವು ಎಚ್ಚರಿಕೆಯಿಂದ ಇದ್ದರೆ ಮಾನಸಿಕವಾಗಿ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ.
-
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications