Blood Pressure: ರಕ್ತದೊತ್ತಡದಿಂದ ಬಳಲುವವರು ಯಾವ್ಯಾವ ಆಹಾರ ಸೇವಿಸಬೇಕು?
ಬಹಳಷ್ಟು ಕಾಯಿಲೆಗಳು ಬರುವುದು ನಮ್ಮ ಆಹಾರ ಕ್ರಮಗಳಿಂದಲೇ.. ಹೀಗಾಗಿ ಯಾವುದಾದರೊಂದು ಕಾಯಿಲೆ ಬಾಧಿಸಿದಾಗ ಅದಕ್ಕೆ ಚಿಕಿತ್ಸೆ ಪಡೆಯುವುದರೊಂದಿಗೆ ವೈದ್ಯರು ನೀಡುವ ಆಹಾರ ಸೇವನೆಯ ಸಲಹೆಗಳನ್ನು ಅಗತ್ಯವಾಗಿ ಪಾಲಿಸಬೇಕಾಗುತ್ತದೆ. ಹಲವು ಕಾಯಿಲೆಗಳನ್ನು ನಮ್ಮ ಆಹಾರ ಕ್ರಮಗಳಿಂದಲೇ ನಿಯಂತ್ರಣಕ್ಕೆ ತರುವುದು ಅನಿವಾರ್ಯವಾಗಿದೆ.
ಮಧುಮೇಹ ಇರುವವರು ಹೇಗೆ ಆಹಾರ ಸೇವನೆಯಲ್ಲಿ ಪಥ್ಯಕ್ರಮವನ್ನು ಅನುಸರಿಸಬೇಕೋ ಹಾಗೆಯೇ ಅಧಿಕ ರಕ್ತದೊತ್ತಡ (ಹೈಪರ್ ಟೆನ್ಷನ್)ದಿಂದ ಬಳಲುತ್ತಿರುವವರು ಕೂಡ ವೈದ್ಯರು ನೀಡುವ ಔಷಧಿಯೊಂದಿಗೆ ದಿನನಿತ್ಯ ಸೇವಿಸುವ ಆಹಾರಗಳಲ್ಲಿಯೂ ನಿಗಾ ವಹಿಸುವುದು ಅಗತ್ಯವಾಗಿದೆ.

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಏನು ಮಾಡಬೇಕು? ದಿನ ನಿತ್ಯ ಸೇವಿಸುವ ಆಹಾರಗಳಲ್ಲಿ ಯಾವುದನ್ನು ಬಳಸಬೇಕು? ಯಾವುದನ್ನು ವರ್ಜಿಸಬೇಕು ಎಂಬುದರ ಬಗ್ಗೆ ವೈದ್ಯರು ಒಂದಷ್ಟು ಸಲಹೆಗಳನ್ನು ನೀಡಿದ್ದು, ಅದರಂತೆ ಕಟ್ಟು ನಿಟ್ಟಾಗಿ ಪಾಲಿಸಿದ್ದೇ ಆದರೆ ರೋಗವನ್ನು ನಿಯಂತ್ರಿಸಿಕೊಳ್ಳಬಹುದಾಗಿದೆ.
ತಾಜಾ ಆಹಾರಕ್ಕೆ ಆದ್ಯತೆ ನೀಡಿ
ವೈದ್ಯರ ಪ್ರಕಾರ ಮನೆಯಲ್ಲಿಯೇ ತಯಾರಿಸಿದ ತಾಜಾ ಆಹಾರವನ್ನೇ ಸೇವಿಸುವುದು ಒಳ್ಳೆಯದು. ಆದರೆ ಸೇವಿಸುವ ಆಹಾರದಲ್ಲಿ ಅಕ್ಕಿ, ರಾಗಿ, ಗೋಧಿ, ಜೋಳದಂತಹ ಧಾನ್ಯಗಳಿಗೆ ಪ್ರಾಧಾನ್ಯತೆಯಿರಲಿ. ಆದರೆ ಮಿತವಾಗಿರಬೇಕು. ದಿನಕ್ಕೆ 180 ಗ್ರಾಂ.ನಿಂದ 240ಗ್ರಾಂ.ನಷ್ಟಿದ್ದರೆ ಸಾಕು. ನಾರಿನಾಂಶ, ಜೀವಸತ್ವ, ಖನಿಜಾಂಶವುಳ್ಳ ಹಣ್ಣು ತರಕಾರಿಗಳನ್ನು ದಿನಕ್ಕೆ ಮುನ್ನೂರರಿಂದ ಐನೂರು ಗ್ರಾಂನಷ್ಟು ಸೇವಿಸಬಹುದು. ಕ್ಯಾಲ್ಸಿಯಂ ಹೊಂದಿದ ಕಡಿಮೆ ಕೊಬ್ಬಿನಂಶವುಳ್ಳ ಹಾಲು, ಮೊಸರು ಚೀಸ್ ಸೇವಿಸಬಹುದು. ಇನ್ನು ಕೆನೆತೆಗೆದ 200ರಿಂದ 300ಮಿ.ಲೀ ಹಾಲು ಮತ್ತು ಮೊಸರನ್ನು ಸೇವಿಸಬಹುದಾಗಿದೆ.

ಸುಮಾರು 50ರಿಂದ 100 ಗ್ರಾಂನಷ್ಟು ಚರ್ಮ ತೆಗೆದ ಕೋಳಿ ಮಾಂಸ ಮೀನು, ಮೊಟ್ಟೆಯ ಬಿಳಿಭಾಗವನ್ನು ಮಾಂಸಹಾರಿಗಳು ಸೇವಿಸಬಹುದು. ಕೊಬ್ಬಿಲ್ಲದ ಮಾಂಸವನ್ನು ಸೇವಿಸಬಹುದು. ಆದರೆ ಮಾಂಸವನ್ನು ಅಪರೂಪಕ್ಕೆ ಸೇವಿಸುವುದು ಒಳ್ಳೆಯದು. ಮೆಗ್ನೀಷಿಯಂ, ಪೊಟ್ಯಾಷಿಯಂ ಹಾಗೂ ನಾರಿನ ಅಂಶವನ್ನು ಹೊಂದಿರುವ ಕಡ್ಲೆಕಾಯಿ, ಬಾದಾಮಿ ಮೊದಲಾದವುಗಳನ್ನು ವಾರಕ್ಕೆ ೪೫ಗ್ರಾಂ.ನಷ್ಟು ಸೇವಿಸಿದರೆ ಸಾಕು. ಬಾಯಿ ರುಚಿಗೆ ಅಧಿಕ ಪ್ರಮಾಣದಲ್ಲಿ ಸೇವಿಸುವುದು ಒಳ್ಳೆಯದಲ್ಲ.
ಬೇಳೆಯ ಸೂಪ್, ಎಳನೀರು ಒಳ್ಳೆಯದು
ಹಣ್ಣು, ತರಕಾರಿ, ಬೇಳೆಯ ಸೂಪ್, ಎಳನೀರನ್ನು ಸೇವಿಸುವುದು ಒಳ್ಳೆಯದು. ಉಪ್ಪು ಸೇರಿಸಿದ ಬೆಣ್ಣೆ ತ್ಯಜಿಸಿ, ಉಪ್ಪು ಬೆರೆಸದ ಬೆಣ್ಣೆಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಬಹುದು. ಇನ್ನು ಅಡುಗೆಗೆ ಉಪ್ಪು ಹಾಕುವ ಬದಲಿಗೆ ಊಟ ಮಾಡುವಾಗ ಅಲ್ಪ ಪ್ರಮಾಣದಲ್ಲಿ ಉಪ್ಪನ್ನು ಹಾಕಿಕೊಳ್ಳುವುದು ಒಳ್ಳೆಯ ಅಭ್ಯಾಸ.
ಕೆಲವರಿಗೆ ಮೇಲುಪ್ಪು ಹಾಕಿಕೊಳ್ಳುವ ಅಭ್ಯಾಸವಿರುತ್ತದೆ. ಅಂತಹವರು ಅದನ್ನು ಬಿಟ್ಟು ಬಿಡಬೇಕು. ಕೊಬ್ಬಿನ ಅಂಶ ಅಧಿಕ ಪ್ರಮಾಣದಲ್ಲಿರುವ ಎಣ್ಣೆಗಳನ್ನು ವರ್ಜಿಸಬೇಕು. ಕೊಲೆಸ್ಟ್ರಾಲ್ ಕಡಿಮೆಯಿರುವ ಎಣ್ಣೆಯನ್ನು 2ರಿಂದ 3 ಟೀ ಚಮಚೆಯಷ್ಟು ಬಳಸುವುದು ಒಳ್ಳೆಯದು. ಕರಿದ ತಿಂಡಿಗಳ ಸೇವನೆಯನ್ನು ಕಡಿಮೆ ಮಾಡಬೇಕು. ಸಾಸ್, ಮಸಾಲ, ಚಾಟ್ ಸೇರಿದಂತೆ ಸಿದ್ಧ ಮಸಾಲೆಗಳನ್ನು ಸೇವಿಸುವುದು ಒಳ್ಳೆಯದಲ್ಲ. ಆಹಾರದಲ್ಲಿ ಹುಳಿ ಅಂಶಕ್ಕಾಗಿ ನಿಂಬೆಹಣ್ಣು, ವಿನಿಗರ್, ಹುಣಸೆ, ಮಾವಿನ ತುರಿಯನ್ನು ಬಳಸಬಹುದು.
ಎಲ್ಲವನ್ನು ಸಮಾಧಾನವಾಗಿ ಸ್ವೀಕರಿಸಿ
ಉಪ್ಪಿನಿಂದ ಸಂಸ್ಕರಿಸಿದ ಚಿಪ್ಸ್, ಹಪ್ಪಳ, ಉಪ್ಪಿನಕಾಯಿ ಮೊದಲಾದ ಪದಾರ್ಥಗಳಿಂದ ದೂರವಿರುವುದು ಒಳ್ಳೆಯದು. ಅಡುಗೆ ಸೋಡಾ ಸೇರಿದಂತೆ ಸೋಡಾವಾಟರ್, ಪೆಪ್ಸಿ, ಕೋಲಾದಂತಹ ಜ್ಯೂಸ್ಗಳನ್ನು ಉಪಯೋಗಿಸದೆ ತಾಜಾ ಹಣ್ಣಿನ ಜ್ಯೂಸ್ಗಳಿಗೆ ಆದ್ಯತೆ ನೀಡಬೇಕು. ಹೀಗೆ ಒಂದಷ್ಟು ಆಹಾರಗಳ ಸೇವನೆಯಲ್ಲಿ ಮಾರ್ಪಾಡು ಮತ್ತು ಎಚ್ಚರಿಕೆಯನ್ನು ವಹಿಸಿದ್ದೇ ಆದರೆ ಅಧಿಕ ರಕ್ತದೊತ್ತದ ನಿಯಂತ್ರಣ ಸಾಧ್ಯವಾಗುತ್ತದೆ.
ಕಾಯಿಲೆಗಳು ಬಂದ ಬಳಿಕ ಚಿಕಿತ್ಸೆ ನೀಡುವುದು ಇದ್ದೇ ಇದೆ. ಆದರೆ ಅವು ಬಾರದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ನಾವು ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳುವ ಮೂಲಕ ಮನಸ್ಸನ್ನು ಹಗುರಗೊಳಿಸಬೇಕು. ಎಲ್ಲವನ್ನು ಸಮಾಧಾನವಾಗಿ ಸ್ವೀಕರಿಸುವ, ತಾಳ್ಮೆಯಿಂದ ವರ್ತಿಸಬೇಕು. ಆಗ ಆದಷ್ಟು ಮಟ್ಟಿಗೆ ರಕ್ತದೊತ್ತಡ ಹತೋಟಿ ತರಲು ಸಾಧ್ಯವಾಗಲಿದೆ ಎಂಬುದನ್ನು ಮರೆಯಬಾರದು.
-
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications