Papaya Benefits: ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಹೊಳೆಯುವ ತ್ವಚೆ, ಆರೋಗ್ಯಕರ ಹೃದಯ ನಿಮ್ಮದು

ಹಣ್ಣುಗಳು ನಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಬಹಳ ಸಹಾಯಕವಾಗಿವೆ. ಹಣ್ಣುಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಪ್ರತಿಯೊಂದೂ ವಿಭಿನ್ನ ರೀತಿಯಲ್ಲಿ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಪಪ್ಪಾಯಿ ವರ್ಷವಿಡೀ ಕಡಿಮೆ ಬೆಲೆಗೆ ಲಭ್ಯವಿರುವ ಒಂದು ಹಣ್ಣು.

ಈ ಪಪ್ಪಾಯಿಗಳು ಕಣ್ಮನ ಸೆಳೆಯುವ ಬಣ್ಣ, ಸಿಹಿಯಾದ ರುಚಿ ಮತ್ತು ವಿಶಿಷ್ಟ ಸುವಾಸನೆಯನ್ನು ಹೊಂದಿವೆ. ಪಪ್ಪಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಕೆ ಜೊತೆಗೆ ಫೈಬರ್ ಸಮೃದ್ಧವಾಗಿದೆ. ಮುಖ್ಯವಾಗಿ ಇದರಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ. ಈ ರೀತಿಯ ಪಪ್ಪಾಯಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಅದು ದೇಹಕ್ಕೆ ವಿವಿಧ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ನೋಡೋಣ.

Papaya benefits eating papaya benefits on an empty stomach in morning in kannada

ತೂಕ ಇಳಿಕೆ

ಪಪ್ಪಾಯ ಹಸಿವನ್ನು ನೀಗಿಸುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಬಟ್ಟಲು ಪಪ್ಪಾಯಿ ತಿಂದರೆ ಅದರಲ್ಲಿ ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅಂಶವಿರುವುದರಿಂದ ಅದು ಹಸಿವನ್ನು ನಿಯಂತ್ರಿಸುತ್ತದೆ. ದೀರ್ಘಕಾಲದವರೆಗೆ ಹಸಿವಾಗುವುದನ್ನು ತಡೆಯುತ್ತದೆ. ಅಲ್ಲದೆ ತೂಕ ಇಳಿಸಲು ಸಹಾಯ ಮಾಡುತ್ತದೆ.

ಹೃದಯಕ್ಕೆ ಒಳ್ಳೆಯದು

ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ವಿಟಮಿನ್‌ಗಳು ಸಮೃದ್ಧವಾಗಿವೆ. ಇವು ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಈ ಪೋಷಕಾಂಶಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತವೆ, ರಕ್ತ ಪರಿಚಲನೆ ಸುಧಾರಿಸುತ್ತವೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಮುಖ್ಯವಾಗಿ ಪಪ್ಪಾಯಿಯಲ್ಲಿ ಸಕ್ಕರೆ ಕಡಿಮೆ ಮತ್ತು ಫೈಬರ್ ಅಧಿಕವಾಗಿರುವುದರಿಂದ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.

ಹೊಳೆಯುವ ಚರ್ಮ

ತ್ವಚೆ ಕಾಂತಿಯುತವಾಗಿರಲು ಪ್ರತಿದಿನ ಪಪ್ಪಾಯಿ ಸೇವಿಸುವುದು ಒಳ್ಳೆಯದು. ಏಕೆಂದರೆ ಪಪ್ಪಾಯಿಯಲ್ಲಿರುವ ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳು ಸತ್ತ ಜೀವಕೋಶಗಳನ್ನು ತೆಗೆದುಹಾಕಲು, ಚರ್ಮದ ಸುಕ್ಕುಗಳನ್ನು ತಡೆಯಲು ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಕರುಳಿನ ಆರೋಗ್ಯ, ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರ ಪರಿಣಾಮವಾಗಿ ಚರ್ಮದ ಕಾಂತಿ ಹೆಚ್ಚಾಗುತ್ತದೆ.

ಮಲಬದ್ಧತೆ ನಿವಾರಣೆ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದಾಗುವ ಒಂದು ಪ್ರಮುಖ ಪ್ರಯೋಜನವೆಂದರೆ ಅದು ಕರುಳಿನ ಚಲನೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಇದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ಫೈಬರ್ ಅಂಶವಿರುವುದು. ಆದ್ದರಿಂದ ನೀವು ಮಲಬದ್ಧತೆಯಿಂದ ಬಳಲುತ್ತಿದ್ದರೆ, ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನಿರಿ. ಇದು ಉತ್ತಮ ಬದಲಾವಣೆಯನ್ನು ತರುತ್ತದೆ.

ಕ್ಯಾನ್ಸರ್‌ಗೆ ರಾಮಬಾಣ

ಪಪ್ಪಾಯದಲ್ಲಿ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಿದೆ. ಇವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು, ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಪ್ಪಾಯ ಮಹಿಳೆಯರ ಆರೋಗ್ಯವನ್ನು ಸುಧಾರಿಸುವಲ್ಲಿ ವಿಶೇಷವಾಗಿ ಸಹಾಯಕವಾಗಿದೆ. ಇದರಲ್ಲಿರುವ ಕ್ಯಾರೋಟಿನ್ ಗರ್ಭಾಶಯದ ಆರೋಗ್ಯವನ್ನು ಸುಧಾರಿಸುತ್ತದೆ. ಮುಟ್ಟಿನ ಚಕ್ರವನ್ನು ನಿಯಂತ್ರಿಸುತ್ತದೆ ಮತ್ತು ಮುಟ್ಟಿನ ಸೆಳೆತವನ್ನು ಕಡಿಮೆ ಮಾಡುತ್ತದೆ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಏಕೈಕ ಉದ್ದೇಶ. ಯಾವುದೇ ಮಾಹಿತಿ ಕಾರ್ಯರೂಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+