ಮಜಾ ಎನಿಸಿರುವ ಸಿಗರೇಟ್ ಜೀವನವನ್ನೇ ವಜಾ ಮಾಡುತ್ತೆ: ಈ ಚಟ ಬಿಡುವುದು ಹೇಗೆ?
ಈಗಿನ ಯುವಜನತೆಗೆ ಸಿಗರೇಟ್ ಸೇದುವುದು ಫ್ಯಾಷನ್ ಆಗಿದೆ.. ಒಬ್ಬೊಬ್ಬರು ಒಂದೊಂದು ಕಾರಣಗಳನ್ನು ಮುಂದಿಟ್ಟುಕೊಂಡು ಸಿಗರೇಟ್ ಸೇದುವುದು ನಮಗೆ ಕಾಣಿಸುತ್ತದೆ. ಸಿಗರೇಟ್ ಬೆಲೆ ಗಗನಕ್ಕೇರಿದರೂ ಅದನ್ನು ಖರೀದಿ ಮಾಡುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಎಲ್ಲರಿಗೂ ಸಿಗರೇಟ್ ಸೇವನೆ ಆರೋಗ್ಯಕ್ಕೆ ಮಾರಕ ಎಂಬುದು ಗೊತ್ತಿದ್ದರೂ ಅದನ್ನು ಮಾತ್ರ ಬಿಡುತ್ತಿಲ್ಲ.
ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಈ ಚಟಕ್ಕೆ ಹೆಚ್ಚಾಗಿ ಒಳಗಾಗುತ್ತಿರುವುದು ಒಂದಡೆಯಾದರೆ, ಯುವತಿಯರು ಚಟಕ್ಕೆ ಬೀಳುತ್ತಿರುವುದು ಮತ್ತೊಂದು ದುರಂತವಾಗಿದೆ. ಮೊದ ಮೊದಲು ಅದು ಖಷಿಗಾಗಿಯೇ ಆರಂಭವಾದರೂ ಕ್ರಮೇಣ ಚಟವಾಗಿ ಪರಿವರ್ತನೆಗೊಳ್ಳುತ್ತದೆ. ಆ ನಂತರ ಸಿಗರೇಟ್ ಇಲ್ಲವೆಂದರೆ ಜಗತ್ತೇ ಶೂನ್ಯವಾಗಿ ಬಿಡುತ್ತದೆ. ಏಕೆಂದರೆ ಸಿಗರೇಟಿನಲ್ಲಿರುವ ನಿಕೋಟಿನ್ ಮತ್ತೆ ಮತ್ತೆ ಸೇದುವಂತೆ ಮಾಡಿ ಸಿಗರೇಟಿಗೆ ದಾಸರಾಗುವಂತೆ ಮಾಡಿಬಿಡುತ್ತದೆ.

ಸಿಗರೇಟ್ ನಿಂದ ಆರೋಗ್ಯಕ್ಕೂ ಒಳ್ಳೆಯದಾಗುವುದಿಲ್ಲ. ಜತೆಗೆ ಜೇಬಿಗೂ ಕತ್ತರಿ. ಈ ವಿಚಾರ ನಮಗೆಲ್ಲರಿಗೂ ಗೊತ್ತಿದ್ದರೂ ಮತ್ತೆ, ಮತ್ತೆ ಅದನ್ನೇ ಮಾಡುತ್ತಿದ್ದೇವೆ. ಈಗೀಗ ಸಿಗರೇಟ್ ಸೇದುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾನ್ಸರ್ ಕಾಣಿಸುತ್ತಿದೆ. ಇನ್ನು ಉಸಿರಾಟಕ್ಕೆ ಅಡಚಣೆ, ಕೆಮ್ಮು, ಕಫ, ಶ್ವಾಸಕೋಸದ ತೊಂದರೆ, ದೈಹಿಕ ಅಸಮರ್ಥತೆ ಹೀಗೆ ಹತ್ತು ಹಲವು ಸಮಸ್ಯೆಗಳಿವೆ ಎಂಬುದು ಗೊತ್ತಿದ್ದರೂ ಅದನ್ನು ಬಿಟ್ಟು ಬದುಕಲು ಸಾಧ್ಯವಾಗುತ್ತಿಲ್ಲ.
ಸಿಗರೇಟ್ ಬಿಡುವುದು ಅಷ್ಟೊಂದು ಕಷ್ಟವೇ?
ಯೌವನದಲ್ಲಿ ಏನೇ ಮಾಡಿದರೂ ಅದು ಮಜಾವಾಗಿ ಕಾಣಿಸುತ್ತದೆ. ಆದರೆ ವಯಸ್ಸಾಗುತ್ತಾ ಅದರ ಪರಿಣಾಮಗಳು ನಮ್ಮ ಆರೋಗ್ಯದಲ್ಲಿ ಗೋಚರಿಸುತ್ತದೆ. ಆರೋಗ್ಯ ಕೈಕೊಟ್ಟು ಆಸ್ಪತ್ರೆ ಸೇರಿದಾಗ ಸಿಗರೇಟ್ನ ಕರಾಮತ್ತು ಗೊತ್ತಾಗಿ ಬಿಡುತ್ತದೆ. ನಮ್ಮ ಕಾಯಿಲೆಯಲ್ಲಿ ಅದರ ಪಾತ್ರ ಎಷ್ಟಿದೆ ಎಂಬುದು ಅರಿವಿಗೆ ಬರುತ್ತದೆ. ಆದರೆ ಅದರಿಂದ ಹೊರ ಬರಲಾರದೆ ಒದ್ದಾಡುತ್ತಾರೆ.
ಬಹಳಷ್ಟು ಜನರು ಸಿಗರೇಟ್ ಬಿಟ್ಟೇ ಬಿಡುತ್ತೇವೆ ಎಂದು ಒಂದೆರಡು ದಿನ ಕಷ್ಟಪಟ್ಟು ಕಣ್ಮುಚ್ಚಿ ಕುಳಿತು ಕೊಳ್ಳುತ್ತಾರೆಯಾದರೂ ಮತ್ತೆ ಮನಸ್ಸು ತಡೆಯದೆ ಸೇದಿ ಬಿಡುತ್ತಾರೆ. ಇಷ್ಟಕ್ಕೂ ಸಿಗರೇಟ್ ಬಿಡುವುದು ಅಷ್ಟೊಂದು ಕಷ್ಟವೇ? ಮನಸ್ಸು ದೃಢವಾಗಿದ್ದರೆ ಯಾವುದೂ ಕಷ್ಟವಲ್ಲ ಅಂತಹದೊಂದು ಸಂಕಲ್ಪವನ್ನು ಮಾಡಬೇಕಷ್ಟೆ. ಇವತ್ತಿನ ದಿನಗಳಲ್ಲಿ ಬೀಡಿ ಸಿಗರೇಟ್ ದುಬಾರಿಯಾಗಿದೆ. ಅದನ್ನು ಬಿಟ್ಟರೆ ಆರೋಗ್ಯ ಮಾತ್ರವಲ್ಲ, ಆರ್ಥಿಕವಾಗಿಯೂ ಸದೃಢರಾಗಲು ಸಾಧ್ಯವಿದೆ. ದುಶ್ಚಟಗಳನ್ನು ಕಲಿಯುವುದು ಸುಲಭ ಆದರೆ ಅದನ್ನು ತ್ಯಜಿಸುವುದು ಕಷ್ಟದ ಕೆಲಸ. ಆದರೆ ಗಟ್ಟಿ ಮನಸ್ಸು ಮಾಡಿ ಅದಕ್ಕೆ ತಿಲಾಂಜಲಿ ಹೇಳುವ ಪ್ರಯತ್ನ ಮಾಡಬೇಕಷ್ಟೆ.

ತಜ್ಞರು ಹೇಳುವ ಆ ಸಂಗತಿ ಏನು?
ತಜ್ಞರು ಹೇಳುವ ಪ್ರಕಾರ ಧೂಮಪಾನ ಮಾಡುವುದನ್ನು ಬಿಟ್ಟರೆ, ಆ ನಂತರ ವಿಟಮಿನ್- ಇ ಮಾತ್ರೆಗಳನ್ನು ಒಂದಷ್ಟು ಪ್ರಮಾಣದಲ್ಲಿ ಸೇವಿಸಬೇಕಂತೆ. ಇದರಿಂದ ಹೃದಯದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವಂತೆ. ಈ ಸಂಗತಿಯನ್ನು ಅಮೆರಿಕದಲ್ಲಿರುವ ಓಹಿಯೋ ಸ್ಟೇಟ್ ಯೂನಿವರ್ಸಿಟಿ ಸಂಶೋಧಕರು ತಿಳಿಸಿದ್ದಾರೆ.
ಇದರ ಜೊತೆಗೆ ಇ ವಿಟಮಿನ್ ನಿಂದ ಹೃದಯಕ್ಕೆ ಯಾವುದೇ ಸಮಸ್ಯೆ ಉಂಟಾಗದು. ರಕ್ತ ಪ್ರಸಾರ ಸುಗಮವಾಗಿರುತ್ತದೆ ಎಂದು ಅಧ್ಯಯನ ಸಂದರ್ಭದಲ್ಲಿ ಗಮನಿಸಿದ್ದಾರೆ. ಅಲ್ಲದೇ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಶೇ. 19ರಷ್ಟು ಕಡಿಮೆಯಾಗುತ್ತದೆಯಂತೆ. ಒಂದು ವಾರದಷ್ಟು ಸಮಯ ಧೂಮಪಾನ ಮಾಡದೆ ಇದ್ದವರಲ್ಲಿ ಶೇ.2.8 ರಷ್ಟು ರಕ್ತ ಪ್ರಸಾರದ ವ್ಯವಸ್ಥೆ ಸುಗಮವಾಗಿರುತ್ತಂತೆ. ವಿಟಮಿನ್ 'ಇ' ಯನ್ನು ಗಾಮ ಟೋಕೋಫೆರಾಲ್ ರೂಪದಲ್ಲಿ ಸೇವಿಸಿದರಲ್ಲಿ ಶೇ.1.5ರಷ್ಟು ವೃದ್ಧಿ ಕಂಡು ಬಂದ ಸಂಗತಿಯನ್ನು ವಿಜ್ಞಾನಿಗಳು ಹೊರಗೆಡವಿದ್ದಾರೆ.
ಧೂಮಪಾನ ಆರೋಗ್ಯಕ್ಕೆ ಹಾನಿಕರ
ಇವತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು ಎಂಬ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರೂ, ಬೀಡಿ ಸಿಗರೇಟಿನ ಬೆಲೆ ಗಗನಕ್ಕೇರಿದ್ದರೂ ಅದರ ಬಳಕೆ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಅದನ್ನು ಬಿಟ್ಟು ಬದುಕುವವರು ಕಡಿಮೆಯೇ. ಅದರಲ್ಲೂ ಯುವಕರಂತು ಸಿಗರೇಟ್ ಹಿಡಿದುಕೊಂಡು ಕುಳಿತುಕೊಳ್ಳುತ್ತಿರುವ ದೃಶ್ಯಗಳು ಟೀ ಅಂಗಡಿಗಳಲ್ಲಿ ಕಂಡು ಬರುತ್ತಿವೆ.
ಸಿಗರೇಟಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟು ತೊಂದರೆಯಿದೆ ಎಂದು ಗೊತ್ತಿದ್ದರೂ ಅದನ್ನೇ ಮಾಡುವುದು ಕಂಡು ಬರುತ್ತಿದೆ. ಹೀಗಾಗಿ ಮೊದಲಿಗೆ ಯುವ ಜನತೆ ಸಿಗರೇಟಿನ ಚಟಕ್ಕೆ ಬೀಳದಂತೆ ತಡೆಯಬೇಕಾಗಿದೆ. ಸಿಗರೇಟಿನಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕೆಲಸವೂ ನಡೆಯಬೇಕಾಗಿದೆ. ಇಲ್ಲದೆ ಹೋದರೆ ಯುವ ಜನತೆ ಸಿಗರೇಟಿನಿಂದಲೇ ಜೀವನವನ್ನು ಹಾಳುಮಾಡಿಕೊಳ್ಳುವುದರಲ್ಲಿ ಎರಡು ಮಾತಿಲ್ಲ.
-
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications