ಊಟ ಬಲ್ಲವನಿಗೆ ರೋಗವಿಲ್ಲ..ವಯಸ್ಸಾದಂತೆ ಆಹಾರ ಕ್ರಮ ಹೇಗಿರಬೇಕು?
ನಾವು ಆರೋಗ್ಯವಾಗಿರಲು ಮತ್ತು ನಮ್ಮ ಆರೋಗ್ಯ ಹದಗೆಡಲು ಆಹಾರವೇ ಪ್ರಮುಖ ಕಾರಣವಾಗಿದೆ. ಅದಕ್ಕೆ ಹಿರಿಯರು ಹೇಳಿರುವುದು ಊಟ ಬಲ್ಲವನಿಗೆ ರೋಗವಿಲ್ಲವೆಂದು. ಈ ಗಾದೆ ಮಾತಿನ ಅರ್ಥ ಅರಿತು ನಮ್ಮ ಆಹಾರ ಕ್ರಮವನ್ನು ಅಳವಡಿಕೊಂಡರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಆದರೆ ನಾವು ಬಾಯಿ ರುಚಿಯಿರುವ ಆಹಾರಕ್ಕೆ ಆದ್ಯತೆ ನೀಡುತ್ತಿದ್ದೇವೆಯೇ ಹೊರತು ಆರೋಗ್ಯಕಾರಿ ಆಹಾರಕ್ಕಲ್ಲ. ಹೀಗಾಗಿಯೇ ಆರೋಗ್ಯದ ಸಮಸ್ಯೆಗಳು ನಮ್ಮನ್ನು ಹೆಚ್ಚೆಚ್ಚು ಬಾಧಿಸುತ್ತಿವೆ.
ಇತ್ತೀಚೆಗೆ ನಮ್ಮೆಲ್ಲ ಆಹಾರ ಪದಾರ್ಥಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ರಾಸಾಯನಿಕಗಳು ಸೇರುತ್ತಿವೆ. ಮತ್ತು ಅದನ್ನೇ ಹೆಚ್ಚು ಹೆಚ್ಚಾಗಿ ಬಳಸುತ್ತಿದ್ದೇವೆ. ಹೀಗಾಗಿ ಆರೋಗ್ಯದ ಸಮಸ್ಯೆಗಳು ನಮಗೆ ಗೊತ್ತಿಲ್ಲದಂತೆ ನಮ್ಮನ್ನು ಕಾಡುತ್ತಿವೆ. ನಾವೆಲ್ಲರೂ ಆರೋಗ್ಯವಾಗಿದ್ದೇವೆ ಎಂದು ಹೇಳಿಕೊಳ್ಳಲಾರದ ಸ್ಥಿತಿಯಲ್ಲಿದ್ದೇವೆ. ಯಾವಾಗ ಯಾವ ಕಾಯಿಲೆ ನಮ್ಮನ್ನು ಅಟಕಾಯಿಸಿಕೊಳ್ಳುತ್ತೋ ಗೊತ್ತಾಗದಂತಾಗಿದೆ.

ಮಗುವಿನಿಂದ ಹಿಡಿದು ವೃದ್ಧರವರೆಗೆ ನಮ್ಮ ವಯಸ್ಸಿಗೆ ತಕ್ಕಂತೆ ಆಹಾರ ಕ್ರಮಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನಗಳನ್ನು ಮಾಡಬೇಕು. ಅದರ ಜತೆಗೆ ಯಾವ ಆಹಾರ ನಮ್ಮ ಆರೋಗ್ಯಕ್ಕೆ ಹೊಂದಿಕೊಳ್ಳುತ್ತದೆಯೋ ಅಂತಹದಕ್ಕೆ ಆದ್ಯತೆ ನೀಡಬೇಕು. ಬದಲಿಗೆ ಕೇವಲ ಬಾಯಿ ಚಪಲಕ್ಕೆ ಸಿಕ್ಕಿದನೆಲ್ಲ ತಿಂದು ಸಮಸ್ಯೆ ಸೃಷ್ಠಿಸಿಕೊಳ್ಳಬಾರದು. ವಯಸ್ಸಾದಂತೆಲ್ಲ ಹಸಿವು ಮತ್ತು ಜೀರ್ಣಶಕ್ತಿ ಕಡಿಮೆಯಾಗುವುದರಿಂದ ವಯಸ್ಸಾದವರು ತಮ್ಮ ವಯಸ್ಸಿಗೆ ತಕ್ಕಂತೆ ಜೀರ್ಣ ಶಕ್ತಿಯಿರುವಂತಹ ಪ್ರೊಟೀನ್, ಕೊಬ್ಬು, ಖನಿಜಾಂಶ ಹಾಗೂ ಜೀವಸತ್ವಗಳುಳ್ಳ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಈ ಆಹಾರದ ಪ್ರಮಾಣವು ದಿನಕ್ಕೆ 300 ರಿಂದ 330 ಗ್ರಾಂ ಇದ್ದರೆ ಒಳಿತು.
ನಾರಿನ ಅಂಶವಿಲ್ಲದ ಸಂಸ್ಕರಿಸಿ ಆಹಾರ ಒಳ್ಳೆಯದಲ್ಲ
ನಾರಿನ ಅಂಶವಿಲ್ಲದ ಸಂಸ್ಕರಿಸಿದ ಆಹಾರ ಪದಾರ್ಥ, ಮೈದಾದಿಂದ ತಯಾರಿಸಿದ ಬ್ರೆಡ್, ಬನ್, ನೂಡಲ್ಸ್, ನಾನ್ ಮುಂತಾದ ಆಹಾರಗಳನ್ನು ಸೇವಿಸುವುದು ಒಳ್ಳೆಯದಲ್ಲ. ಮಸಾಲೆ ಪದಾರ್ಥಗಳನ್ನು ಕಡಿಮೆ ಮಾಡಿ, ಮದ್ಯಪಾನ, ಧೂಮಪಾನವನ್ನು ತ್ಯಜಿಸಿ, ಕೊಲೆಸ್ಟ್ರಾಲ್ ಹೆಚ್ಚಿಸುವ ಬೆಣ್ಣೆ, ತುಪ್ಪ, ವನಸ್ಪತಿ, ಬಜ್ಜಿ, ಬೋಂಡ, ಪೂರಿ, ಹಪ್ಪಳ ಮೊದಲಾದ ಎಣ್ಣೆಯಲ್ಲಿ ಕರಿದ ಪದಾರ್ಥಗಳ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ. ಅತಿಯಾದ ಕಾಫಿ, ಟೀ ಸೇವನೆ ಒಳ್ಳೆಯದಲ್ಲ. ಆಹಾರ ಸೇವನೆಯಲ್ಲಿ ಉಪ್ಪಿನ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡಬೇಕು.

ಜೀರ್ಣಶಕ್ತಿ ಉಂಟಾಗಲು ಕಡಿಮೆ ಆಹಾರವನ್ನು ಹೆಚ್ಚು ಬಾರಿ ತಿನ್ನುವುದನ್ನು ರೂಢಿಸಿಕೊಳ್ಳಿ ಇವುಗಳನ್ನೆಲ್ಲ ತಮ್ಮ ನಿತ್ಯದ ಜೀವನದಲ್ಲಿ ರೂಢಿಸಿಕೊಂಡರೆ ವಯಸ್ಸಾದವರು ಆಹಾರದಿಂದ ಉಂಟಾಗುವ ಸಮಸ್ಯೆಯಿಂದ ದೂರವಾಗಿ ನೆಮ್ಮದಿ ಮತ್ತು ಆರೋಗ್ಯಯುತ ಸಂಧ್ಯಾಕಾಲವನ್ನು ಕಳೆಯಲು ಸಾಧ್ಯವಾಗುತ್ತದೆ. ಯೌವನದಲ್ಲಿ ದೇಹ ಹೆಚ್ಚು ಕ್ರಿಯಾಶೀಲವಾಗಿರುವುದರಿಂದ ಎಲ್ಲವನ್ನು ಅರಗಿಸಿಕೊಳ್ಳುವ ಶಕ್ತಿ ಇರುತ್ತದೆ.
ದ್ರವ ಆಹಾರ ಪದಾರ್ಥಕ್ಕೆ ಆದ್ಯತೆ ನೀಡಿ
ವಯಸ್ಸು ಹೆಚ್ಚಾದಂತೆಲ್ಲ ದೇಹ ಅಂದುಕೊಂಡಂತೆ ಸ್ಪಂದಿಸುವುದಿಲ್ಲ. ಜತೆಗೆ ಸೇವಿಸಿದ ಆಹಾರವೂ ಜೀರ್ಣವಾಗದೆ ಸಮಸ್ಯೆ ತಂದೊಡ್ಡ ಬಹುದು. ಇಂತಹ ಸಂದರ್ಭದಲ್ಲಿ ವ್ಯಾಯಾಮ, ವಾಕಿಂಗ್ ಮಾಡುವುದನ್ನು ರೂಢಿಸಿಕೊಳ್ಳಬೇಕು. ದ್ರವ ಆಹಾರ ಪದಾರ್ಥಗಳಿಗೆ ಆದ್ಯತೆ ನೀಡಬೇಕು. ಸಾಮಾನ್ಯವಾಗಿ ದಿನಕ್ಕೆ ಮೂರು ಬಾರಿ ಊಟ ಮಾಡುತ್ತೇವೆ. ಆದರೆ ವಯಸ್ಸಾದವರು ಕಡಿಮೆ ಪ್ರಮಾಣದಲ್ಲಿ ಹಲವು ಬಾರಿ ಊಟ ಮಾಡುವುದು ಒಳ್ಳೆಯದು. ಆಹಾರದಲ್ಲಿ ಅಕ್ಕಿ, ರಾಗಿ, ಗೋಧಿ, ಜೋಳ ಮೊದಲಾದ ಧಾನ್ಯಗಳ ಬಳಕೆ ಒಳ್ಳೆಯದು.

ನಿತ್ಯ ಉಪಯೋಗಿಸುವ ಆಹಾರದಲ್ಲಿ ಪ್ರೊಟೀನ್ಯುಕ್ತ ಬೇಳೆಕಾಳುಗಳು ಇರುವಂತೆ ನೋಡಿಕೊಳ್ಳಬೇಕು. ಇವುಗಳನ್ನು ಕನಿಷ್ಟ 60ಗ್ರಾಂನಷ್ಟಾದರೂ ಸೇವಿಸಬೇಕು. ಇದರೊಂದಿಗೆ ದಿನಕ್ಕೆ ಕನಿಷ್ಟ 2 ರಿಂದ 3 ಲೋಟದಷ್ಟು ಹಾಲು ಅಥವಾ ಮೊಸರು ಸೇವಿಸಬೇಕು. ಮೊಳಕೆ ಕಾಳುಗಳು, ಮೊಟ್ಟೆಯ ಬಿಳಿಭಾಗ, ಮೀನು, ಜತೆಗೆ ಸೊಪ್ಪು ಸೇರಿದಂತೆ ಗೆಡ್ಡೆಗೆಣಸು ತರಕಾರಿ ಸೇವಿಸುವುದು ಅಗತ್ಯ.
ಅಜೀರ್ಣ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ
ಮಲವಿಸರ್ಜನೆ ಸಲೀಸಾಗಿ ನಡೆಯಲು ಅನುಕೂಲವಾಗುವಂತೆ ನಾರಿನ ಅಂಶವಿರುವ ಹಣ್ಣು, ತರಕಾರಿ, ಉಂಡೆಕಾಳುಗಳನ್ನು ಆಹಾರದಲ್ಲಿ ಸೇರಿಸಬೇಕು. ನಾರಿನ ಅಂಶವು ರಕ್ತದ ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡುತ್ತದೆ. ಜತೆಗೆ ದೊಡ್ಡ ಕರುಳಿನ ಕ್ಯಾನ್ಸರನ್ನು ತಡೆಗಟ್ಟುವ ಗುಣವನ್ನು ಹೊಂದಿದೆ. ಇನ್ನು ಹಲ್ಲುಗಳು ಇಲ್ಲದಿದ್ದಲ್ಲಿ ಮೆದುವಾದ ಮತ್ತು ಚೆನ್ನಾಗಿ ಬೆಂದಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಜತೆಗೆ ಸುಲಭವಾಗಿ ಜೀರ್ಣವಾಗುವಂತಹ ಆಹಾರಪದಾರ್ಥಗಳಿಗೆ ಆದ್ಯತೆ ನೀಡಬೇಕಾಗುತ್ತದೆ. ವಯಸ್ಸಾದಂತೆ ಮೂಳೆಗಳ ಸವೆತ ಮತ್ತು ದೌರ್ಬಲ್ಯ ಕಾಣಿಸಿಕೊಳ್ಳುತ್ತದೆ.
ಇದು ಕ್ಯಾಲ್ಸಿಯಂನಿಂದ ಆಗುವ ತೊಂದರೆಯಾಗಿದ್ದು, ಕ್ಯಾಲ್ಸಿಯಂ ಅಂಶ ಹೆಚ್ಚಾಗಲು ಹಾಲಿನ ಉತ್ಪನ್ನ, ರಾಗಿ, ಮೀನು, ಸೊಪ್ಪುಗಳನ್ನು ಸೇವಿಸುವುದು ಉತ್ತಮ. ಇನ್ನು ಆರೋಗ್ಯದ ದೃಷ್ಠಿಯಿಂದ ಕೆಲವೊಂದು ಆಹಾರ ಪದಾರ್ಥದ ಸೇವನೆ ಕಡಿಮೆ ಮಾಡುವುದು, ಇನ್ನು ಕೆಲವೊಂದನ್ನು ವರ್ಜಿಸುವುದು ಕೂಡ ಅನಿವಾರ್ಯ. ಕೊಬ್ಬು, ಎಣ್ಣೆ ಮತ್ತು ಸಕ್ಕರೆ ಸೇವನೆ ಕಡಿಮೆ ಮಾಡಬೇಕು ಕಾರಣ ಇವುಗಳಿಂದ ಅಜೀರ್ಣ ಸಮಸ್ಯೆ ಉದ್ಭವಿಸುವ ಸಾಧ್ಯತೆ ಹೆಚ್ಚರುತ್ತದೆ.
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications