ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳುವುದು ಹೇಗೆ..? ಇಲ್ಲಿದೆ ಸರಳ ಟಿಪ್ಸ್
ಬೇಸಿಗೆಯಲ್ಲಿ ಆರೋಗ್ಯದ ಜೊತೆಗೆ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಹೆಣ್ಣುಮಕ್ಕಳಿಗೆ ಸವಾಲ್ ಆಗಿದೆ. ಅದರಲ್ಲೂ ನಿತ್ಯವೂ ದುಡಿಮೆಗೆಂದು ಮನೆಯಿಂದ ಹೊರ ಹೋಗುವ ಮತ್ತು ಬಿಸಿಲಲ್ಲೇ ದುಡಿಮೆ ಮಾಡುವವರು ಕೆಲಸದ ಜತೆಗೆ ಸೌಂದರ್ಯದ ಕಡೆಗೂ ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಇಲ್ಲದೆ ಹೋದರೆ ಬಿಸಿಲಿನ ತಾಪ ಕೋಮಲ ತ್ವಚೆಯ ಅಂದಗೆಡಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಇವತ್ತಿನ ಪರಿಸ್ಥಿತಿಯಲ್ಲಿ ಮನೆಯಿಂದ ಎಷ್ಟೇ ಮೇಕಪ್ ಮಾಡಿ ಹೊರಟರೂ ಬಸ್ ಹಿಡಿದೋ, ವಾಹನದಲ್ಲೋ ತೆರಳಿ ಕಚೇರಿಗೆ ತಲುಪುವ ಹೊತ್ತಿಗೆ ಎಲ್ಲವೂ ಮಾಯವಾಗಿ ಇರಿಸು ಮುರಿಸಾಗುವಂತೆ ಮಾಡಿಬಿಡುತ್ತದೆ. ಅಷ್ಟೇ ಅಲ್ಲದೆ ಬೆವರು ಹೆಚ್ಚಾಗಿ ಬರುವುದರಿಂದ ದುರ್ವಾಸನೆಯೂ ವಾಕರಿಕೆ ತರಿಸಿಬಿಡುತ್ತದೆ. ಇಂತಹ ಸಂದರ್ಭಗಳಲ್ಲಿ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕೆಲವೊಂದು ಕ್ರಮಗಳನ್ನು ಮನೆಯಲ್ಲಿಯೇ ಮಾಡಿಕೊಳ್ಳುವುದು ಉತ್ತಮ.

ಸಮಯ ಸಿಕ್ಕಾಗ ತುಳಸಿ, ಬೇವಿನ ಫೇಸ್ ಪ್ಯಾಕ್ ಬಳಸಿ ನಂತರ ತಣ್ಣೀರಿನಿಂದ ಅಥವಾ ರೋಸ್ ವಾಟರ್ನಿಂದ ಮುಖ ತೊಳೆದುಕೊಳ್ಳಬೇಕು. ಇದು ಕೇವಲ ಚರ್ಮಕ್ಕೆ ಕಾಂತಿ ನೀಡುವುದಲ್ಲದೇ, ಮುಖದಲ್ಲಿ ರಕ್ತ ಸಂಚಾರಕ್ಕೂ ಸಹಾಯ ಮಾಡಲಿದೆ. ಇನ್ನು ಬಿಸಿಲಿನಲ್ಲಿ ಕೆಲಸ ಮಾಡುವ ಮಹಿಳೆಯರು ಸನ್ ಸ್ಕ್ರೀನ್ ಲೋಷನ್ ಹಚ್ಚುವುದನ್ನು ಮರೆಯಬಾರದು. ಇದು ಮಾರುಕಟ್ಟೆಯಲ್ಲಿ ಸುಲಭವಾಗಿಯೇ ದೊರೆಯಲಿದೆ. ಇದರ ಜತೆಗೆ ಮನೆಯಲ್ಲೇ ಹಣ್ಣುಗಳಿಂದ ಫೇಶಿಯಲ್ ಮಾಡಿಕೊಳ್ಳುವುದರಿಂದಲೂ ತ್ವಚೆಯ ನಿರ್ಜೀವ ಚರ್ಮ ಹೋಗಿ ಚರ್ಮ ಕಾಂತಿ ಹೆಚ್ಚಾಗುತ್ತದೆ.
ಕೂದಲು, ಉಗುರಿನತ್ತಲೂ ಎಚ್ಚರವಿರಲಿ
ದಿನವಿಡೀ ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳಲು ತಮ್ಮ ಹ್ಯಾಂಡ್ ಬ್ಯಾಗ್ ಗಳಲ್ಲಿ ಕೆಲ ಸೌಂದರ್ಯ ವರ್ದಕಗಳನ್ನು ಇಟ್ಟುಕೊಳ್ಳುವುದು ಸೂಕ್ತ. ತಮಗೆ ಸೂಕ್ತವಾದ ಪೌಡರ್ನ್ನು ಆಗಾಗ್ಗೆ ಹಚ್ಚುತ್ತಿರಬೇಕು. ಇದರಿಂದ ಧೂಳು ಮುಖದಲ್ಲಿ ತುಂಬಿಕೊಳ್ಳುವುದಿಲ್ಲ. ಮುಖದ ಜತೆಗೆ ಕೂದಲಿನ ಬಗ್ಗೆಯೂ ಆಸ್ಥೆ ವಹಿಸುವುದು ಅಗತ್ಯ. ಬಿಸಿಲಿನಲ್ಲಿ ಕೂದಲು ಉದುರುವಿಕೆ ಹೆಚ್ಚಿರುತ್ತದೆ. ಆದ್ದರಿಂದ ಕೂದಲನ್ನು ನೀಟಾಗಿ ಬಾಚಿ ಜಡೆ ಹೆಣೆಯುವುದು. ಒಳ್ಳೆಯದು.
ಸದಾ ಕೆಲಸದಲ್ಲಿ ನಿರತರಾಗಿರುವ ಮಹಿಳೆಯರಿಗೆ ಬೇಸಿಗೆಯಲ್ಲಿ ಉಗುರಿನ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಕಷ್ಟ ಕೆಲಸವೇ. ಅದರಲ್ಲೂ ಮನೆಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುವ ಮಹಿಳೆಯರು ಕೆಲಸಗಳನ್ನು ನಿರ್ವಹಿಸುವಾಗ ಉಗುರು ಕಳಾಹೀನವಾಗುವುದು ಇದ್ದೇ ಇರುತ್ತದೆ. ಮಹಿಳೆಯರು ತಮ್ಮ ಉಗುರಿನ ಸೌಂದರ್ಯವನ್ನು ಉಳಿಸಬೇಕೆಂದರೆ ಪಾತ್ರೆ ತೊಳೆಯುವ ವೇಳೆ ಹಾಗೂ ಬಟ್ಟೆ ಒಗೆಯುವ ವೇಳೆ ಕೈಗೆ ಗ್ಲೌಸ್ ಧರಿಸುವುದರಿಂದ ಉಗುರು ಹಾಳಾಗುವುದು, ಉಗುರಿನಲ್ಲಿ ಕೊಳೆ ಕೂರುವುದನ್ನು ತಪ್ಪಿಸಬಹುದು.

ಶರೀರವನ್ನು ಶುಚಿಯಾಗಿಟ್ಟುಕೊಳ್ಳಿ
ಉಗುರಿನ ಸೌಂದರ್ಯವನ್ನು ಉಗುರು ಸುತ್ತಿನ ಚರ್ಮ ಮತ್ತಷ್ಟು ಹಾಳು ಮಾಡುತ್ತದೆ. ಒಂದು ವೇಳೆ ಪೆಡಿಕ್ಯೂರ್ ಅಥವಾ ಮೆನಿಕ್ಯೂರ್ ಮಾಡಿಸುವವರು ಉಗುರು ಸುತ್ತಿನ ಚರ್ಮವನ್ನು ಕೀಳಿಸುವುದನ್ನು ಬಿಟ್ಟುಬಿಡಿ. ಇಂತಹ ಚರ್ಮವನ್ನು ಕತ್ತರಿಸುವುದಕ್ಕಿಂತ ರಿಮೂವರ್ ಜೆಟ್ ಸಹಾಯದಿಂದ ತೆಗೆಯುವುದು ಒಳ್ಳೆಯದು. ಉಗುರನ್ನು ಕತ್ತರಿಸುವಾಗ ಹೇಗೇಗೋ ಕತ್ತರಿಸದೆ ಕ್ರಮಬದ್ಧತೆಯಿಂದ ಕತ್ತರಿಸಿ. ಇದರಿಂದ ಆಕರ್ಷಕ ಕಾಣುವುದಲ್ಲದೆ, ಉಗುರಿನ ಬೆಳವಣಿಗೆಗೂ ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಶರೀರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ದೇಹ ದುರ್ಗಂಧ ಸೂಸದಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ. ನಮ್ಮ ಸೌಂದರ್ಯ, ಆಕರ್ಷಣೆ ಎಲ್ಲ ಇದ್ದರೂ ಶರೀರ ಬೀರುವ ದುರ್ಗಂಧದ ಮುಂದೆ ಅದೆಲ್ಲವೂ ಗೌಣವಾಗಿ ಬಿಡುತ್ತದೆ. ಬೇಸಿಗೆಯಲ್ಲಿ ಅತಿಯಾದ ಬೆವರು ಮುಜುಗರ ತರುತ್ತದೆ. ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರು ನೀಡುವ ಸಲಹೆಗಳನ್ನು ಅನುಸರಿಸಬೇಕು. ಹೆಚ್ಚಿನ ಜನರಿಗೆ ಕಂಕುಳಿನಿಂದಲೇ ದುರ್ವಾಸನೆ ಬರುತ್ತದೆ. ಕಾರಣ ಕಂಕುಳಲ್ಲಿ ಬೆಳೆಯುವ ಅನಗತ್ಯ ಕೂದಲುಗಳನ್ನು ತೆಗೆಯದಿರುವುದು. ಇದನ್ನು ಆಗಾಗ್ಗೆ ತೆಗೆದು ಸ್ವಚ್ಛಗೊಳಿಸುತ್ತಿರಬೇಕು.
ಹತ್ತಿ ಬಟ್ಟೆಗೆ ಆದ್ಯತೆ ನೀಡಿ
ಪ್ರತಿದಿನ ಕನಿಷ್ಟ ಎರಡು ಲೀಟರ್ನಷ್ಟು ನೀರನ್ನು ಕುಡಿಯಬೇಕು. ಸ್ನಾನ ಮಾಡುವಾಗ ಕಂಕುಳು, ಕಿವಿ, ಸೇರಿದಂತೆ ಇನ್ನಿತರ ಭಾಗಗಳನ್ನು ಚೆನ್ನಾಗಿ ಸೋಪು ಬಳಸಿ ತೊಳೆಯಬೇಕು. ವ್ಯಾಯಾಮ, ಮುಂಜಾನೆ ವಾಕಿಂಗ್ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಬಿಗಿಯಾದ ಉಡುಪುಗಳನ್ನು ಧರಿಸದೆ, ಶರೀರಕ್ಕೆ ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಬೇಕು. ಬೇರೆಯವರು ಬಳಸಿದ ಟವಲ್ ಬಳಸದೆ ಒಗೆದು ಒಣಗಿಸಿ ಬಳಸಬೇಕು. ಬೇರೆಯವರಿಗೆ ಅಸಹ್ಯ ಎನಿಸದ ಉತ್ತಮ ಸುವಾಸನೆ ಬೀರುವ ಸುಗಂಧ ದ್ರವ್ಯಗಳನ್ನು ಲೇಪಿಸಿಕೊಳ್ಳಬೇಕು. ಅವು ಶರೀರಕ್ಕೆ ಒಗ್ಗುವಂತಿದ್ದರೆ ಮಾತ್ರ ಬಳಸಬೇಕು. ವೈದ್ಯರ ಸಲಹೆಯೂ ಅಗತ್ಯವಾಗಿರುತ್ತದೆ.
ಹಲ್ಲಿನ ಅಥವಾ ಒಸಡುಗಳ ತೊಂದರೆಯಿದ್ದರೆ ದಂತ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನು ಮಾಡಿಸಿಕೊಳ್ಳುವುದು ಅಗತ್ಯ. ಹಲ್ಲಿನ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಕೆಲವು ಚುಯಿಂಗಮ್ ಅಗೆಯುವುದರಿಂದ ಬಾಯಿಯಲ್ಲಿ ಜೊಳ್ಳುರಸದೊಂದಿಗೆ ದುರ್ವಾಸನೆ ಸಮಸ್ಯೆ ಕಡಿಮೆಯಾಗಲು ಸಾಧ್ಯವಾಗುತ್ತದೆ. ಬಾಯಿಯಲ್ಲಿ ಲವಂಗದ ಚೂರುಗಳನ್ನು ಚಪ್ಪರಿಸುವುದರಿಂದ ದುರ್ವಾಸನೆ ತಡೆಯಬಹುದು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications